ಮುಳ್ಳೂರು, ಜ. ೨೦: ಸಮೀಪದ ಆಲೂರು-ಸಿದ್ದಾಪುರ ಗ್ರಾಮಸಭೆ ತಾ. ೨೨ ರಂದು (ನಾಳೆ) ಬೆಳಿಗ್ಗೆ ೧೧ ಗಂಟೆಗೆ ಗ್ರಾ.ಪಂ.ಅಧ್ಯಕ್ಷೆ ಮೀನಾಕ್ಷಿ ಅಧ್ಯಕ್ಷತೆಯಲ್ಲಿ ಆಲೂರುಸಿದ್ದಾಪುರ ಸಮುದಾಯ ಭವನದಲ್ಲಿ ನಡೆಯಲಿದೆ.
ಸಭೆಯ ನೋಡಲ್ ಅಧಿಕಾರಿಯಾಗಿ ಜಿಲ್ಲಾ ಕೋಳಿ ಸಾಕಾಣಿಕೆ ತರಬೇತಿ ಕೇಂದ್ರದ ಸಹಾಯಕ ನಿರ್ದೇಶಕ ನಾಗರಾಜ್ ಪಾಲ್ಗೊಳ್ಳಲಿದ್ದಾರೆ. ಗ್ರಾಮಸಭೆಯಲ್ಲಿ ವಿವಿಧ ಇಲಾಖೆ ಅಧಿಕಾರಿಗಳು ಗ್ರಾಮಸ್ಥರಿಗೆ ಮಾಹಿತಿ ನೀಡುತ್ತಾರೆ ಎಂದು ಗ್ರಾ.ಪಂ. ಪ್ರಕಟಣೆಯಲ್ಲಿ ತಿಳಿಸಿದೆ.