ಮಡಿಕೇರಿ, ಜ. ೨೨: ನಾಲ್ಕನೆಯ ವರ್ಷದ ಗಾಂಧಿ ಸದ್ಭಾವನಾ ಪ್ರಶಸ್ತಿಗೆ ಲೇಖಕ ಹಾಗೂ ವಿಜಯ ಕರ್ನಾಟಕ ದಿನಪತ್ರಿಕೆಯ ಮೈಸೂರು ಆವೃತ್ತಿಯ ಸ್ಥಾನಿಕ ಸಂಪಾದಕ ಐತಿಚಂಡ ರಮೇಶ್ ಉತ್ತಪ್ಪ ಆಯ್ಕೆಯಾಗಿದ್ದಾರೆ. ತಾ. ೨೪ ರಂದು ಮಧ್ಯಾಹ್ನ ೨.೩೦ ಗಂಟೆಗೆ ಮೈಸೂರು ನಗರದ ಜಿಲ್ಲಾ ಕನ್ನಡ ಸಾಹಿತ್ಯ ಭವನದಲ್ಲಿ ನಡೆಯಲಿರುವ ಮಕ್ಕಳ ಸಾಂಸ್ಕೃತಿಕ ಉತ್ಸವದಲ್ಲಿ ಕರ್ನಾಟಕ ಸಂಸ್ಕೃತ ವಿಶ್ವವಿದ್ಯಾನಿಲಯದ ವಿಶ್ರಾಂತ ಕುಲಪತಿ ಪ್ರೊ. ಪದ್ಮಾ ಶೇಖರ್ ಪ್ರಶಸ್ತಿ ಪ್ರದಾನ ಮಾಡಲಿದ್ದಾರೆ. ಕರ್ನಾಟಕ ಮಾಹಿತಿ ಆಯೋಗದ ನಿಕಟಪೂರ್ವ ಆಯುಕ್ತ ಕೆ.ಎಂ. ಚಂದ್ರೇಗೌಡ ಅಧ್ಯಕ್ಷತೆ ವಹಿಸಲಿದ್ದು, ಅದಮ್ಯ ರಂಗಶಾಲೆಯ ಗೌರವ ಕಾರ್ಯದರ್ಶಿ ಟಿ. ಸತೀಶ್ ಜವರೇಗೌಡ ಆಶಯ ನುಡಿಗಳನ್ನಾಡಲಿದ್ದಾರೆ.
ಮುಖ್ಯ ಅತಿಥಿಗಳಾಗಿ ಮೈಸೂರು ವಾಣಿಜ್ಯ ಮತ್ತು ಕೈಗಾರಿಕಾ ಸಂಸ್ಥೆಯ ಅಧ್ಯಕ್ಷ ಕೆ.ಬಿ. ಲಿಂಗರಾಜು, ಹಿರಿಯ ಸಾಹಿತಿ ಮತ್ತು ಅಂಕಣಕಾರ ಮಿರ್ಲೆ ಚಂದ್ರಶೇಖರ, ಗಿರೀಶ್ ಎಂಟರ್ಪ್ರೆöÊಸಸ್ ಮಾಲೀಕ ಎನ್.ಎಲ್. ಗಿರೀಶ್ ಭಾಗವಹಿಸಲಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ.