ಚೆಯ್ಯಂಡಾಣೆ, ಜ. ೧೮: ಸ್ಥಳೀಯ ಸರಕಾರಿ ಮಾದರಿ ಪ್ರಾಥಮಿಕ ಶಾಲೆಗೆ ಬೆಂಗಳೂರಿನ ರೋಹನ್ ಫೌಂಡೇಶನ್ ವತಿಯಿಂದ ವಿದ್ಯಾರ್ಥಿಗಳಿಗೆ ಉಪಯೋಗವಾಗುವ ಕ್ರೀಡಾ ಸಾಮಗ್ರಿಗಳನ್ನು ಕೊಡುಗೆಯಾಗಿ ನೀಡಲಾಯಿತು. ರೋಹನ್ ಫೌಂಡೇಶನ್ ಕೊಡಗು ಜಿಲ್ಲಾ ಘಟಕದ ನಿರ್ದೇಶಕ ಹಾಗೂ ಕಾಫಿ ಬೆಳೆಗಾರರಾದ ಕೋಡಿರ ಟಿ. ರಾಬಿನ್ ಗಣಪತಿ ವಿದ್ಯಾರ್ಥಿಗಳಿಗೆ ಕ್ರೀಡಾ ಸಾಮಗ್ರಿ ಗಳನ್ನು ವಿತರಣೆ ಮಾಡಿದರು. ಈ ಸಂದರ್ಭದಲ್ಲಿ ನರಿಯಂದಡ ಗ್ರಾಮ ಪಂಚಾಯಿತಿ ಉಪಾಧ್ಯಕ್ಷ ಕೋಡಿರ ವಿನೋದ್ ನಾಣಯ್ಯ, ಶಾಲೆಯ ಪ್ರಬಾರ ಮುಖ್ಯ ಶಿಕ್ಷಕಿ ವಿಮಲಾ, ಎಸ್ ಡಿಎಂಸಿ ಸದಸ್ಯರು, ಶಿಕ್ಷಕ ವೃಂದ, ಪೋಷಕರು, ವಿದ್ಯಾರ್ಥಿಗಳು ಉಪಸ್ಥಿತರಿದ್ದರು.