ಪೊನ್ನಂಪೇಟೆ, ಜ. ೨೨: ವೀರಾಜಪೇಟೆ ಕ್ಷೇತ್ರದ ಶಾಸಕ ಹಾಗೂ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರ ಎ.ಎಸ್. ಪೊನ್ನಣ್ಣ, ಪೊನ್ನಂಪೇಟೆ ತಾಲೂಕು ಕಚೇರಿಗೆ ದಿಢೀರ್ ಭೇಟಿ ನೀಡಿ, ಅಲ್ಲಿನ ವ್ಯವಸ್ಥೆಗಳ ಪರಿಶೀಲನೆ ನಡೆಸಿದರು.
ವಿವಿಧ ಇಲಾಖೆಗಳ ಅಧಿಕಾರಿಗಳನ್ನು ಕರೆಯಿಸಿ, ಕಡತಗಳನ್ನು ಪರಿಶೀಲಿಸಿ ವರದಿಯನ್ನು ಪಡೆದು, ಸಾರ್ವಜನಿಕರನ್ನು ಮಾತನಾಡಿಸಿ ಅವರ ಅಭಿಪ್ರಾಯವನ್ನು ಸಂಗ್ರಹಿಸಿದರು.
ತಾಲೂಕು ಕಚೇರಿಯ ಕೆಲವೊಂದು ಇಲಾಖೆಯ ನಿಧಾನಗತಿಯ ಕೆಲಸಕ್ಕೆ ಅಸಮಾಧಾನಗೊಂಡ ಶಾಸಕರು ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡರು. ಜನಸಾಮಾನ್ಯರಿಂದ ದೂರು ಬಂದಲ್ಲಿ ಅಂತಹ ಅಧಿಕಾರಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವುದಾಗಿ ಎಚ್ಚರಿಕೆ ನೀಡಿದರು.
ಬಾಕಿ ಇರುವ ಕಡತ ವಿಲೇವಾರಿ, ಆರ್ಟಿಸಿ ತಿದ್ದುಪಡಿ, ಸರ್ವೆ ಬಾಕಿ ಇರುವ ಕಡತಗಳನ್ನು ಪರಿಶೀಲಿಸಿದರು. ಈ ಸಂದರ್ಭ ಮಾತನಾಡಿದ ಶಾಸಕರು, ಪೊನ್ನಂಪೇಟೆ ತಹಶೀಲ್ದಾರ್, ಉಪ ವಿಭಾಗಾಧಿಕಾರಿ ಹಾಗೂ ಕಚೇರಿ ಸಿಬ್ಬಂದಿಗಳೊAದಿಗೆ ಚರ್ಚಿಸಿ, ಸಾರ್ವಜನಿಕರ ಅವಾಲುಗಳನ್ನು ಸ್ವೀಕರಿಸಲಾಗಿದೆ. ಮುಂದಿನ ದಿನಗಳಲ್ಲಿ ಬಾಕಿ ಇರುವ ಕಡತಗಳ ಪೂರ್ಣ ಮಾಹಿತಿ ಸ್ವೀಕರಿಸಿದ ನಂತರ ಕಾಲಾವಧಿ ನಿಗದಿಪಡಿಸಿ ಆ ಕಾಲಾವಧಿಯೊಳಗೆ ಪೂರ್ಣ ಕಡತ ವಿಲೇವಾರಿ ಆಗದಿದ್ದಲ್ಲಿ ಜಿಲ್ಲಾಧಿಕಾರಿಯವರ ಅಧ್ಯಕ್ಷತೆಯಲ್ಲಿ ಇತರ ಅಧಿಕಾರಿ ವರ್ಗದವರನ್ನು ಒಳಗೊಂಡAತೆ ಸಭೆ ನಡೆಸಿ ಸಮಸ್ಯೆಗಳನ್ನು ಬಗೆಹರಿಸಲಾಗುತ್ತದೆ.
ಬೇರೆ ಬೇರೆ ವಿಭಾಗಗಳಲ್ಲಿ ಬಾಕಿ ಇರುವ ಕಡತಗಳ ಬಗ್ಗೆ ಮಾಹಿತಿಯನ್ನು ನೀಡಲು ತಹಶೀಲ್ದಾರರಿಗೆ ಸೂಚನೆ ನೀಡಲಾಗಿದೆ. ಪೊನ್ನಂಪೇಟೆ ತಹಶೀಲ್ದಾರ್ ಕಚೇರಿಯ ಸಿಬ್ಬಂದಿಗಳು ಸಾರ್ವಜನಿಕರೊಂದಿಗೆ ಸೌಜನ್ಯದಿಂದ ವರ್ತಿಸಬೇಕು. ಸಾರ್ವಜನಿಕರಿಗೆ ತೊಂದರೆಯಾಗದAತೆ ಸಮಸ್ಯೆಗಳಿಗೆ ಸ್ಪಂದಿಸಬೇಕು. ಇಲ್ಲದಿದ್ದರೆ ಕಠಿಣ ಕ್ರಮ ಕೈಗೊಳ್ಳಲಾಗುವುದೆಂದು ಸೂಚನೆ ನೀಡಿದರು.
ಈ ಸಂದರ್ಭ ಪೊನ್ನಂಪೇಟೆ ಪಟ್ಟಣ ಪಂಚಾಯಿತಿ ಉಪಾಧ್ಯಕ್ಷ ಆಲಿರ ರಶೀದ್, ಜಿಲ್ಲಾ ಯುವ ಒಕ್ಕೂಟದ ಮಾಜಿ ಅಧ್ಯಕ್ಷ ಕಂದಾ ದೇವಯ್ಯ, ಕಾಂಗ್ರೆಸ್ ಮುಖಂಡರಾದ ಅಜ್ಜಿಕುಟ್ಟಿರ ಪೊನ್ನಪ್ಪ, ಅಜ್ಜಿಕುಟ್ಟಿರ ನರೇನ್ ಕಾರ್ಯಪ್ಪ, ಕೊಲ್ಲಿರ ಬೋಪಣ್ಣ, ಅಲಿರ ಹ್ಯಾರಿಸ್, ಲಕ್ಷಿö್ಮ, ಕೊಡಗು ಜಿಲ್ಲಾ ಗ್ಯಾರಂಟಿ ಅನುಷ್ಠಾನ ಸಮಿತಿ ಸದಸ್ಯೆ ನೊರೆರ ಧನ್ಯ, ಪೊನ್ನಂಪೇಟೆ ತಹಶೀಲ್ದಾರ್ ಕೆ.ಎನ್. ಮೋಹನ್ ಕುಮಾರ್, ವೀರಾಜಪೇಟೆ ತಹಶೀಲ್ದಾರ್ ಪ್ರವೀಣ್ ಕುಮಾರ್ ಹಾಗೂ ಇತರರು ಇದ್ದರು.