ಮಡಿಕೇರಿ, ಜ. ೧೮: ಮದೆನಾಡು ಬಿಜಿಎಸ್ ಶಾಲಾ ವಾರ್ಷಿಕೋತ್ಸವ ಸಮಾರಂಭ ಇತ್ತೀಚೆಗೆ ನಡೆಯಿತು. ಈ ಸಮಾರಂಭದ ಸಾನಿಧ್ಯವನ್ನು ಶ್ರೀ ಸೋಮೇಶ್ವರನಾಥ ಸ್ವಾಮೀಜಿ ಅವರು ವಹಿಸಿದ್ದರು.

ಸಮಾರಂಭದ ಉದ್ಘಾಟನಾ ಕಾರ್ಯಕ್ರಮವನ್ನು ಉಪವಿಭಾಗಾಧಿಕಾರಿ ನಿತಿನ್ ಚಕ್ಕಿ ಅವರು ನೆರವೇರಿಸಿದರು. ಸಮಾರಂಭದ ಅಧ್ಯಕ್ಷತೆಯನ್ನು ಮಡಿಕೇರಿ ತಾಲೂಕಿನ ತಹಶೀಲ್ದಾರ್ ಶ್ರೀಧರ್ ಆರ್ ವಹಿಸಿದ್ದರು. ಮುಖ್ಯ ಅತಿಥಿಗಳಾಗಿ ಮೂಡಾ ಅಧ್ಯಕ್ಷ ರಾಜೇಶ್ ಯಲ್ಲಪ್ಪ, ಪ್ರಮುಖರಾದ ಹುದೇರಿ ರಾಜೇಂದ್ರ ಅವರು ಭಾಗವಹಿಸಿದ್ದರು. ಸಂಸ್ಥೆಯ ಆಡಳಿತಾಧಿಕಾರಿಗಳಾದ ಸುಧಾಕರ್ ಎಚ್.ಎಂ ಹಾಗೂ ಸಂಸ್ಥೆಯ ಮೇಲ್ವಿಚಾರಕರಾದ ಸಚಿನ್ ಗೌಡ ಮತ್ತು ಶಿಕ್ಷಕರು ಹಾಜರಿದ್ದರು. ಕಾರ್ಯಕ್ರಮದ ನಿರೂಪಣೆಯನ್ನು ಸವಿತಾ ಹಾಗೂ ಜಯಶ್ರೀ ನೆರವೇರಿಸಿದರು. ವಂದನಾರ್ಪಣೆ ಕಾರ್ಯಕ್ರಮವನ್ನು ನಯನ ನೆರವೇರಿಸಿದರು. ಈ ಕಾರ್ಯಕ್ರಮದಲ್ಲಿ ಪೋಷಕರಿಗೆ ಹಾಗೂ ಗಣ್ಯರಿಗೆ ಸನ್ಮಾನಿಸಲಾಯಿತು. ಪೋಷಕರಿಗೆ ಬಹುಮಾನ ವಿತರಣೆ ಮಾಡಲಾಯಿತು. ಕಳೆದ ವರ್ಷ ಎಸ್.ಎಸ್.ಎಲ್.ಸಿ.ಯಲ್ಲಿ ಹೆಚ್ಚಿನ ಅಂಕಗಳಿಸಿದ ವಿದ್ಯಾರ್ಥಿಗಳಿಗೆ ಸನ್ಮಾನಿಸಲಾಯಿತು.