ಮಡಿಕೇರಿ, ಜ. ೨೨: ಪ್ರತಿ ವರ್ಷ ಭಾರತದಾದ್ಯಂತ ಲಕ್ಷಾಂತರ ಪುರುಷರು ಪ್ರಾಸ್ಟೇಟ್ ಗ್ರಂಥಿ ದೊಡ್ಡದಾಗುವುದು, ಪ್ರಾಸ್ಟೇಟ್ ಕ್ಯಾನ್ಸರ್, ಅಧಿಕ ರಕ್ತದೊತ್ತಡಕ್ಕೆ ಸಂಬAಧಿಸಿದ ಮೂತ್ರಪಿಂಡದ ಹಾನಿ ಮತ್ತು ದೀರ್ಘಕಾಲದ ಮೂತ್ರಪಿಂಡ ಕಾಯಿಲೆಗಳಂತಹ ಸಮಸ್ಯೆಗಳಿಗೆ ಒಳಗಾಗುತ್ತಿದ್ದಾರೆ. ಆದರೂ ಸಹ, ದೈನಂದಿನ ಮಾತುಕತೆಗಳಲ್ಲಿ ಪುರುಷರ ಆರೋಗ್ಯದ ಬಗ್ಗೆ ಮುಕ್ತ ಚರ್ಚೆಗಳು ನಡೆಯುತ್ತಿಲ್ಲ.

ರಾಷ್ಟಿçÃಯ ಸಮೀಕ್ಷೆಗಳ ಪ್ರಕಾರ, ಭಾರತದ ಶೇಕಡಾ ೧೦ ರಿಂದ ೧೩ ರಷ್ಟು ವಯಸ್ಕರು ದೀರ್ಘಕಾಲದ ಮೂತ್ರಪಿಂಡ ಕಾಯಿಲೆಯಿಂದ (ಅಏಆ) ಬಳಲುತ್ತಿದ್ದಾರೆ. ಕೆಲವು ರಾಜ್ಯಗಳಲ್ಲಿ ಇದರ ಪ್ರಮಾಣ ಹೆಚ್ಚಾಗಿ ಕಂಡುಬAದಿದೆ. ಈ ಕಾಯಿಲೆಗಳ ಲಕ್ಷಣಗಳು ತೀವ್ರವಾಗುವ ಮುನ್ನವೇ ಎಚ್ಚರಿಕೆ ವಹಿಸುವುದು ಅತ್ಯಗತ್ಯ.

೫೦ ವರ್ಷ ಮೇಲ್ಪಟ್ಟ ಪುರುಷರಲ್ಲಿ ಪ್ರೊಸ್ಟೇಟ್ ಗ್ರಂಥಿ ದೊಡ್ಡದಾಗುವ ಸಮಸ್ಯೆ (ಃPಊ) ಹೆಚ್ಚಾಗಿ ಕಂಡುಬರುತ್ತದೆ. ಅನೇಕ ಪುರುಷರು ಪದೇ ಪದೇ ಮೂತ್ರ ವಿಸರ್ಜನೆ ಮಾಡುವುದು ಅಥವಾ ರಾತ್ರಿ ವೇಳೆ ಅತಿಯಾಗಿ ಬಾತ್‌ರೂಮ್‌ಗೆ ಹೋಗುವುದನ್ನು ವಯಸ್ಸಾದ ಮೇಲೆ ಇದೆಲ್ಲಾ ಸಾಮಾನ್ಯ ಎಂದು ನಿರ್ಲಕ್ಷಿಸುತ್ತಾರೆ. ಇದರಿಂದ ಕಾಯಿಲೆಯನ್ನು ಪತ್ತೆ ಹಚ್ಚುವುದು ತಡವಾಗುತ್ತದೆ.

ಇತ್ತೀಚಿನ ದಿನಗಳಲ್ಲಿ ಪ್ರೊಸ್ಟೇಟ್ ಕ್ಯಾನ್ಸರ್ ಪ್ರಕರಣಗಳು ಹೆಚ್ಚಾಗುತ್ತಿವೆ. ವಯಸ್ಸು, ಕೌಟುಂಬಿಕ ಹಿನ್ನೆಲೆ ಮತ್ತು ಜೀವನಶೈಲಿ ಇದಕ್ಕೆ ಮುಖ್ಯ ಕಾರಣ. ೪೫ ವರ್ಷ ಮೇಲ್ಪಟ್ಟವರು ಮತ್ತು ಕುಟುಂಬದಲ್ಲಿ ಇಂತಹ ಕಾಯಿಲೆಯ ಹಿನ್ನೆಲೆ ಇರುವವರು ತಪ್ಪದೆ PSಂ ಪರೀಕ್ಷೆ ಮತ್ತು ವೈದ್ಯಕೀಯ ತಪಾಸಣೆ ಮಾಡಿಸಿಕೊಳ್ಳಬೇಕು. ಆರಂಭದಲ್ಲೇ ಪತ್ತೆ ಹಚ್ಚಿದರೆ ಗುಣಪಡಿಸುವುದು ಸುಲಭ.

ಮಧುಮೇಹ ಮತ್ತು ರಕ್ತದೊತ್ತಡದಂತಹ ಸಮಸ್ಯೆಗಳು ಕಿಡ್ನಿ ಹಾನಿಗೆ ಪ್ರಮುಖ ಕಾರಣವಾಗುತ್ತಿವೆ ಇಂತಹ ಸಮಸ್ಯೆಗಳು ಯಾವುದೇ ಲಕ್ಷಣವಿಲ್ಲದೆ ಮೂತ್ರಪಿಂಡದ ಕೆಲಸವನ್ನು ಸಂಪೂರ್ಣವಾಗಿ ನಿಲ್ಲಿಸಬಹುದು. ೪೦ ವರ್ಷ ದಾಟಿದ ಪುರುಷರು ಮತ್ತು ರೋಗದ ಲಕ್ಷಣವಿರುವವರು ರಕ್ತದೊತ್ತಡ, ರಕ್ತದಲ್ಲಿನ ಸಕ್ಕರೆ ಅಂಶ ಹಾಗೂ ಕಿಡ್ನಿ ಕಾರ್ಯನಿರ್ವಹಣೆಯ ತಪಾಸಣೆಯನ್ನು ನಿರ್ಲಕ್ಷಿಸಬಾರದು. ಕಡಿಮೆ ಉಪ್ಪು ತಿನ್ನುವುದು, ಹೆಚ್ಚು ನೀರು ಕುಡಿಯುವುದು, ನೋವು ನಿವಾರಕ ಮಾತ್ರೆಗಳನ್ನು (Pಚಿiಟಿಞiಟಟeಡಿs) ವೈದ್ಯರ ಸಲಹೆ ಇಲ್ಲದೆ ಬಳಸುವುದನ್ನು ನಿಲ್ಲಿಸುವುದು ಮತ್ತು ಕಾಲಕಾಲಕ್ಕೆ ತಪಾಸಣೆ ಮಾಡಿಸಿಕೊಳ್ಳುವ ಮೂಲಕ ಮೂತ್ರಪಿಂಡವನ್ನು ಆರೋಗ್ಯವಾಗಿಟ್ಟುಕೊಳ್ಳಬಹುದು.

ಮೂತ್ರಪಿಂಡ ಸಂಪೂರ್ಣವಾಗಿ ಕೆಲಸ ನಿಲ್ಲಿಸಿದಾಗ, ಡಯಾಲಿಸಿಸ್‌ಗೆ ಹೋಲಿಸಿದರೆ, ಮೂತ್ರಪಿಂಡ ಕಸಿಯು ಉತ್ತಮ ಗುಣಮಟ್ಟದ ಜೀವನ ಮತ್ತು ದೀರ್ಘಾಯುಷ್ಯವನ್ನು ನೀಡುವ ಅತ್ಯುತ್ತಮ ಚಿಕಿತ್ಸೆಯಾಗಿದೆ. ಇದರಿಂದ ರೋಗಿಗಳು ಮೊದಲಿನಂತೆ ನೆಮ್ಮದಿಯ ಜೀವನ ನಡೆಸಲು ಸಾಧ್ಯವಾಗುತ್ತದೆ.

- ಡಾ. ವಿಪಿನ್ ಕಾವೇರಪ್ಪ ವಿ.ಟಿ., ಡಾ. ತಿಮ್ಮಯ್ಯ ಕೆ.ಎ.

ಮಣಿಪಾಲ್ ಆಸ್ಪತ್ರೆ, ಮೈಸೂರು