ಮಡಿಕೇರಿಯ ನಿವಾಸಿ, ಬಾಬುಚಂದ್ರ ಉಳ್ಳಾಗಡ್ಡಿ (೭೬) ಅವರು ತಾ. ೧೭ ರಂದು ನಿಧನರಾದರು. ನಗರದ ಹಿರಿಯ ಏಲಕ್ಕಿ ವರ್ತಕರಾಗಿದ್ದ ಇವರು ಜಿಲ್ಲಾ ಚೇಂಬರ್ ಆಫ್ ಕಾಮರ್ಸ್, ಲಯನ್ಸ್ ಸಂಸ್ಥೆ, ಚೇಂಬರ್ ಆಫ್ ಕಾಮರ್ಸ್ ಸಂಕೀರ್ಣ ಟ್ರಸ್ಟ್ ಸೇರಿದಂತೆ ವಿವಿಧ ಸಂಘ ಸಂಸ್ಥೆಗಳಲ್ಲಿ ಪದಾಧಿಕಾರಿಯಾಗಿ ಸೇವೆ ಸಲ್ಲಿಸಿದ್ದರು. ಅಲ್ಲದೆ, ಜಿಲ್ಲಾ ವಾಣಿಜ್ಯೋದ್ಯಮಿಗಳ ಸಹಕಾರ ಸಂಘದ ಅಧ್ಯಕ್ಷರಾಗಿಯೂ ಸೇವೆ ಸಲ್ಲಿಸಿದ್ದರು.
ಮೃತರು ಪತ್ನಿ, ಇಬ್ಬರು ಪುತ್ರಿಯರನ್ನು ಅಗಲಿದ್ದಾರೆ. ಶಾಸಕ ಎ.ಎಸ್. ಪೊನ್ನಣ್ಣ, ರಾಜ್ಯ ಗ್ಯಾರಂಟಿ ಯೋಜನೆ ಸಮಿತಿಯ ಉಪಾಧ್ಯಕ್ಷ ಮೆಹರೋಜ್ ಖಾನ್ ಸೇರಿದಂತೆ ಹಲವಾರು ಪ್ರಮುಖರು, ಸಾರ್ವಜನಿಕರು ಅಂತಿಮ ದರ್ಶನ ಪಡೆದು ಸಂತಾಪ ವ್ಯಕ್ತಪಡಿಸಿದರು. ಜಿಲ್ಲಾ ಚೇಂಬರ್ ಆಫ್ ಕಾಮರ್ಸ್ ಅಧ್ಯಕ್ಷ ಬಿ.ಆರ್. ನಾಗೇಂದ್ರ ಪ್ರಸಾದ್, ಜಿಲ್ಲಾ ವಾಣಿಜ್ಯೋದ್ಯಮಿಗಳ ಸಂಘದ ಅಧ್ಯಕ್ಷ ಗಿರೀಶ್ ಗಣಪತಿ, ಸ್ಥಾಪಕಾಧ್ಯಕ್ಷ ಜಿ. ರಾಜೇಂದ್ರ, ಚೇಂಬರ್ ಆಫ್ ಕಾಮರ್ಸ್ ಸ್ಥಾಪಕ ಕಾರ್ಯದರ್ಶಿ ಟಿ.ಪಿ. ರಮೇಶ್, ಮಾಜಿ ಅಧ್ಯಕ್ಷ ಜಿ. ಚಿದ್ವಿಲಾಸ್, ಕೆ.ಎಂ. ಗಣೇಶ್, ಶ್ರೀಧರ್ ನೆಲ್ಲಿತ್ತಾಯ, ಮೊದಲಾದವರು ಸಂತಾಪ ವ್ಯಕ್ತಪಡಿಸಿದ್ದಾರೆ.