ಕೂಡಿಗೆ, ಜ. ೧೭: ಕೂಡಿಗೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಕೂಡಿಗೆ ಕ್ಲಸ್ಟರ್ ಮಟ್ಟದ ಕಲಿಕಾ ಹಬ್ಬ ಶಾಲಾ ಸಭಾಂಗಣದಲ್ಲಿ ಜರುಗಿತು.

ಕರ್ನಾಟಕ ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ರಾಜ್ಯ ಪ್ರಧಾನ ಕಾರ್ಯದರ್ಶಿ ಹೆಚ್. ಎಸ್. ಚೇತನ್ ಕಾರ್ಯಕ್ರಮ ಉದ್ಘಾಟಿಸಿ ನಂತರ ಮಾತನಾಡಿ, ಇಂತಹ ಚಟುವಟಿಕೆಗಳು ಮಕ್ಕಳ ಕ್ರಿಯಾಶೀಲ ಕಲಿಕೆಗೆ ಸಹಕಾರಿ ಎಂದರು.

ಕ್ಷೇತ್ರ ಸಮನ್ವಯಾಧಿಕಾರಿ ಎಂ.ವಿ. ಮಂಜೇಶ್, ಕಾರ್ಯಕ್ರಮದ ಬಗ್ಗೆ ಪ್ರಾಸ್ತಾವಿಕ ನುಡಿಗಳನ್ನಾಡುತ್ತಾ ಕಲಿಕಾ ಹಬ್ಬ ಸರಕಾರಿ ಶಾಲಾ ಮಕ್ಕಳ ಕಲಿಕಾ ಗುಣಮಟ್ಟವನ್ನು ಪರಸ್ಪರ ವಿನಿಮಯ ಮಾಡಿಕೊಳ್ಳಲು ವೇದಿಕೆಯಾಗಿದೆ ಎಂದು ಅಭಿಪ್ರಾಯ ವ್ಯಕ್ತಪಡಿಸಿದರು.

ಈ ಸಂದರ್ಭದಲ್ಲಿ ಗ್ರಾಮ ಪಂಚಾಯಿತಿ ಸದಸ್ಯ ಚಂದ್ರು ಧರಣಿ, ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಜಿಲ್ಲಾಧ್ಯಕ್ಷ ಕೆ.ಎಸ್. ಪ್ರಸನ್ನ ಕುಮಾರ್ ಸೋಮವಾರಪೇಟೆ ತಾಲೂಕು ಅಧ್ಯಕ್ಷ ಬಸವರಾಜ್, ಶಿಕ್ಷಕರಾದ ಎಸ್.ಎ.ಯೋಗೇಶ್, ಪ್ರೇಮಕುಮಾರ್ ಟಿ.ಜಿ, ಶಿವಕುಮಾರ್, ಸೀಗೆಹೊಸೂರು ಹಾಲು ಉತ್ಪಾದಕರ ಸಹಕಾರ ಸಂಘದ ಕಾರ್ಯದರ್ಶಿ ಬಸವರಾಜು, ಶಾಲೆಯ ಮುಖ್ಯ ಶಿಕ್ಷಕಿ ತಾರಾಮಣಿ, ಶಾಂತಕುಮಾರ ಸೇರಿದಂತೆ ಇನ್ನಿತರರು ಹಾಜರಿದ್ದರು.