ನಾಪೋಕ್ಲು, ಜ. ೧೯: ಮೂರ್ನಾಡು ವಿದ್ಯಾಸಂಸ್ಥೆಯ ಪದವಿಪೂರ್ವ ಕಾಲೇಜಿನ ತ್ರೆಯಸ್ ರಾಷ್ಟçಮಟ್ಟದ ಗಣಿತ ಸ್ಪರ್ಧೆಯಲ್ಲಿ ೯ನೇ ರಾಂಕ್‌ಅನ್ನು ಪಡೆದುಕೊಳ್ಳುವುದರ ಮೂಲಕ ಸಾಧನೆಯನ್ನು ಮಾಡಿದ್ದಾರೆ.

ಕರ್ನಾಟಕ ಅಕಾಡೆಮಿ ಆಫ್ ಮ್ಯಾಥಮೆಟಿಕ್ಸ್ ನಡೆಸಿದ ಟ್ಯಾಲೆಂಟ್ ಸರ್ಚ್ ಪರೀಕ್ಷೆಯನ್ನು ಕಾಲೇಜಿನ ವಿಜ್ಞಾನ ವಿಭಾಗದ ಎಲ್ಲಾ ವಿದ್ಯಾರ್ಥಿಗಳು ಬರೆದಿದ್ದು, ಪ್ರಥಮ ವಿಜ್ಞಾನ ವಿಭಾಗದಲ್ಲಿ ಓದುತ್ತಿರುವ ತ್ರೆಯಸ್ ರಾಷ್ಟçಮಟ್ಟದಲ್ಲಿ ೯ನೇ ರಾಂಕ್‌ಅನ್ನು ಪಡೆದುಕೊಂಡಿದ್ದಾರೆ.

ಪ್ರಥಮ ವಿಜ್ಞಾನ ವಿಭಾಗದ ಮಹಮದ್ ಆಶಿಕ್ ರಾಜ್ಯಮಟ್ಟದಲ್ಲಿ ೬ನೇ ರ‍್ಯಾಂಕ್, ದ್ವಿತೀಯ ವಿಜ್ಞಾನ ವಿಭಾಗದ ಮಹಮ್ಮದ್ ಸಿನಾನ್ ರಾಜ್ಯಮಟ್ಟದಲ್ಲಿ ೧೦ನೇ ರ‍್ಯಂಕ್ ಹಾಗೂ ಪ್ರಥಮ ವಿಜ್ಞಾನ ವಿಭಾಗದ ರವಿ ತಾಲೂಕು ಮಟ್ಟದಲ್ಲಿ ೬ನೇ ರ‍್ಯಾಂಕ್ ಪಡೆದುಕೊಂಡಿದ್ದಾರೆ.

ವಿಜೇತ ವಿದ್ಯಾರ್ಥಿಗಳಿಗೆ ಮೂರ್ನಾಡು ವಿದ್ಯಾಸಂಸ್ಥೆಯ ಗೌರವ ಕಾರ್ಯದರ್ಶಿ ಪೆಮ್ಮುಡಿಯಂಡ ವೇಣು ಅಪ್ಪಣ್ಣ ಪ್ರಶಸ್ತಿ ಪತ್ರವನ್ನು ವಿತರಿಸಿದರು. ಈ ಸಂದರ್ಭದಲ್ಲಿ ಮೂರ್ನಾಡು ಪದವಿಪೂರ್ವ ಕಾಲೇಜಿನ ಪ್ರಾಂಶುಪಾಲೆ ದೇವಕಿ, ಉಪನ್ಯಾಸಕರು, ವಿದ್ಯಾರ್ಥಿಗಳು ಉಪಸ್ಥಿತರಿದ್ದರು.