ಮಡಿಕೇರಿ, ಜ. ೨೨: ವಿಶೇಷಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯು ಹಿರಿಯ ನಾಗರಿಕರಿಗಾಗಿ ಕೇಂದ್ರ ಪ್ರಾಯೋಜಿತ ಅಟಲ್ ವಯೋಅಭ್ಯುದಯ ಯೋಜನೆಯಡಿ ಕೇಂದ್ರ ಸರ್ಕಾರದ ಸ್ಟೇಟ್ ಆಕ್ಷನ್ ಪ್ಲಾನ್ ಫಾರ್ ಸೀನಿಯರ್ ಸಿಟಿಜನ್ ಯೋಜನೆಯನ್ನು ಸಮರ್ಪಕವಾಗಿ ಅನುಷ್ಠಾನಗೊಳಿಸುವ ಸಲುವಾಗಿ ಕಾನೂನು ಸೇವಾ ಸಮಿತಿ ಸಹಯೋಗದಲ್ಲಿ ಹಿರಿಯ ನಾಗರಿಕರ ಕಾಯ್ದೆ ೨೦೦೭, ಹಿರಿಯ ನಾಗರಿಕರ ಆಸ್ತಿ ಸಂರಕ್ಷಣೆ, ಹಿರಿಯ ನಾಗರಿಕರಿಗೆ ಇರುವ ಸೌಲಭ್ಯಗಳ ಕುರಿತಾಗಿ ಸಾರ್ವಜನಿಕರಿಗೆ ಕಾನೂನು ಅರಿವು ಮತ್ತು ನೆರವು ಶಿಬಿರ ಕಾರ್ಯಕ್ರಮ ಶಿಶು ಕಲ್ಯಾಣ ಸಂಸ್ಥೆ (ಕೆ.ಎಸ್.ಆರ್.ಟಿ.ಸಿ ಬಸ್ ನಿಲ್ದಾಣದ ಹತ್ತಿರ, ಮಡಿಕೇರಿ) ಇಲ್ಲಿ ತಾ. ೨೩ ರಂದು ಬೆಳಿಗ್ಗೆ ೧೦.೩೦ ಗಂಟೆಗೆ ನಡೆಯಲಿದೆ. ಮಡಿಕೇರಿ ತಾಲೂಕಿನ ಹಿರಿಯ ನಾಗರಿಕರು ಕಾರ್ಯಕ್ರಮಕ್ಕೆ ಹಾಜರಾಗಿ ಕಾರ್ಯಕ್ರಮದ ಸದುಪಯೋಗ ಪಡೆದುಕೊಳ್ಳುವಂತೆ ಜಿಲ್ಲಾ ಅಂಗವಿಕಲರ ಕಲ್ಯಾಣಾಧಿಕಾರಿ ವಿಮಲ ತಿಳಿಸಿದ್ದಾರೆ.