ಸುಂಟಿಕೊಪ್ಪ, ಜ. ೧೯: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಕಾನ್‌ಬೈಲ್ ಕಾರ್ಯಕ್ಷೇತ್ರದ ವಿವಿಧ ಸ್ವಸಹಾಯ ಸಂಘಗಳ ವತಿಯಿಂದ ಕಾನ್‌ಬೈಲ್ ಶ್ರೀ ರಾಮ ಮಂದಿರ ಹಾಗೂ ಆವರಣದಲ್ಲಿ ಬೆಳೆದು ನಿಂತಿದ್ದ ಕಾಡು ಗಿಡಗಂಟಿಗಳನ್ನು ಕಡಿದು ಸ್ವಚ್ಛಗೊಳಿಸುವ ಮೂಲಕ ಶ್ರಮದಾನ ನಡೆಸಲಾಯಿತು. ಒಕ್ಕೂಟದ ಉಪಾಧ್ಯಕ್ಷೆ ಗೀತಾ ಕಾರ್ಯದರ್ಶಿ ಪುಷ್ಪಲತಾ, ಮಾಜಿ ಅಧ್ಯಕ್ಷೆ ಖತೀಜ ಹಾಗೂ ಸೇವಾ ಪ್ರತಿನಿಧಿ ಯಶೋಧ ಬಸವರಾಜು ಶ್ರಮದಾನಕ್ಕೆ ಚಾಲನೆ ನೀಡಿದರು. ನಂತರ ಕಾನಬೈಲ್ ಒಕ್ಕೂಟ ವ್ಯಾಪ್ತಿಯ ಸ್ವಸಹಾಯ ಸಂಘಗಳಾದ ಜನನಿ, ಮೂಕಾಂಬಿಕಾ ಸಂಘದ ಸದಸ್ಯರು ಶ್ರಮದಾನದಲ್ಲಿ ಪಾಲ್ಗೊಂಡು ಶಾಲಾ ಆವರಣದಲ್ಲಿ ಬೆಳೆದು ನಿಂತಿದ್ದ ಕಾಡು ಗಿಡಗಂಟಿಗಳನ್ನು ಕಡಿದು ಸ್ವಚ್ಛಗೊಳಿಸಿದರು.