ಮಡಿಕೇರಿ, ಜ. ೨೦:-ಮಡಿಕೇರಿ ನಗರಸಭೆ ವ್ಯಾಪ್ತಿಯಲ್ಲಿನ ಪ್ರಮುಖ ರಸ್ತೆಗಳಲ್ಲಿ ಹಾಗೂ ಸಾರ್ವಜನಿಕ ಸ್ಥಳಗಳಲ್ಲಿ ಬೀಡಾಡಿ ದನಗಳು ಓಡಾಡುತ್ತಿದ್ದು, ಇದರಿಂದ ವಾಹನ ಚಾಲಕರಿಗೆ ಹಾಗೂ ಸಾರ್ವಜನಿಕರಿಗೆ ತೊಂದರೆ ಉಂಟಾಗುತ್ತಿದೆ.

ಇದರಿAದ ರಸ್ತೆ ಅಪಘಾತಗಳು, ಜೀವಹಾನಿ ಹಾಗೂ ಆಸ್ತಿನಷ್ಟ ಸಂಭವಿಸುವ ಸಾಧ್ಯತೆ ಇದ್ದು, ಬೀಡಾಡಿ ದನಗಳಿಗೆ ಸಂಬAಧಿಸಿದ ವಾರಸುದಾರರು ದನ/ಹಸುಗಳನ್ನು ರಸ್ತೆ ಹಾಗೂ ಸಾರ್ವಜನಿಕ ಸ್ಥಳಗಳಲ್ಲಿ ಬಿಡುವುದನ್ನು ತಕ್ಷಣವೆ ನಿಲ್ಲಿಸುವಂತೆ ಸೂಚಿಸಲಾಗಿದೆ. ತಪ್ಪಿದಲ್ಲಿ ಸಂಬAಧಿಸಿದ ವಾರಿಸುದಾರರ ವಿರುದ್ಧ ಬಿಎನ್‌ಎಸ್ ೨೦೨೩ ಸೆಕ್ಷನ್ ೨೯೧ ಅಡಿ ಪ್ರಕರಣ ದಾಖಲಿಸಿ ಕಾನೂನು ಕ್ರಮ ಜರುಗಿಸಲಾಗುವುದು. ಸಾರ್ವಜನಿಕ ಸುರಕ್ಷಿತ ಹಾಗೂ ಶಾಂತಿ ಕಾಪಾಡುವ ದೃಷ್ಟಿಯಿಂದ ಈ ಪ್ರಕಟಣೆಯನ್ನು ಹೊರಡಿಸಲಾಗಿದೆ ಎಂದು ನಗರಸಭೆ ಪೌರಾಯುಕ್ತ ಎಚ್.ಆರ್.ರಮೇಶ್ ಅವರು ತಿಳಿಸಿದ್ದಾರೆ.