ಮಡಿಕೇರಿ, ಜ. ೨೦: ಕೊಡಗು ಜಿಲ್ಲೆಯಲ್ಲಿ ಯಶಸ್ವಿನಿ ಯೋಜನೆಯಡಿ ೨೦೨೫-೨೬ನೇ ಸಾಲಿಗೂ ಮುಂದುವರೆಸಲು ಅರ್ಹ ಸದಸ್ಯರ ನೋಂದಣಿ ಪ್ರಾರಂಭಿಸಲಾಗಿದ್ದು, ಈ ಯೋಜನೆಯಡಿ ಸದಸ್ಯತ್ವ ನವೀಕರಣ ಮತ್ತು ಹೊಸ ಸದಸ್ಯರ ನೋಂದಣಿಗೆ ಮಾರ್ಚ್ ೩೧ ರವರೆಗೆ ಅವಕಾಶವಿದೆ ಎಂದು ಸಹಕಾರ ಸಂಘಗಳ ಉಪ ನಿಬಂಧಕ ಹೆಚ್.ಡಿ. ರವಿಕುಮಾರ್ ತಿಳಿಸಿದ್ದಾರೆ. ಜಿಲ್ಲೆಯಲ್ಲಿರುವ ಯಾವುದೇ ಸಹಕಾರ ಸಂಘಗಳು, ಸಹಕಾರ ಬ್ಯಾಂಕ್‌ಗಳು ಮತ್ತು ಸೌಹಾರ್ದ ಸಹಕಾರಿ ಸಂಘಗಳಲ್ಲಿ ಸದಸ್ಯರಾಗಿರುವವರು ಈ ಯೋಜನೆಯ ಉಪಯೋಗ ಪಡೆದುಕೊಳ್ಳಬಹುದು. ಅದರಂತೆ ಈ ಯಶಸ್ವಿನಿ ಯೋಜನೆಯ ವಿಮೆ ಮಾಡಿಸಿಕೊಂಡು ಇದರ ಸದುಪಯೋಗ ಪಡೆದುಕೊಳ್ಳಬಹುದು ಎಂದು ತಿಳಿಸಿದ್ದಾರೆ.

ನೋಂದಣಿಗೆ ಲಗತ್ತಿಸಬೇಕಾದ ದಾಖಲೆಗಳು: ಅರ್ಜಿ ನಮೂನೆ, ರೇಷನ್ ಕಾರ್ಡ್, ಆಧಾರ್ ಕಾರ್ಡ್, ಯೋಜನೆಗೆ ಒಳಪಡುವ ಸದಸ್ಯರ ಪ್ರತಿಯೊಬ್ಬರ ತಲಾ ೨ ಭಾವಚಿತ್ರ, ಗ್ರಾಮೀಣ ಸಹಕಾರ ಸಂಘಗಳ ಹೊಸ ಸದಸ್ಯರ ನೋಂದಣಿ ಹಾಗೂ ನವೀಕರಣಕ್ಕೆ ಸಂಬAಧಿಸಿದAತೆ ಗರಿಷ್ಠ ೪ ಸದಸ್ಯರ ಕುಟುಂಬ ಒಂದಕ್ಕೆ ರೂ. ೫೦೦ ಗಳ ವಂತಿಕೆ ಹಾಗೂ ೪ಕ್ಕಿಂತ ಹೆಚ್ಚಿನ ಸದಸ್ಯರುಗಳ ಕುಟುಂಬದ ಪ್ರತಿಯೊಬ್ಬ ಹೆಚ್ಚುವರಿ ಸದಸ್ಯರಿಗೆ ರೂ. ೧೦೦ ಗಳನ್ನು ಪಾವತಿಸಬೇಕು.

ನಗರ ಸಹಕಾರ ಸಂಘಗಳ ಹೊಸ ಸದಸ್ಯರ ನೋಂದಣಿ ಹಾಗೂ ನವೀಕರಣಕ್ಕೆ ಸಂಬAಧಿಸಿದAತೆ ಗರಿಷ್ಠ ೪ ಸದಸ್ಯರ ಕುಟುಂಬ ಒಂದಕ್ಕೆ ರೂ. ೧ ಸಾವಿರ ವಂತಿಕೆ ಹಾಗೂ ೪ಕ್ಕಿಂತ ಹೆಚ್ಚಿನ ಸದಸ್ಯರುಗಳ ಕುಟುಂಬದ ಪ್ರತೀಯೊಬ್ಬ ಹೆಚ್ಚುವರಿ ಸದಸ್ಯರಿಗೆ ರೂ. ೨೦೦ ಗಳನ್ನು ಪಾವತಿಸಬೇಕು. ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಸದಸ್ಯರಿಗೆ ಉಚಿತ (ಆರ್.ಡಿ ಸಂಖ್ಯೆಯ ಜಾತಿ ಪ್ರಮಾಣ ಪತ್ರ ನೀಡಿದಲ್ಲಿ ಮಾತ್ರ ಅನ್ವಯವಾಗುತ್ತದೆ). ಅರ್ಜಿ ಸಲ್ಲಿಸಲು ಮಾರ್ಚ್ ೩೧ ಕೊನೆಯ ದಿನವಾಗಿದೆ. ಕುಟುಂಬದ ಒಬ್ಬ ವ್ಯಕ್ತಿ ಸಂಬAಧಪಟ್ಟ ಸಹಕಾರ ಸಂಘದಲ್ಲಿ ಸದಸ್ಯರಾಗಿದ್ದು, ೩ ತಿಂಗಳು ಗತಿಸಿದಲ್ಲಿ ಈ ಯೋಜನೆಗೆ ಅರ್ಹರಾಗಿರುತ್ತಾರೆ. ನೋಂದಾಯಿತ ಸದಸ್ಯರ ಕುಟುಂಬಕ್ಕೆ ವಾರ್ಷಿಕ ಗರಿಷ್ಠ ರೂ. ೫ ಲಕ್ಷದವರೆಗೆ ನೆಟ್‌ವರ್ಕ್ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯಲು ಅವಕಾಶವಿದೆ.