ಮಡಿಕೇರಿ, ಜ. ೨೦: ಮಕ್ಕಂದೂರಿನಲ್ಲಿ ಮಹಿಳಾ ಮತ್ತು ಮಕ್ಕಳ ಗ್ರಾಮ ಸಭೆ ನಡೆಯಿತು. ಸಭೆಯಲ್ಲಿ ಪಾಲ್ಗೊಂಡು ಮಾತನಾಡಿದ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಪ್ರಬಾರ ಸಹಾಯಕಿ, ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳಾದ ಮೇಪಾಡಂಡ ಸವಿತಾ ಕೀರ್ತನ್ ಅವರು, ಅಕ್ಕಪಡೆ ಯೋಜನೆಯ ಬಗ್ಗೆ ಮಾಹಿತಿ ನೀಡಿದರು. ಅಕ್ಕಪಡೆ ಎಂಬುದು ಕರ್ನಾಟಕ ಸರ್ಕಾರವು ಮಹಿಳೆಯರು ಮತ್ತು ಮಕ್ಕಳ ಸುರಕ್ಷತೆ ಹಾಗೂ ಸಬಲೀಕರಣಕ್ಕಾಗಿ ಜಾರಿಗೆ ತಂದಿರುವ ಒಂದು ವಿಶೇಷ ಯೋಜನೆಯಾಗಿದ್ದು ಇದರಲ್ಲಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಹಾಗೂ ಪೊಲೀಸ್ ಇಲಾಖೆಯ ಸಹಯೋಗದೊಂದಿಗೆ ಅಕ್ಕ ಪಡೆಯು ಸಾರ್ವಜನಿಕ ಸ್ಥಳಗಳಲ್ಲಿ (ಶಾಲಾ ಕಾಲೇಜು, ಹಾಸ್ಟೆಲ್ ಗಳು, ಬಸ್ ನಿಲ್ದಾಣಗಳು, ರೈಲು ನಿಲ್ದಾಣಗಳು, ಮಾರುಕಟ್ಟೆಗಳು, ಪವಿತ್ರ ಸ್ಥಳಗಳು) ಗಸ್ತು ತಿರುಗಿ ದೌರ್ಜನ್ಯ ತಡೆಯಲು ಜಾಗೃತಿ ಮೂಡಿಸಲು ಮತ್ತು ಸಂಕಷ್ಟದಲ್ಲಿರುವವರಿಗೆ ತಕ್ಷಣ ಸಹಾಯ ಒದಗಿಸುತ್ತದೆ ಎಂದು ತಿಳಿಸಿದರು. ಅಕ್ಕಪಡೆಯ ಮೂಲಕ ಸಂಕಷ್ಟದಲ್ಲಿರುವ ಮಹಿಳೆಯರು ಮತ್ತು ಮಕ್ಕಳ ಕರೆಗಳಿಗೆ ತಕ್ಷಣ ಸ್ಪಂದಿಸಿ ಸಹಾಯ ಮಾಡಲಾಗುವುದು. ಸಾರ್ವಜನಿಕರು ತಕ್ಷಣ ಸಹಾಯಕ್ಕಾಗಿ ೧೧೨ ಸಹಾಯವಾಣಿಗೆ ಕರೆ ಮಾಡಬಹುದು, ಮಕ್ಕಳ ಸಹಾಯವಾಣಿ ೧೦೯೮, ಮಹಿಳಾ ಸಹಾಯವಾಣಿ ೧೮೧ಗೆ ಕರೆ ಮಾಡಬಹುದು ಎಂದು ಮಾಹಿತಿ ತಿಳಿಸಿದರು.

ಮಹಿಳಾ ಸಬಲೀಕರಣ ಘಟಕದ ಜಿಲ್ಲಾ ಸಂಯೋಜಕಿ ಮಮತ ಮತನಾಡಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯಲ್ಲಿ ಜಿಲ್ಲಾ ಮಹಿಳಾ ಸಬಲೀಕರಣ ಘಟಕವು ಮಹಿಳೆಯರ ಸಬಲೀಕರಣಕ್ಕಾಗಿ ಕಾರ್ಯನಿರ್ವಹಿಸುತ್ತಿದ್ದು, ಸಂಬಾಲ್ ಮತ್ತು ಸಾಮರ್ಥ್ಯ ಎಂಬ ಎರಡು ಉಪಯೋಜನೆಗಳಿದ್ದು, ಸಂಬಾಲ್‌ನಲ್ಲಿ ದೌರ್ಜನ್ಯಕ್ಕೆ ಒಳಗಾದ ಮಹಿಳೆಯರಿಗೆ ಸಖಿ ಒನ್ ಸ್ಟಾಪ್ ಸೆಂಟರ್ ಹಾಗೂ ಬೇಟಿ ಬಚಾವೋ-ಬೇಟಿ ಪಡಾವೊ ಕಾರ್ಯಕ್ರಮ ನಡೆಸಲಾಗುತ್ತಿದೆ. ಹಾಗೂ ಸಾಮರ್ಥ್ಯ ಯೋಜನೆಯಡಿ ಯಲ್ಲಿ ಜಿಲ್ಲಾ ಮಹಿಳಾ ಸಬಲೀಕರಣ ಘಟಕ ಮತ್ತು ಮಹಿಳೆಯರಿಗೆ ವೇತನ ನಷ್ಟ ಭರಿಸಲು ಹಾಗೂ ಪೌಷ್ಟಿಕ ಯುಕ್ತ ಆಹಾರ ಪಡೆಯಲು ಮಾತೃವಂದನಾ ಯೋಜನೆ ಹಾಗೂ ಮಹಿಳೆಯರ ಸುರಕ್ಷತೆ ಮತ್ತು ಭದ್ರತೆಗಾಗಿ ಉದ್ಯೋಗಸ್ಥ ಮಹಿಳೆಯರ ವಸತಿ ನಿಲಯ ಈ ಎಲ್ಲಾ ಸೌಲಭ್ಯಗಳನ್ನು ನೀಡಲಾಗುತ್ತದೆ ಎಂದು ಹೇಳಿದರು. ಮಹಿಳಾ ಸಬಲೀಕರಣ ಘಟಕದ ಜೆಂಡರ್ ಸ್ಪೆಷಲೀಸ್ಟ್ ಕೇಶಿನಿ ಎಸ್.ಆರ್ ಮಾತನಾಡಿ, ಮಹಿಳೆಯರು ಮತ್ತು ಹೆಣ್ಣು ಮಕ್ಕಳು ಸಮಾಜದ ಮುಖ್ಯವಾಹಿನಿಗೆ ಬರಬೇಕು, ಎಲ್ಲಾ ಕ್ಷೇತ್ರಗಳಲ್ಲಿ ತಮ್ಮನ್ನು ತಾವು ಉತ್ತಮ ರೀತಿಯಲ್ಲಿ ತೊಡಗಿಸಿಕೊಳ್ಳಬೇಕು ಎಂದರು. ಸಮುದಾಯ ಆರೋಗ್ಯ ಅಧಿಕಾರಿ ಕಾರ್ತಿಕ್ ಮಾತನಾಡಿ ತ್ರೈಮಾಸಿಕ ಆರೋಗ್ಯ ತಪಾಸಣೆ ಬಗ್ಗೆ ತಿಳಿಸಿದರು. ವೈಯಕ್ತಿಕ ನೈರ್ಮಲ್ಯ ಮತ್ತು ವ್ಯಾಯಾಮ ಕುರಿತು, ತಂಬಾಕು ಮುಕ್ತ ಶಾಲೆ, ಮಕ್ಕಳಲ್ಲಿ ಮಾನಸಿಕ ಆರೋಗ್ಯ ಸಮಸ್ಯೆಗಳು ಮತ್ತು ಟೆಲಿ ಮನಸ್ ಸಹಾಯವಾಣಿ -೧೪,೪೧೬ ಕುರಿತು ತಿಳಿಸಿದರು. ಸಭೆಯಲ್ಲಿ ಉಪಸ್ಥಿತರಿದ್ದ ಗ್ರಾಮ ಪಂಚಾಯಿತಿ ಅಧ್ಯಕ್ಷರಾದ ರಮೇಶ್, ಪಂಚಾಯಿತಿಯಿAದ ದೊರೆಯುವ ಸವಲತ್ತುಗಳ ಬಗ್ಗೆ ತಿಳಿಸಿದರು. ಗ್ರಾಮ ಪಂಚಾಯತಿ ಉಪಾಧ್ಯಕ್ಷರಾದ ವಿಮಲಾ, ಗ್ರಾಮ ಪಂಚಾಯಿತಿ ಸದಸ್ಯರುಗಳಾದ ಸುನಂದಾ, ಗಣೇಶ, ಶ್ಯಾಮ್ ಸುಬ್ಬಯ್ಯ, ಕವಿತ, ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ದೇವಿಕಾ, ಶಾಲಾ ಶಿಕ್ಷಕರು, ಅಂಗನವಾಡಿ ಕಾರ್ಯಕರ್ತೆಯರು, ಆಶಾ ಕಾರ್ಯಕರ್ತೆಯರು, ಸ್ತಿçÃಶಕ್ತಿ ಸದಸ್ಯರು, ಗ್ರಾಮಸ್ಥರು ಉಪಸ್ಥಿತರಿದ್ದರು.