ನಾಪೋಕ್ಲು, ಜ. ೨೨: ಇಲ್ಲಿಗೆ ಸಮೀಪದ ಮೂರ್ನಾಡು ಸರ್ಕಾರಿ ಪ್ರೌಢಶಾಲೆ ಮೈದಾನದಲ್ಲಿ ಗ್ರಾಮ ಪಂಚಾಯಿತಿ ಹಾಗೂ ಸಂಘ-ಸAಸ್ಥೆಗಳ ಸಹಯೋಗದೊಂದಿಗೆ ನೂತನವಾಗಿ ನಿರ್ಮಿಸಿದ ಸುಸಜ್ಜಿತ ಶೌಚಾಲಯವನ್ನು ಉದ್ಘಾಟಿಸಲಾಯಿತು.
ಮೂರ್ನಾಡು ತ್ರಿನೇತ್ರ ವಾಹನ ಮಾಲೀಕರ ಹಾಗೂ ಚಾಲಕರ ಸಂಘ, ಆಪ್ತಮಿತ್ರ ಬಳಗ, ಗಜಾನನ ಯುವಕ ಸಂಘ ಹಾಗೂ ಕಾಂತೂರು-ಮೂರ್ನಾಡು ಗ್ರಾಮ ಪಂಚಾಯಿತಿ ಜೊತೆಗೂಡಿ ಶೌಚಾಲಯವನ್ನು ನಿರ್ಮಿಸಿದೆ.
ಕಾರ್ಯಕ್ರಮದಲ್ಲಿ ಸರಕಾರಿ ಪ್ರೌಢಶಾಲೆ ನಿವೃತ್ತ ಮುಖ್ಯೋಪಾಧ್ಯಾಯ ಗುರುರಾಜ್ ಮಾತನಾಡಿ, ಈ ಮೂರು ಸಂಘಗಳು ನಮ್ಮ ಶಾಲೆಗೆ ಉಪಯೋಗವಾಗುವಂತಹ ಕೆಲಸಗಳನ್ನು ಮಾಡಿಕೊಟ್ಟಿದೆ. ಗ್ರಾಮ ಪಂಚಾಯಿತಿ ಆಡಳಿತ ಮಂಡಳಿ ಶಾಲೆಗೆ ಉಪಯುಕ್ತ ಕೆಲಸಗಳನ್ನು ಮಾಡಿಕೊಟ್ಟಿದನ್ನು ಸ್ಮರಿಸಿ, ಇದೇ ರೀತಿ ನಮ್ಮ ಶಾಲೆಗೆ ಬೆಂಬಲವಾಗಿ ಕೈಜೋಡಿಸಬೇಕೆಂದು ಮನವಿ ಮಾಡಿದರು.
ಗ್ರಾಮ ಪಂಚಾಯಿತಿ ಅಧ್ಯಕ್ಷ ಕುಶಾನ್ ರೈ ಬಿ.ಎಸ್., ಉಪಾಧ್ಯಕ್ಷೆ ರೇಖಾ ಬಿ.ಎ¸.ï, ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಚಂದ್ರಮೌಳಿ ಕೆ.ಎಂ. ಹಾಗೂ ಪಂಚಾಯಿತಿ ಸದಸ್ಯರು, ಆಪ್ತಮಿತ್ರ ಬಳಗದ ಅಧ್ಯಕ್ಷ ಚಂದ್ರಶೇಖರ್ ಕುಳಾಲ್, ಪದಾಧಿಕಾರಿಗಳು ಹಾಗೂ ಸದಸ್ಯರು, ತ್ರಿನೇತ್ರ ವಾಹನ ಮಾಲೀಕರ ಹಾಗೂ ಚಾಲಕರ ಸಂಘದ ಅಧ್ಯಕ್ಷ ಸಜನ್ ಗಣಪತಿ, ಪದಾಧಿಕಾರಿಗಳು ಹಾಗೂ ಸದಸ್ಯರು, ಗಜಾನನ ಯುವಕ ಸಂಘದ ಅಧ್ಯಕ್ಷ ನವೀನ್ ಪದಾಧಿಕಾರಿಗಳು ಹಾಗೂ ಸದಸ್ಯರು, ಸುರೇಶ್ ಮುತ್ತಪ್ಪ, ಸರ್ಕಾರಿ ಪ್ರೌಢಶಾಲೆ ಮುಖ್ಯ ಶಿಕ್ಷಕಿ ದೇಚಮ್ಮ, ಶಿಕ್ಷಕರು ಹಾಗೂ ವಿದ್ಯಾರ್ಥಿಗಳು ಉಪಸಿತರಿದ್ದರು.