ಮಡಿಕೇರಿ, ಜ. ೨೦: ೨೦೨೬-೨೭ನೇ ಸಾಲಿನ ಕರಡು ವಾರ್ಷಿಕ ಅಭಿವೃದ್ಧಿ ಯೋಜನೆ ಸಂಬAಧ ಜಿಲ್ಲಾ ಉಸ್ತುವಾರಿ ಸಚಿವÀ ಎನ್.ಎಸ್.ಭೋಸರಾಜು ಅವರ ಅಧ್ಯಕ್ಷತೆಯಲ್ಲಿ, ಶಾಸಕರುಗಳಾದ ಎ.ಎಸ್.ಪೊನ್ನಣ್ಣ, ಡಾ.ಮಂತರ್ ಗೌಡ ಉಪಸ್ಥಿತಿಯಲ್ಲಿ ಪೂರ್ವಭಾವಿ ಸಭೆ ನಡೆಯಿತು.

೨೦೨೬-೨೭ನೇ ಸಾಲಿನಲ್ಲಿ ಜಿಲ್ಲಾ ವಾರ್ಷಿಕ ಕರಡು ಅಭಿವೃದ್ಧಿ ಯೋಜನೆ ಸಂಬAಧ ವಿವಿಧ ಇಲಾಖೆಗಳ ಅಭಿವೃದ್ಧಿ ಕಾರ್ಯಗಳಿಗೆ ಸಂಬAಧಿಸಿದAತೆ ಸುಮಾರು ರೂ. ೧,೨೭,೧೯೧.೨೪ ಲಕ್ಷ ಕ್ರಿಯಾಯೋಜನೆಯನ್ನು ಸಭೆಯಲ್ಲಿ ಮಂಡಿಸಲಾಯಿತು.

ನಗರದ ಜಿಲ್ಲಾಧಿಕಾರಿ ಅವರ ಕಚೇರಿ ಸಭಾಂಗಣದಲ್ಲಿ ನಡೆದ ಸಭೆಯಲ್ಲಿ ಮುಂದಿನ ಆರ್ಥಿಕ ವರ್ಷದ ವಿವಿಧ ಇಲಾಖೆಗಳ ವಾರ್ಷಿಕ ಅಭಿವೃದ್ಧಿ ಕ್ರಿಯಾಯೋಜನೆ ಸಂಬAಧ ಸುದೀರ್ಘ ಚರ್ಚೆ ನಡೆಯಿತು.

ಸಭೆಯ ಆರಂಭದಲ್ಲಿ ಮಾತನಾಡಿದ ಸಚಿವ ಎನ್.ಎಸ್.ಭೋಸರಾಜು ಅವರು, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಅನೇಕ ಬಾರಿ ಚರ್ಚಿಸಿದ ನಂತರ ಜಿಲ್ಲಾ ಯೋಜನಾ ಸಮಿತಿ ಸಭೆಯನ್ನು ನಡೆಸಿ ಸಲಹಾ ಸಮಿತಿಯಿಂದ ಸಲಹೆ ಮತ್ತು ಮಾರ್ಗದರ್ಶನ ಪಡೆಯುವಂತೆ ನಿರ್ದೇಶನ ನೀಡಿದ್ದಾರೆ. ಕೊಡಗು ಜಿಲ್ಲೆಯಲ್ಲಿ ಮುಂದಿನ ಆರ್ಥಿಕ ವರ್ಷದಲ್ಲಿ ವಿವಿಧ ಇಲಾಖೆಗಳ ವ್ಯಾಪ್ತಿಯಲ್ಲಿ ರಸ್ತೆ, ಕುಡಿಯುವ ನೀರು, ಶಾಲಾ ಕಾಲೇಜು ಕಟ್ಟಡ, ಸರ್ಕಾರಿ ಕಚೇರಿ ಕಟ್ಟಡಗಳ ಅಭಿವೃದ್ಧಿ ಹಾಗೂ ಅಗತ್ಯವಿರುವ ಕಡೆ ಸಾರ್ವಜನಿಕ ಆಸ್ಪತ್ರೆ ಹಾಗೂ ಪಶು ಆಸ್ಪತ್ರೆ ನಿರ್ಮಾಣ, ಸಾರಿಗೆ ಸಂಪರ್ಕ, ವಿದ್ಯಾರ್ಥಿ ನಿಲಯಗಳ ಆರಂಭ, ವಸತಿ ಯೋಜನೆ, ಹೀಗೆ ಹಲವು ಅಭಿವೃದ್ಧಿ ಕೆಲಸಗಳ ಸಂಬAಧ ಕ್ರಿಯಾಯೋಜನೆ ತಯಾರಿಸಿ ನಿಖರ ಮಾಹಿತಿ ಒದಗಿಸುವಂತೆ ಸೂಚಿಸಿದರು. ಜಿಲ್ಲೆಯ ಅಭಿವೃದ್ಧಿ ಹಾಗೂ ಆಗಬೇಕಿರುವ ಕೆಲಸಗಳ ೪ಏಳನೇ ಪುಟಕ್ಕೆ

(ಮೊದಲ ಪುಟದಿಂದ) ಸಂಬAಧ ಕ್ರಿಯಾಯೋಜನೆ ತಯಾರಿಸಿ ಬೆಳಕು ಚೆಲ್ಲುವಂತಾಗಬೇಕು. ಈ ಸಂಬAಧ ಸರ್ಕಾರದ ಹಂತದಲ್ಲಿ ಅನುದಾನ ಬಿಡುಗಡೆಗೆ ಆಗಲಿದೆ. ಈ ಬಗ್ಗೆ ಗಂಭೀರವಾಗಿ ಪರಿಗಣಿಸಬೇಕು. ಇಲಾಖೆಗಳು ಆದ್ಯತೆ ಮೇಲೆ ಕಾರ್ಯಕ್ರಮ ರೂಪಿಸಬೇಕು. ಎಲ್ಲರೂ ಒಳಗೊಳ್ಳುವಂತೆ ಇರಬೇಕು. ಸಾರ್ವಜನಿಕರಿಗೆ ಸ್ಪಂದನ ಅತೀ ಮುಖ್ಯ ಎಂದು ಹೇಳಿದರು.

ಜಿಲ್ಲೆಯಲ್ಲಿ ನಿರ್ಮಾಣ ಹಂತದಲ್ಲಿರುವ ವಿದ್ಯುತ್ ಉಪ ಕೇಂದ್ರಗಳ ಕಾಮಗಾರಿಯನ್ನು ತ್ವರಿತವಾಗಿ ಪೂರ್ಣಗೊಳಿಸಬೇಕು. ಜಿಲ್ಲೆಗೆ ಉತ್ತಮ ರಸ್ತೆ, ವಿದ್ಯುತ್ ಸಂಪರ್ಕ ಕಲ್ಪಿಸುವಂತಾಗಬೇಕು, ಆ ನಿಟ್ಟಿನಲ್ಲಿ ಅಧಿಕಾರಿಗಳು ಅಗತ್ಯ ಕ್ರಮವಹಿಸುವಂತೆ ಸೂಚಿಸಿದರು.

ಮುಖ್ಯಮಂತ್ರಿ ಅವರ ಕಾನೂನು ಸಲಹೆಗಾರರು ಹಾಗೂ ಶಾಸಕ ಎ.ಎಸ್.ಪೊನ್ನಣ್ಣ ಮಾತನಾಡಿ ಮುಂದಿನ ಆರ್ಥಿಕ ವರ್ಷದಲ್ಲಿ ಅಭಿವೃದ್ಧಿ ಕಾರ್ಯಗಳ ಸಂಬAಧ ಯಾವ ರೀತಿ ಯೋಜನೆ ರೂಪಿಸಬೇಕು ಎಂಬ ಬಗ್ಗೆ ಸ್ಪಷ್ಟತೆ ಇರಬೇಕು. ರಸ್ತೆ, ಸೇತುವೆ, ಆಸ್ಪತ್ರೆ, ಶಾಲಾ ಕಟ್ಟಡಗಳು ಸೇರಿದಂತೆ ವಿವಿಧ ಅಭಿವೃದ್ಧಿ ಕೆಲಸಗಳ ಬಗ್ಗೆ ನಿಖರ ಅಂಕಿ ಅಂಶ ಒದಗಿಸಬೇಕು. ಜಿಲ್ಲೆಯಲ್ಲಿ ಪಡಿತರ ಚೀಟಿಗೆ ಸಂಬAಧಿಸಿದAತೆ ಬಡ ಕುಟುಂಬಗಳಿಗೆ ಬಿಪಿಎಲ್‌ನಿಂದ ಎಪಿಎಲ್‌ಗೆ ಬದಲಾಗಿದ್ದಲ್ಲಿ ಸೇರ್ಪಡೆ ಮಾಡಬಹುದಾಗಿದೆ. ಆ ನಿಟ್ಟಿನಲ್ಲಿ ಜಿಲ್ಲಾಧಿಕಾರಿ ಅವರಿಗೆ ಮಾಹಿತಿ ಒದಗಿಸಬೇಕು ಎಂದು ಹೇಳಿದರು.

ಮಡಿಕೇರಿ ವಿಧಾನಸಭಾ ಕ್ಷೇತ್ರದ ಶಾಸಕ ಡಾ.ಮಂತರ್ ಗೌಡ ಮಾತನಾಡಿ, ಕ್ರಿಯಾಯೋಜನೆ ತಯಾರಿಸುವ ಸಂಬAಧ ಶಾಸಕರ ಅಧ್ಯಕ್ಷತೆಯಲ್ಲಿ ತಾಲೂಕು ಮಟ್ಟದಲ್ಲಿ ಸಭೆ ನಡೆಸಿ ಅಭಿವೃದ್ಧಿ ಕಾರ್ಯಗಳ ಬಗ್ಗೆ ಚರ್ಚಿಸುವಂತಾಗಬೇಕು ಎಂದು ಸಲಹೆ ನೀಡಿದರು.

ಸರ್ಕಾರದ ಯೋಜನೆಗಳು ವೈಜ್ಞಾನಿಕವಾಗಿರಬೇಕು. ಸಾರ್ವಜನಿಕವಾಗಿರಬೇಕು. ಎಲ್ಲರಿಗೂ ತಲುಪುವಂತಾಗಬೇಕು. ಆ ನಿಟ್ಟಿನಲ್ಲಿ ವರದಿ ಕ್ರಿಯಾಯೋಜನೆ ರೂಪಿಸಬೇಕು ಎಂದು ಹೇಳಿದರು.

ಜಿಲ್ಲಾಧಿಕಾರಿ ಎಸ್.ಜೆ.ಸೋಮಶೇಖರ್ ಮಾತನಾಡಿ, ಪಡಿತರ ಚೀಟಿಗೆ ಸಂಬAಧಿಸಿದAತೆ ಇತ್ತೀಚೆಗೆ ಬಿಪಿಎಲ್‌ನಿಂದ ಎಪಿಎಲ್‌ಗೆ ಬದಲಾಗಿರುವ ಕಾರ್ಡುಗಳನ್ನು ಪರಿಷ್ಕರಿಸುವ ನಿಟ್ಟಿನಲ್ಲಿ ತಾಲೂಕುವಾರು ಮಾಹಿತಿ ನೀಡಬೇಕು. ಆ ನಿಟ್ಟಿನಲ್ಲಿ ಸರಿಪಡಿಸಲು ಕ್ರಮವಹಿಸಲಾಗುವುದು ಎಂದು ಹೇಳಿದರು.

ಜಿ.ಪಂ.ಸಿಇಒ ಆನಂದ್ ಪ್ರಕಾಶ್ ಮೀನಾ ಮಾತನಾಡಿ, ಕರ್ನಾಟಕ ಗ್ರಾಮ ಸ್ವರಾಜ್ ಹಾಗೂ ಪಂಚಾಯತ್ ರಾಜ್ ಅಧಿನಿಯಮದಂತೆ ಜಿಲ್ಲೆಯ ಎಲ್ಲಾ ನಗರ ಹಾಗೂ ಗ್ರಾಮೀಣ ಸ್ಥಳೀಯ ಸಂಸ್ಥೆಗಳ ಕರಡು ಅಭಿವೃದ್ಧಿ ಯೋಜನೆಗಳನ್ನು ಕ್ರೋಢೀಕರಿಸಲು ಜಿಲ್ಲಾ ಹಂತದಲ್ಲಿ ಜಿಲ್ಲಾ ಉಸ್ತುವಾರಿ ಸಚಿವರ ಅಧ್ಯಕ್ಷತೆಯಲ್ಲಿ ಜಿಲ್ಲಾ ಯೋಜನಾ ಸಮಿತಿಯನ್ನು ಸರ್ಕಾರ ರಚಿಸಿದೆ ಎಂದು ತಿಳಿಸಿದರು.

ಕೊಡಗು ಜಿಲ್ಲಾ ಯೋಜನಾ ಸಮಿತಿ ಸದಸ್ಯ ರಾಜೇಶ್ ಯಲ್ಲಪ್ಪ ಮಾತನಾಡಿ, ಚುನಾವಣೆ ಮೂಲಕ ನೂತನ ಸದಸ್ಯರು ಆಯ್ಕೆಯಾಗಿದ್ದು, ಯೋಜನೆ ಸಂಬAಧ ಅಧ್ಯಯನ ಮಾಡಬೇಕಿದೆ. ಆ ನಿಟ್ಟಿನಲ್ಲಿ ಒಂದು ವಾರಗಳ ಕಾಲಾವಕಾಶ ನೀಡಬೇಕೆಂದು ಕೋರಿದರು.

ಈ ಸಂದರ್ಭದಲ್ಲಿ ಮಾತನಾಡಿದ ಶಾಸಕÀ ಡಾ.ಮಂತರ್ ಗೌಡ, ಈ ಯೋಜನಾ ಸಮಿತಿ ಬಗ್ಗೆ ಸ್ಪಷ್ಟ ಮಾಹಿತಿ ನೀಡುವಂತಾಗಬೇಕು, ಜೊತೆಗೆ ದೂರದೃಷ್ಟಿ ಇರಬೇಕು ಎಂದು ಸಲಹೆ ನೀಡಿದರು.

ಮತ್ತೊಬ್ಬ ಸಮಿತಿ ಸದಸ್ಯ ಬಾಲಕೃಷ್ಣ ನಾಯರ್ ಮಾತನಾಡಿ, ಕರಿಕೆ ಗ್ರಾಮದಲ್ಲಿ ಆರೋಗ್ಯ ಕೇಂದ್ರದ ಕಟ್ಟಡ ನಿರ್ಮಾಣ ಆಗಬೇಕು. ಜೊತೆಗೆ ವೈದ್ಯರನ್ನು ನೇಮಿಸುವಂತಾಗಬೇಕು ಎಂದು ಕೋರಿದರು.

ಕೆಲವು ಕಡೆ ಸರ್ಕಾರಿ ಕಟ್ಟಡ ಇಲ್ಲದೆ ಬಾಡಿಗೆ ಕಟ್ಟಡದಲ್ಲಿ ಅಂಗನವಾಡಿಗಳು ನಡೆಯುತ್ತಿದ್ದು. ಅಂತಹ ಕಡೆಗಳಲ್ಲಿ ಹೊಸ ಅಂಗನವಾಡಿ ಕಟ್ಟಡ ನಿರ್ಮಾಣ ಆಗಬೇಕು. ಹಾಗೆಯೇ ಅಗತ್ಯವಿರುವ ಕಡೆ ಹೊಸ ಅಂಗನವಾಡಿ ಆರಂಭಿಸುವAತಾಗಬೇಕು ಎಂದು ಸದಸ್ಯರು ಸಲಹೆ ಮಾಡಿದರು. ವಸತಿ ನಿಲಯಕ್ಕೆ ಸ್ವಂತ ಕಟ್ಟಡ ನಿರ್ಮಾಣ ಆಗಬೇಕು ಎಂದು ಸಲಹೆ ಮಾಡಿದರು.

ಸದಸ್ಯ ಮನ್ಸೂರ್ ಮಾತನಾಡಿ, ಯಾವುದೇ ಕ್ರಿಯಾಯೋಜನೆ ತಯಾರಿಸುವಾಗ ಹೆಚ್ಚಿನ ಅನುದಾನ ಪ್ರಸ್ತಾವನೆ ಸಲ್ಲಿಸುವಂತಾಗಬೇಕು. ಗದ್ದಿಗೆಯ ಉದ್ಯಾನವನವಿದ್ದು, ನಿರ್ವಹಣೆಯನ್ನು ಇನ್ನಷ್ಟು ಸಮರ್ಪಕವಾಗಿ ನಿರ್ವಹಣೆ ಮಾಡಬೇಕು ಎಂದು ಕೋರಿದರು.

ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಬಿಂದುಮಣಿ ಆರ್.ಎನ್ ಮಾತನಾಡಿ, ರಾಜಾಸೀಟು ಉದ್ಯಾನವನಕ್ಕೆ ಹೆಚ್ಚಿನ ಸಂಖ್ಯೆಯಲ್ಲಿ ಪ್ರವಾಸಿಗರು ಭೇಟಿ ನೀಡುತ್ತಿದ್ದು, ವಾಹನಗಳ ನಿಲುಗಡೆಗೆ ತುಂಬಾ ತೊಂದರೆ ಇದೆ. ಆದ್ದರಿಂದ ಸೂಕ್ತ ಸ್ಥಳ ಕಲ್ಪಿಸುವಂತಾಗಬೇಕು ಎಂದರು.

ಈ ಕುರಿತು ಧ್ವನಿಗೂಡಿಸಿದ ಸಮಿತಿ ಸದಸ್ಯ ರಾಜೇಶ್ ಯಲ್ಲಪ್ಪ ಅವರು ರಾಜಾಸೀಟು ಉದ್ಯಾನವನದಲ್ಲಿ ಶೌಚಾಲಯ ನಿರ್ಮಾಣ ಆಗಬೇಕು. ಪಾರ್ಕಿಂಗ್ ಸಮಸ್ಯೆ ನಿವಾರಿಸಬೇಕು ಎಂದು ಗಮನಸೆಳೆದರು.

ಸಮಿತಿ ಸದಸ್ಯ ಕೊಲ್ಲಿರ ಬೋಪಣ್ಣ ಮಾತನಾಡಿ, ಬಿ.ಶೆಟ್ಟಿಗೇರಿ ಗ್ರಾ.ಪಂ.ವ್ಯಾಪ್ತಿಯ ಕುಟ್ಟಂದಿಯಲ್ಲಿ ಪಶುಪಾಲನಾ ಆಸ್ಪತ್ರೆ ಕಟ್ಟಡ ನಿರ್ಮಾಣಕ್ಕೆ ಜಾಗ ಗುರುತಿಸಲಾಗಿದ್ದು, ಇಲ್ಲಿ ಕಟ್ಟಡ ನಿರ್ಮಾಣ ಮಾಡಬೇಕು. ಆ ನಿಟ್ಟಿನಲ್ಲಿ ಯೋಜನೆ ರೂಪಿಸುವಂತೆ ತಿಳಿಸಿದರು.

ಬರಪೊಳೆಯಿಂದ ನೀರು ಕೇರಳಕ್ಕೆ ಹೋಗುತ್ತಿದ್ದು, ಈ ನೀರನ್ನು ಕೊಡಗು ಜಿಲ್ಲೆಗೆ ಬಳಸುವಂತಾಗಬೇಕು ಎಂದು ಇದೇ ಸಂದರ್ಭದಲ್ಲಿ ಸಲಹೆ ನೀಡಿದರು.

ಗ್ಯಾರಂಟಿ ಯೋಜನೆ ಅನುಷ್ಠಾನ ಸಮಿತಿ ಜಿಲ್ಲಾಧ್ಯಕ್ಷ ಧರ್ಮಜ ಉತ್ತಪ್ಪ ಮಾತನಾಡಿ, ಜಿಲ್ಲೆಯ ಕೆಲವು ಭಾಗದಲ್ಲಿ ೯-೧೦ ಅಡಿ ರಸ್ತೆ ಇದ್ದು, ಚರಂಡಿ ನಿರ್ಮಿಸದೆ ರಸ್ತೆಗಳು ಹಾಳಾಗುತ್ತಿವೆ. ರಸ್ತೆ ನಿರ್ಮಾಣ ಸಂದರ್ಭದಲ್ಲಿ ಹೆಚ್ಚಿನ ಗಮನಹರಿಸಬೇಕು ಎಂದು ಸಲಹೆ ಮಾಡಿದರು. ನಗರಸಭೆ ಅಧ್ಯಕ್ಷರಾದ ಪಿ.ಕಲಾವತಿ ಅವರು ಪಡಿತರ ಚೀಟಿ ಸಂಬAಧ ವಿಷಯ ಪ್ರಸ್ತಾಪಿಸಿದರು.

ಕ್ರಿಯಾ ಯೋಜನೆ ಸಂಬAಧಿಸಿದAತೆ ವಿವಿಧ ಇಲಾಖೆ ಅಧಿಕಾರಿಗಳು ಉಪಸ್ಥಿತರಿದ್ದರು.