ಮಡಿಕೇರಿ, ಜ. ೨೧: ಜಾಮೀನು ಪಡೆದು ಪರಾರಿಯಾಗಿದ್ದ ಆರೋಪಿಯನ್ನು ಮಡಿಕೇರಿ ಗ್ರಾಮಾಂತರ ಪೊಲೀಸರು ಪತ್ತೆ ಹಚ್ಚಿ ಬಂಧಿಸಿದ್ದಾರೆ.
ಮಡಿಕೇರಿ ಸಮೀಪದ ಕಡÀಗದಾಳು ಗ್ರಾಮದಲ್ಲಿ ವಾಸವಿದ್ದ ಪಶ್ಚಿಮ ಬಂಗಾಳದ ಆನಂದಿ ಮಂಡಾಲ್ ಎಂಬಾತ ಇಬ್ಬರು ಮಕ್ಕಳಿಗೆ ಲೈಂಗಿಕ ಕಿರುಕುಳ ನೀಡಿ ಮಾನಭಂಗಕ್ಕೆ ಪ್ರಯತ್ನಪಟ್ಟ ಹಿನ್ನೆಲೆಯಲ್ಲಿ ಮಡಿಕೇರಿ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು ತಾ. ೨೧. ೪. ೨೦೨೦ ರಂದು ಆರೋಪಿಯನ್ನು ಬಂಧನ ಮಾಡಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು, ಅದೇ ವರ್ಷ ಆತ ಜಾಮೀನು ಪಡೆದು ಪಶ್ಚಿಮ ಬಂಗಾಳಕ್ಕೆ ಪರಾರಿಯಾಗಿದ್ದ. ಆತನ ಪತ್ತೆಗೆ ಪೊಲೀಸ್ ಸಿಬ್ಬಂದಿ ಪಶ್ಚಿಮ ಬಂಗಾಳಕ್ಕೆ ತೆರಳಿ ಸಾಕಷ್ಟು ಪ್ರಯತ್ನಪಟ್ಟಿದ್ದರೂ ಸಾಧ್ಯವಾಗಿರಲಿಲ್ಲ. ನ್ಯಾಯಾಲಯವು ಆರೋಪಿಗೆ ಪ್ರೊಕ್ಲಮೇಷನ್ ವಾರೆಂಟ್ ಹೊರಡಿಸಿದ್ದು ಅದರಂತೆ ಗ್ರಾಮಾಂತರ ಪೊಲೀಸ್ ಸಿಬ್ಬಂದಿ ರಮೇಶ್ ಹಾಗೂ ಕುಮಾರ್ ಇವರುಗಳು ಆರೋಪಿಯ ಪತ್ತೆಗೆ ಬಲೆ ಬೀಸಿ ಮಡಿಕೇರಿ ಸಮೀಪದ ಸಿಂಕೋನ ತೋಟದಿಂದ ಆತನನ್ನು ದಸ್ತಗಿರಿ ಮಾಡಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ.