ಮಡಿಕೇರಿ, ಜ. ೨೩: ವೀರಾಜಪೇಟೆ ತಾಲೂಕು ಪಂಚಾಯಿತಿ ಸಾಮರ್ಥ್ಯ ಸೌಧದಲ್ಲಿ ಪೊನ್ನಂಪೇಟೆ ತಾಲೂಕು ಗ್ಯಾರಂಟಿ ಅನುಷ್ಠಾನ ಸಮಿತಿ ಪ್ರಗತಿ ಪರಿಶೀಲನಾ ಸಭೆ ತಾಲೂಕು ಗ್ಯಾರಂಟಿ ಯೋಜನೆಗಳ ಅಧ್ಯಕ್ಷ ಪ್ರಶಾಂತ್ ಅಧ್ಯಕ್ಷತೆಯಲ್ಲಿ ಜರುಗಿತು.

ತಾಲೂಕಿನ ವ್ಯಾಪ್ತಿಯಲ್ಲಿ ಗೃಹಲಕ್ಷಿö್ಮ ಯೋಜನೆಯಲ್ಲಿ ಒಟ್ಟು ೧.೧೭ ಫಲಾನುಭವಿಗಳಿಗೆ ಸೆಪ್ಟೆಂಬರ್ ತಿಂಗಳವರೆಗೆ ಗೃಹಲಕ್ಷಿö್ಮ ಹಣ ಪಾವತಿಯಾಗಿದ್ದು ಇನ್ನೂ ೫ ತಿಂಗಳು ಬಾಕಿ ಇದ್ದು ಮುಂದಿನ ದಿನಗಳಲ್ಲಿ ಬಿಡುಗಡೆಯಾಗಲಿದೆ ಎಂದು ಸಂಬAಧಪಟ್ಟ ಅಧಿಕಾರಿಗಳು ಸಭೆಗೆ ಮಾಹಿತಿ ನೀಡಿದರು.

ಗೃಹಲಕ್ಷಿö್ಮ ಯೋಜನೆಯಡಿ ಸೆಪ್ಟೆಂಬರ್ ತಿಂಗಳವರೆಗೆ ೭೨೦ ಹೊಸ ಫಲಾನುಭವಿಗಳು ಹೆಸರು ನೋಂದಾಯಿಸಿಕೊAಡಿದ್ದು ಯೋಜನೆಯ ಸದುಪಯೋಗವನ್ನು ಪಡೆದುಕೊಳ್ಳುತ್ತಿದ್ದು, ಐಟಿ ಮತ್ತು ಜಿಎಸ್‌ಟಿ ಪಾವತಿ ಮಾಡುತ್ತಿರುವ ಫಲಾನುಭವಿಗಳಲ್ಲಿ ಕೆಲವು ತಾಂತ್ರಿಕ ದೋಷಗಳು ಕಂಡುಬರುತ್ತಿದ್ದು, ಈ ಬಗ್ಗೆ ಸರ್ಕಾರದ ಗಮನಕ್ಕೆ ತಂದು ಸಮಸ್ಯೆ ಬಗೆಹರಿಸಲು ಸಭೆಯಲ್ಲಿ ಚರ್ಚಿಸಲಾಯಿತು.

ಸರ್ಕಾರ ಹೊಸದಾಗಿ ಮಹಿಳೆಯರಿಗಾಗಿ ಗೃಹಲಕ್ಷಿö್ಮ ವಿವಿಧೋದ್ದೇಶ ಸಹಕಾರ ಸಂಘವನ್ನು ರಚನೆ ಮಾಡಿದ್ದು ಮೊದಲ ಹಂತದಲ್ಲಿ ಈಗಾಗಲೇ ತಾಲೂಕಿನಲ್ಲಿ ಫಲಾನುಭವಿಗಳನ್ನು ಆಯ್ಕೆ ಮಾಡಿದ್ದು, ರೂ. ೧,೨೫೦ ಪಾವತಿ ಮಾಡಿ ನೋಂದಾಯಿಸಿಕೊಳ್ಳುವ ಮೂಲಕ ಮಹಿಳೆಯರಿಗೆ ೩ ಸಾವಿರದಿಂದ ೩ ಲಕ್ಷದವರೆಗೂ ಸಾಲ ಸೌಲಭ್ಯ ಪಡೆದುಕೊಳ್ಳಬಹುದಾಗಿದೆ ಎಂದು ಸಂಬAಧಪಟ್ಟ ಅಧಿಕಾರಿಗಳು ಸಭೆಗೆ ಮಾಹಿತಿ ನೀಡಿದರು.

ಅನ್ನಭಾಗ್ಯ ಯೋಜನೆಯಡಿ ಹೊಸ ಪಡಿತರ ಚೀಟಿಗೆ ಅರ್ಜಿ ಸಲ್ಲಿಸಿದ ಫಲಾನುಭವಿಗಳಿಗೆ ಪಡಿತರ ಚೀಟಿಗಳನ್ನು ಪಡೆದುಕೊಳ್ಳುವ ಅವಕಾಶ ಕಲ್ಪಿಸಲಾಗಿದೆ ಅರ್ಜಿ ಸಲ್ಲಿಸಿದ ಫಲಾನುಭವಿಗಳು ಸದುಪಯೋಗವನ್ನು ಪಡೆದುಕೊಳ್ಳಲು ಸಭೆಯಲ್ಲಿ ಆಹಾರ ನಿರೀಕ್ಷಕರು ಮಾಹಿತಿ ನೀಡಿದರು.

ತೆರಿಗೆದಾರರು, ಪಿಎಂ ಕಿಸಾನ್ ಕಾರ್ಡ್ ಹೊಂದಿರುವವರ ಆದಾಯ ಪ್ರಮಾಣ ಪತ್ರಗಳನ್ನು ಪರಿಶೀಲಿಸಿ ಬದಲಾವಣೆ ಮಾಡಲಾಗುತ್ತಿದ್ದು, ಕೆಲವೊಂದು ತಪ್ಪಾಗಿ ಪಟ್ಟಿಯಲ್ಲಿ ಬಡವರಿಗೂ ಬಿಪಿಎಲ್ ಕಾರ್ಡ್ ನಿಂದ ಎಪಿಎಲ್ ಕಾರ್ಡ್ಗಳಾಗಿ ಪರಿವರ್ತಿಸಲು ಬಂದಿದ್ದು ಇಂತಹ ಸಮಸ್ಯೆಗಳನ್ನು ಬಗೆಹರಿಸಲು ಸಭೆಯಲ್ಲಿ ಕೋರಲಾಯಿತು.

ಸಭೆಯಲ್ಲಿ ಶಕ್ತಿ ಯೋಜನೆ, ಗೃಹಜ್ಯೋತಿ, ಯುವ ನಿಧಿ ಯೋಜನೆಗಳ ಕುರಿತು ಚರ್ಚಿಸಲಾಯಿತು. ಸಭೆಯಲ್ಲಿ ವೀರಾಜಪೇಟೆ ತಾ.ಪಂ. ಇಒ ಕೆ.ಸಿ. ಅಪ್ಪಣ್ಣ, ಗ್ಯಾರಂಟಿ ಯೋಜನೆಯ ಸದಸ್ಯರು ಹಾಗೂ ವಿವಿಧ ಇಲಾಖೆಯ ಅಧಿಕಾರಿಗಳು ಉಪಸ್ಥಿತರಿದ್ದರು.