ಹೆಬ್ಬಾಲೆ, ಜ.೨೨: ಸಮೀಪದ ತೊರೆನೂರು ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ೨೦೨೨-೨೩ನೇ ಸಾಲಿನಲ್ಲಿ ತಾಲೂಕು ಪಂಚಾಯಿತಿಯ ರೂ. ೨೭ ಲಕ್ಷ ಅನುದಾನದಲ್ಲಿ ನೂತನವಾಗಿ ನಿರ್ಮಿಸಲಾದ ವಿವೇಕ ಕೊಠಡಿಯನ್ನು ಮಾಜಿ ಶಾಸಕ ಎಂ.ಪಿ. ಅಪ್ಪಚ್ಚು ರಂಜನ್ ಉದ್ಘಾಟಿಸಿದರು.
ನಂತರ ಶಾಲಾ ಸಭಾಂಗಣದಲ್ಲಿ ನಡೆದ ಕಾರ್ಯಕ್ರಮದಲ್ಲಿ ಮಾತನಾಡಿದ ರಂಜನ್, ಸರ್ಕಾರಿ ಶಾಲೆಗಳ ಉಳಿವಿಗಾಗಿ ಆಂಗ್ಲ ಮಾಧ್ಯಮ ತರಗತಿ ಆರಂಭಿಸುವAತೆ ಸರ್ಕಾರಕ್ಕೆ ಸಲಹೆ ನೀಡಿದರು.
ತಾಲೂಕು ಗ್ಯಾರಂಟಿ ಅನುಷ್ಠಾನ ಸಮಿತಿ ಅಧ್ಯಕ್ಷ ವಿ.ಪಿ. ಶಶಿಧರ್ ಮಾತನಾಡಿ, ಶಿಕ್ಷಣ ಇಲಾಖೆಯ ಅಭಿವೃದ್ಧಿ ಸರ್ಕಾರ ಹೆಚ್ಚಿನ ಒತ್ತು ನೀಡುತ್ತಿದೆ. ಮೂಲಭೂತ ಸೌಕರ್ಯಗಳೊಂದಿಗೆ ಸರ್ಕಾರಿ ಶಾಲೆಗಳಲ್ಲಿ ಗುಣಾತ್ಮಕ ಶಿಕ್ಷಣ ಒದಗಿಸಲಾಗುತ್ತಿದೆ. ವಿದ್ಯಾ ದೇಗುಲ ರಾಜಕೀಯ ವೇದಿಕೆ ಆಗದಿರಲಿ ಎಂದು ಹೇಳಿದರು.
ಶಾಲಾಭಿವೃದ್ಧಿ ಸಮಿತಿ ಅಧ್ಯಕ್ಷ ಟಿ.ಸಿ. ಸಂತೋಷ್ ಕುಮಾರ್ ಅಧ್ಯಕ್ಷತೆ ವಹಿಸಿದ್ದರು. ಈ ಸಂದರ್ಭ ಗ್ರಾಮ ಪಂಚಾಯಿತಿ ಉಪಾಧ್ಯಕ್ಷೆ ರೂಪ ಮಹೇಶ್, ಸದಸ್ಯರಾದ ಸಾವಿತ್ರಿ, ಶಿವಕುಮಾರ್, ಕೆ.ಬಿ. ದೇವರಾಜು, ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಅಧ್ಯಕ್ಷ ಟಿ.ಬಿ. ಜಗದೀಶ್, ನಿರ್ದೇಶಕರಾದ ಕೆ.ಎಸ್. ಕೃಷ್ಣೇಗೌಡ, ಅಳುವಾರದ ಮೂರ್ತಿ, ಎಪಿಸಿಎಂಎಸ್ಸಿ ನಿರ್ದೇಶಕ ಹೆಚ್.ಬಿ. ಚಂದ್ರಪ್ಪ, ನೀರು ಬಳಕೆದಾರರ ಸಂಘದ ಅಧ್ಯಕ್ಷ ಟಿ.ಕೆ. ಪಾಂಡುರAಗ, ಕ್ಷೇತ್ರ ಶಿಕ್ಷಣಾಧಿಕಾರಿ ಎಂ. ಕೃಷ್ಣಪ್ಪ ಮುಖ್ಯ ಶಿಕ್ಷಕಿ ಜಿ.ಎನ್. ಭಾಗ್ಯಲಕ್ಷಿö್ಮÃ, ಶಿಕ್ಷಕರಾದ ಅನಿಲ್, ಮಾಲತೇಶ್, ಶಾಲಾಭಿವೃದ್ಧಿ ಸಮಿತಿಯ ಸದಸ್ಯರು ಹಾಗೂ ಶಾಲಾ ವಿದ್ಯಾರ್ಥಿಗಳು ಪಾಲ್ಗೊಂಡಿದ್ದರು.