ಕುಶಾಲನಗರ, ಜ. ೨೦: ಮೈಸೂರು-ಕುಶಾಲನಗರ ರೈಲ್ವೆ ಯೋಜನೆಗೆ ಸಂಬAಧಿಸಿದAತೆ ಭೂ ಸ್ವಾಧೀನ ಪ್ರಕ್ರಿಯೆಗೆ ರಾಜ್ಯ ಸರ್ಕಾರದ ಬಳಿ ಹಣದ ಕೊರತೆ ಎದುರಾಗಿರುವ ಹಿನ್ನೆಲೆಯಲ್ಲಿ ಉದ್ದೇಶಿತ ಯೋಜನೆ ರದ್ದಾಗಲು ಪ್ರಮುಖ ಕಾರಣ ಎಂದು ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಆರೋಪಿಸಿದ್ದಾರೆ. ಈ ಬಗ್ಗೆ ಪ್ರತಿಕ್ರಿಯಿಸಿರುವ ಅವರು, ಮೈಸೂರು ಬೆಳಗೊಳದಿಂದ ಕುಶಾಲನಗರ ಪ್ರಸ್ತಾವಿತ ರೈಲ್ವೆ ಯೋಜನೆ ಬಗ್ಗೆ ಕರ್ನಾಟಕ ರಾಜ್ಯ ಸರ್ಕಾರ ಭೂ ಸ್ವಾಧೀನ ಸಂಬAಧ ನೀಡಬೇಕಾದ ಹಣದ ಕೊರತೆ ಎದುರಾಗಿರುವ ಹಿನ್ನೆಲೆಯಲ್ಲಿ ಮೈಸೂರು ಕುಶಾಲನಗರ ಸೇರಿದಂತೆ ರಾಜ್ಯದ ಎರಡು ರೈಲ್ವೆ ಯೋಜನೆಗಳನ್ನು ಮುಂದುವರೆಸಲು ಸಾಧ್ಯವಾಗಿಲ್ಲ ಎಂದು ಈ ಹಿಂದೆ ರೈಲ್ವೆ ಸಚಿವಾಲಯಕ್ಕೆ ಪತ್ರ ಬರೆದಿದೆ. ಈ ಹಿನ್ನೆಲೆಯಲ್ಲಿ ಯೋಜನೆಗೆ ಹಿನ್ನಡೆ ಉಂಟಾಗಿದೆ ಎಂದು ತಿಳಿಸಿದ್ದಾರೆ. ಶ್ರೀರಂಗಪಟ್ಟಣ- ಕುಶಾಲನಗರ ಚತುಷ್ಪಥ ರಸ್ತೆ ಕಾಮಗಾರಿ ಯೋಜನೆಯಲ್ಲಿ ಕೆಲವೆಡೆ ಸರ್ವಿಸ್ ರೋಡ್ ನಿರ್ಮಾಣದ ಸಂಬAಧ ಭೂ ಸ್ವಾಧೀನಕ್ಕೆ ಕೂಡ ರಾಜ್ಯ ಸರ್ಕಾರದ ಮೂಲಕ ಅನುದಾನ ಕಲ್ಪಿಸಬೇಕಾಗಿದೆ ಎಂದು ಅವರು ತಿಳಿಸಿದ್ದಾರೆ.