ಸೋಮವಾರಪೇಟೆ,ಜ.೧೯: ರಾಷ್ಟಿçÃಯ ಸ್ವಯಂ ಸೇವಕ ಸಂಘಕ್ಕೆ ೧೦೦ ವರ್ಷಗಳು ತುಂಬಿದ ಹಿನ್ನೆಲೆ ಹಿಂದೂ ಸಮಾಜದಲ್ಲಿ ಏಕತೆ, ಸಾಮರಸ್ಯ, ಸಾಮಾಜಿಕ ಪರಿವರ್ತನೆ, ಧಾರ್ಮಿಕ ಹಾಗೂ ದೇಶಭಕ್ತಿಯನ್ನು ಇನ್ನಷ್ಟು ಬಲಪಡಿಸುವ ನಿಟ್ಟಿನಲ್ಲಿ, ತಾಲೂಕು ಹಿಂದೂ ಸಂಗಮ ಆಯೋಜನಾ ಸಮಿತಿಯ ನೇತೃತ್ವದಲ್ಲಿ ತಾಲೂಕಿನ ೨೪ ಮಂಡಲಗಳಲ್ಲಿ ಹಿಂದೂ ಸಂಗಮ ಉತ್ಸವ ಆಯೋಜಿಸಲಾಗಿದೆ ಎಂದು ಸಮಿತಿಯ ಅಧ್ಯಕ್ಷ ಕೆ.ಟಿ. ಸನತ್ ತಿಳಿಸಿದರು.
ಸುದ್ದಿಗೋಷ್ಠಿಯಲ್ಲಿ ಮತನಾಡಿದ ಅವರು, ರಾಷ್ಟಿçÃಯ ಸ್ವಯಂ ಸೇವಕ ಸಂಘದ ೧೦೦ನೇ ವರ್ಷಾಚರಣೆಯ ಅಂಗವಾಗಿ ಸಮಾಜದಲ್ಲಿನ ಪ್ರಮುಖರುಗಳನ್ನು ಒಗ್ಗೂಡಿಸಿ, ನೂತನ ತಾಲೂಕು ಸಮಿತಿಯನ್ನು ರಚಿಸಲಾಗಿದೆ. ಈ ಸಮಿತಿಯ ನೇತೃತ್ವದಲ್ಲಿ ತಾಲೂಕಿನಲ್ಲಿನ ೨೪ ಮಂಡಲಗಳಲ್ಲಿಯೂ ಹಿಂದೂ ಸಂಗಮ ನಿರ್ವಹಣಾ ಸಮಿತಿಗಳನ್ನು ರಚಿಸಿಕೊಂಡು ಆಯಾಯ ಮಂಡಲಗಳಲ್ಲಿ ಕಾರ್ಯಕ್ರಮಗಳು ಹಾಗೂ ಧಾರ್ಮಿಕ ಸಭಾ ಕಾರ್ಯಕ್ರಮಗಳನ್ನು ಆಚರಿಸಲಾಗುವುದು ಎಂದರು. ಸಮಾಜದಲ್ಲಿನ ಎಲ್ಲಾ ಜನಾಂಗ ಬಾಂಧವರನ್ನು ಒಗ್ಗೂಡಿಸಿಕೊಂಡು ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುವ ಮೂಲಕ, ಹಿಂದೂ ಸಂಘಟನೆಗಳಿಗೆ ಬಲ ತುಂಬುವುದು, ಶಿಸ್ತು, ದೇಶಾಭಿಮಾನ, ಧೈರ್ಯ, ಪ್ರಾಮಾಣಿಕತೆಯಿಂದ ಕೂಡಿದ ಸಂಪನ್ಮೂಲ ವ್ಯಕ್ತಿಗಳ ನಿರ್ಮಾಣ ಮಾಡುವ ಮೂಲಕ ಸಮಾಜವನ್ನು ಸದೃಢಗೊಳಿಸುವ ಪ್ರಯತ್ನ ಮಾಡಲಾಗುತ್ತಿದೆ ಎಂದು ಹೇಳಿದರು.
ಸಮಾಜದಲ್ಲಿ ಸಾಮರÀಸ್ಯತೆಯ ಬದುಕನ್ನು ರೂಪಿಸುವುದು, ಕುಟುಂಬ ಪ್ರಬೋಧನ್, ಪರಿಸರ ಸಂರಕ್ಷಣೆ, ಸ್ವದೇಶಿ ಜೀವನ ಶೈಲಿ, ಸಮಾಜದಲ್ಲಿ ಸಾಮರಸ್ಯ, ನಾಗರಿಕ ಶಿಷ್ಟಾಚಾರಗಳನ್ನು ಮೈಗೂಡಿಸುವುದರೊಂದಿಗೆ, ಆರೋಗ್ಯ ಪೂರ್ಣ ಸಮಾಜ ನಿರ್ಮಾಣಕ್ಕೆ ಪ್ರೇರೇಪಿಸುವ ಕಾರ್ಯ ಈ ಆಚರಣೆಯ ಮೂಲಕ ಮಾಡಲಾಗುವುದು ಎಂದರು. ಪಟ್ಟಣದಲ್ಲಿ ಫೆ. ೧ರಂದು ಹಿಂದೂ ಸಂಗಮ ಕಾರ್ಯಕ್ರಮ ನಿಗದಿಯಾಗಿದ್ದು, ಅಂದು ಬೆಳಗ್ಗೆ ೯.೩೦ ಗಂಟೆಗೆ ಪಟ್ಟಣದ ಡಾ. ಬಿ.ಆರ್. ಅಂಬೇಡ್ಕರ್ ಪ್ರತಿಮೆಯ ಬಳಿಯಿಂದ ಶೋಭಾಯಾತ್ರೆ ಪ್ರಮುಖ ಬೀದಿಗಳಲ್ಲಿ ಸಾಗಿ, ಚನ್ನಬಸಪ್ಪ ಸಭಾಂಗಣದ ಸಮೀಪದ ಜಿ.ಎಂ.ಪಿ. ಶಾಲಾ ಮೈದಾನದಲ್ಲಿ ಸಮಾಪನಗೊಳ್ಳಲಿದೆ. ನಂತರ ೧೧.೩೦ಕ್ಕೆ ಧಾರ್ಮಿಕ ಸಭಾ ಕಾರ್ಯಕ್ರಮ ನಡೆಯಲಿದೆ. ಕಾರ್ಯಕ್ರಮದಲ್ಲಿ ಧರ್ಮ ಗುರುಗಳು ಸೇರಿದಂತೆ ವಿವಿಧ ಪ್ರಮುಖರು ಪಾಲ್ಗೊಳ್ಳಲಿದ್ದಾರೆ ಎಂದರು. ಗೋಷ್ಠಿಯಲ್ಲಿ ಸಮಿತಿಯ ಗೌರವಾಧ್ಯಕ್ಷ ಎಸ್.ಎಲ್. ಸೀತಾರಾಮ್, ಕಾರ್ಯದರ್ಶಿ ಎಸ್.ಎನ್. ಸೋಮಶೇಖರ್, ಸಮಿತಿ ಸದಸ್ಯರಾದ ಬನ್ನಳ್ಳಿ ಗೋಪಾಲ್, ತಾಲೂಕು ಸಂಯೋಜಕರಾದ ಬಿ.ಎ. ಭಾಸ್ಕರ್ ಉಪಸ್ಥಿತರಿದ್ದರು.