ಮಡಿಕೇರಿ, ಜ. ೨೦: ಸಮಾಜವನ್ನು ಮಾದಕ ವ್ಯಸನಮುಕ್ತಗೊಳಿಸುವ ನಿಟ್ಟಿನಲ್ಲಿ ಪೊಲೀಸ್ ಇಲಾಖೆಯ ನೂತನ ಪರಿಕಲ್ಪನೆ “ಸನ್ಮಿತ್ರ” ಕಾರ್ಯಕ್ರಮದ ಅಂಗವಾಗಿ ಮಡಿಕೇರಿಯ ಗದ್ದಿಗೆ ಬಳಿಯ ಬಾಲಕರ ವಿದ್ಯಾರ್ಥಿ ನಿಲಯಕ್ಕೆ ಮಡಿಕೇರಿ ನಗರ ಠಾಣೆಯ ಅಧಿಕಾರಿ ಮತ್ತು ಸಿಬ್ಬಂದಿಗಳು ಭೇಟಿ ನೀಡಿ ವಿದ್ಯಾರ್ಥಿಗಳಲ್ಲಿ ಮಾದಕ ವಸ್ತು ಬಳಕೆ ದುಷ್ಪರಿಣಾಮಗಳ ಬಗ್ಗೆ ಜಾಗೃತಿ ಮೂಡಿಸಿದರು.