ಕೂಡಿಗೆ, ಜ. ೧೮: ರಾಷ್ಟಿçÃಯ ರಸ್ತೆ ಸುರಕ್ಷತಾ ಸಪ್ತಾಹ ಅಂಗವಾಗಿ ಜಿಲ್ಲಾ ಪ್ರಾದೇಶಿಕ ಸಾರಿಗೆ ಇಲಾಖೆ, ಜಿಲ್ಲಾ ಪೊಲೀಸ್ ಇಲಾಖೆ ಮತ್ತು ಕಾನೂನು ಸೇವೆಗಳ ಪ್ರಾಧಿಕಾರ ವತಿಯಿಂದ ಕಾನೂನು ಅರಿವು ಕಾರ್ಯಾಗಾರ ಕುಶಾಲನಗರ ಪಾಲಿಟೆಕ್ನಿಕ್ ಕಾಲೇಜು ಸಭಾಂಗಣದಲ್ಲಿ ನಡೆಯಿತು.
ಪೊಲೀಸ್ ಉಪ ಅಧೀಕ್ಷಕ ಚಂದ್ರಶೇಖರ್ ಅಧ್ಯಕ್ಷತೆ ವಹಿಸಿ ಮಾತನಾಡಿ, ರಸ್ತೆ ಸುರಕ್ಷತೆ ಹಾಗೂ ಸಂಚಾರಿ ಕಾನೂನುಗಳ ಬಗ್ಗೆ ವಿವರಿಸಿದರು.
ಕಾರ್ಯಕ್ರಮದಲ್ಲಿ ಪ್ರಾದೇಶಿಕ ಸಾರಿಗೆ ಅಧಿಕಾರಿ ಸತೀಶ್, ಸಾರಿಗೆ ನಿರೀಕ್ಷಕ ಪ್ರದೀಪ್, ಕಾನೂನು ಸೇವೆಗಳ ಪ್ರಾಧಿಕಾರದ ಮುಖ್ಯಸ್ಥರಾದ ಮಂಜುಳ, ಪುಷ್ಪಲತಾ, ಪಾಲಿಟೆಕ್ನಿಕ್ ಕಾಲೇಜಿನ ಪಭಾರ ಪ್ರಾಂಶುಪಾಲೆ ಆಶಾ ಕಾಮತ್, ಕುಶಾಲನಗರ ಸಂಚಾರಿ ಪೊಲೀಸ್ ಠಾಣೆ ಉಪ ನಿರೀಕ್ಷಕರಾದ ಗಣೇಶ್, ಶ್ರೀನಿವಾಸ್ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.