ಮುಳ್ಳೂರು, ಜ. ೧೮: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದಿ

್ಧ ಯೋಜನೆ - ಬಿಸಿ ಟ್ರಸ್ಟ್ ಸೋಮವಾರಪೇಟೆ ನಂದಿಗುAದ ವಲಯದ ವತಿಯಿಂದ ಬೆಸೂರು-ಕೂಡ್ಲೂರು ಕಾರ್ಯಕ್ಷೇತ್ರದ ದೊಡ್ಡಭಂಡಾರ ಗ್ರಾಮದ ಶ್ರೀ ಮಲ್ಲೇಶ್ವರ ದೇವಸ್ಥಾನದಲ್ಲಿ ಸ್ವಚ್ಛತಾ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಯಿತು. ಸಂಘದ ಸದಸ್ಯರು ದೇವಸ್ಥಾನ ಮತ್ತು ದೇವಸ್ಥಾನ ಸುತ್ತಮುತ್ತ ಶ್ರಮದಾನದ ಮೂಲಕ ಸ್ವಚ್ಛಗೊಳಿಸಿದರು.

ಧರ್ಮಸ್ಥಳ ಗ್ರಾಮಾಭಿವೃದ್ಧಿ ಸಂಸ್ಥೆ ವತಿಯಿಂದ ನಡೆಯುವ ಕಾರ್ಯಕ್ರಮಗಳ ಕುರಿತು ಕೂಡ್ಲೂರು ಕಾರ್ಯಕ್ಷೇತ್ರದ ಸೇವಾ ಪ್ರತಿನಿಧಿ ಶಾರದಮ್ಮ ಮಾಹಿತಿ ನೀಡಿದರು. ಈ ಸಂದರ್ಭದಲ್ಲಿ ಗ್ರಾಮದ ಪ್ರಮುಖ ಮಂಜುನಾಥ್ ಮಾತನಾಡಿದರು.

ಸ್ವಚ್ಛತಾ ಕಾರ್ಯಕ್ರಮದಲ್ಲಿ ಪ್ರಮುಖರಾದ ಮಂಜುನಾಥ್, ಮಲ್ಲೇಗೌಡ, ಮಲ್ಲೇಶ್, ಗುರುರಾಜ್, ಗ್ರಾಮಸ್ಥರು, ಸ್ವಸಹಾಯ ಸಂಘದ ಸದಸ್ಯರು ಭಾಗವಹಿಸಿದ್ದರು.