ಸೋಮವಾರಪೇಟೆ, ಜ. ೧೯: ಒಂಟಿ ನಳಿಕೆ ಬಂದೂಕಿನಿAದ ಎದೆಯ ಭಾಗಕ್ಕೆ ಗುಂಡು ಹಾರಿಸಿಕೊಂಡು ಕೃಷಿಕರೋರ್ವರು ಆತ್ಮಹತ್ಯೆಗೆ ಶರಣಾಗಿರುವ ಘಟನೆ ತಾಲೂಕಿನ ತೋಳೂರುಶೆಟ್ಟಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ನಡ್ಲಕೊಪ್ಪದಲ್ಲಿ ನಡೆದಿದೆ.

ನಡ್ಲಕೊಪ್ಪದ ನಿವಾಸಿ ಕೃಷಿಕ ಚಾವಾಡಿಮನೆ ಸುಬ್ಬಯ್ಯ (೭೫) ಎಂಬವರೇ ಆತ್ಮಹತ್ಯೆಗೆ ಶರಣಾದವರು. ಕಳೆದ ಹಲವು ವರ್ಷಗಳಿಂದ ಆರೋಗ್ಯ ಸಮಸ್ಯೆ ಎದುರಿಸುತ್ತಿದ್ದ ಸುಬ್ಬಯ್ಯ ಅವರು, ಇಂದು ಬೆಳಗ್ಗೆ ೫ ಗಂಟೆ ಸುಮಾರಿಗೆ ತಮ್ಮ ಮನೆಯ ಪಕ್ಕದಲ್ಲಿರುವ ರಸ್ತೆಯಲ್ಲಿ ಗುಂಡು ಹಾರಿಸಿಕೊಂಡಿದ್ದಾರೆ.

ತಮಗೆ ಸೇರಿದ ಒಂಟಿ ನಳಿಕೆ ಬಂದೂಕಿನಿAದ ಎದೆಯ ಭಾಗಕ್ಕೆ ಗುಂಡು ಹಾರಿಸಿಕೊಂಡಿರುವ ಹಿನ್ನೆಲೆ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಬಂದೂಕು ಶಬ್ದ ಕೇಳಿ ಪತ್ನಿ ಗೌರಮ್ಮ ಅವರು ಸ್ಥಳಕ್ಕಾಗಮಿಸಿದ್ದು, ಅಷ್ಟರಲ್ಲಾಗಲೇ ಸಾವನ್ನಪ್ಪಿದ್ದರು ಎಂದು ಕುಟುಂಬಸ್ಥರು ತಿಳಿಸಿದ್ದಾರೆ.

ಮೃತ ಸುಬ್ಬಯ್ಯ ಅವರು ದೀರ್ಘ ಕಾಲದಿಂದ ಸೊಂಟ ಹಾಗೂ ಕಾಲು ನೋವಿನಿಂದ ಬಳಲುತ್ತಿದ್ದರು. ಅನೇಕ ಕಡೆಗಳಲ್ಲಿ ಚಿಕಿತ್ಸೆ ಪಡೆದಿದ್ದರೂ ಸಂಪೂರ್ಣ ಗುಣಮುಖರಾಗಿರಲಿಲ್ಲ. ಇದರಿಂದಾಗಿ ಜಿಗುಪ್ಸೆಗೊಂಡು ಗುಂಡು ಹಾರಿಸಿಕೊಂಡಿದ್ದಾರೆ ಎಂದು ಸಂಬAಧಿಕರು ತಿಳಿಸಿದ್ದು, ಘಟನಾ ಸ್ಥಳಕ್ಕೆ ಪೊಲೀಸರು ತೆರಳಿ ಮಹಜರು ನಡೆಸಿದ್ದಾರೆ.

ಮೃತದೇಹವನ್ನು ಮಡಿಕೇರಿಗೆ ಸಾಗಿಸಿ ಮರಣೋತ್ತರ ಪರೀಕ್ಷೆ ನಡೆಸಿದ ನಂತರ ವಾರಸುದಾರರಿಗೆ ಹಸ್ತಾಂತರಿಸಲಾಯಿತು. ಮೃತರು ಪತ್ನಿ ಸೇರಿದಂತೆ ಈರ್ವರು ಪುತ್ರರನ್ನು ಅಗಲಿದ್ದಾರೆ.