ಮಡಿಕೇರಿ, ಜ. ೧೯: ಜಿಲ್ಲಾ ಉಸ್ತುವಾರಿ ಸಚಿವ ಎನ್.ಎಸ್.ಭೋಸರಾಜು ಅವರು ತಾ. ೨೦ ರಂದು(ಇAದು) ಕೊಡಗು ಜಿಲ್ಲಾ ಪ್ರವಾಸ ಕಾರ್ಯಕ್ರಮ ಹಮ್ಮಿಕೊಂಡಿದ್ದಾರೆ.
ಸಚಿವರು ಬೆಳಗ್ಗೆ ೯.೩೦ ಗಂಟೆಗೆ ನಗರದ ಸುದರ್ಶನ ಅತಿಥಿ ಗೃಹದಲ್ಲಿ ಮನರೇಗಾ ಕುರಿತು ಪತ್ರಿಕಾಗೋಷ್ಠಿ ನಡೆಸಲಿದ್ದಾರೆ. ನಂತರ ಬೆಳಿಗ್ಗೆ ೧೧ ಗಂಟೆಗೆ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಕೊಡಗು ಜಿಲ್ಲಾ ಯೋಜನಾ ಸಮಿತಿ ಸಭೆಯಲ್ಲಿ ಭಾಗವಹಿಸಲಿದ್ದಾರೆ.