ಮಡಿಕೇರಿ, ಜ. ೧೭: ಮಡಿಕೇರಿ ವಿಧಾನಸಭಾ ಕ್ಷೇತ್ರದ ಮಹಿಳಾ ಕಾಂಗ್ರೆಸ್ ಬ್ಲಾಕ್ ಅಧ್ಯಕ್ಷರುಗಳ ನೂತನ ಪಟ್ಟಿಯನ್ನು ಬಿಡುಗಡೆ ಮಾಡಲಾಗಿದೆ.
ಮಡಿಕೇರಿ ಬ್ಲಾಕ್ ಅಧ್ಯಕ್ಷರಾಗಿ ಕೊಂಪುಳಿರ ಇಂದಿರಾ ರಾಮಚಂದ್ರ, ನಗರಾಧ್ಯಕ್ಷರಾಗಿ ಶಶಿಕಲಾ ಭಗವತಿ ನಗರ, ಸೋಮವಾರಪೇಟೆ ಬ್ಲಾಕ್ ಅಧ್ಯಕ್ಷರಾಗಿ ಜಾನಕಿ ವೆಂಕಟೇಶ್ ಚೌಡ್ಲು, ನಗರಾಧ್ಯಕ್ಷರಾಗಿ ಶುಭ ಸೋಮವಾರಪೇಟೆ, ಕುಶಾಲನಗರ ಬ್ಲಾಕ್ ಅಧ್ಯಕ್ಷರಾಗಿ ಸವಿತಾ ಸುರೇಶ್ ಶಿರಂಗಾಲ ಹಾಗೂ ನಗರಾಧ್ಯಕ್ಷರಾಗಿ ಸಂಗೀತ ರವಿಕುಮಾರ್ ಆಯ್ಕೆಯಾಗಿದ್ದಾರೆ.
ಕ್ಷೇತ್ರದ ಶಾಸಕ ಡಾ. ಮಂತರ್ ಗೌಡ, ಕಾಂಗ್ರೆಸ್ ಜಿಲ್ಲಾಧ್ಯಕ್ಷ ಧರ್ಮಜ ಉತ್ತಪ್ಪ ಹಾಗೂ ಮೂರು ಬ್ಲಾಕ್ ಅಧ್ಯಕ್ಷರುಗಳೊಂದಿಗೆ ಚರ್ಚಿಸಿ, ರಾಜ್ಯ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಸೌಮ್ಯ ರೆಡ್ಡಿಯವರ ಒಪ್ಪಿಗೆ ಮೇರೆಗೆ ನೂತನ ಅಧ್ಯಕ್ಷರುಗಳನ್ನು ನೇಮಕ ಮಾಡಲಾಗಿದೆ.
ಪಕ್ಷದ ಬಲವರ್ಧನೆಗೆ ಆದ್ಯತೆ ನೀಡಲು ಸೂಚಿಸಲಾಗಿದೆ ಎಂದು ಮಹಿಳಾ ಕಾಂಗ್ರೆಸ್ ಜಿಲ್ಲಾಧ್ಯಕ್ಷೆ ಪುಷ್ಪಲತಾ ಜಿ.ಆರ್. ತಿಳಿಸಿದರು.
ಈ ಸಂದರ್ಭ ಸೋಮವಾರಪೇಟೆ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸತೀಶ್, ಗ್ಯಾರಂಟಿ ಅನುಷ್ಠಾನ ಸಮಿತಿಯ ಅಧ್ಯಕ್ಷ ಕಾಂತರಾಜ್, ಪ್ರಮುಖರಾದ ವಿನೋದ್, ರುಬೀನಾ ಎಂ.ಎ ಮತ್ತಿತರರು ಉಪಸ್ಥಿತರಿದ್ದರು.