ಸೋಮವಾರಪೇಟೆ, ಜ. ೨೩: ಇಲ್ಲಿನ ಇಂದಿರಾಗಾAಧಿ ಅಭಿಮಾನಿಗಳ ಬಳಗದ ವತಿಯಿಂದ ೩೯ನೇ ವರ್ಷದ ರಾಜ್ಯಮಟ್ಟದ ಬೆಳ್ಳಿ ಬಟ್ಟಲಿನ ಕಬಡ್ಡಿ ಪಂದ್ಯಾವಳಿ ತಾ. ೨೪ ರಂದು (ಇಂದು) ಪಟ್ಟಣದ ಸಾಕಮ್ಮನ ಬಂಗಲೆ ಮುಂಭಾಗದ ಮೈದಾನದಲ್ಲಿ ನಡೆಯಲಿದೆ.
ಸಂಘವು ಸ್ಥಾಪನೆಯಾಗಿ ೪೧ ವರ್ಷಗಳಾಗಿದ್ದು, ಕಳೆದ ೩೮ ವರ್ಷಗಳಿಂದ ರಾಜ್ಯಮಟ್ಟದ ಕಬಡ್ಡಿ ಪಂದಾವಳಿಯನ್ನು ಆಯೋಜಿಸಿಕೊಂಡು ಬರಲಾಗಿದೆ. ಈ ಬಾರಿ ೩೯ನೇ ವರ್ಷದ ಪಂದ್ಯಾಟ ಆಯೋಜಿಸಲಾಗಿದ್ದು, ಸಂಘದ ಪದಾಧಿಕಾರಿಗಳು ಟ್ರೋಫಿ ಅನಾವರಣ ಮಾಡಿದರು.
ಇಂದು ಬೆಳಿಗ್ಗೆ ೯ ಗಂಟೆಯಿAದ ಪ್ರಾಥಮಿಕ, ಪ್ರೌಢ ಹಾಗೂ ಕಾಲೇಜು ವಿಭಾಗ, ೨೦ ವರ್ಷ ವಯೋಮಾನದೊಳಗಿನ ಯುವಕರು ಮತ್ತು ಸಾರ್ವಜನಿಕ ವಿಭಾಗದಲ್ಲಿ ಪಂದ್ಯಾವಳಿ ನಡೆಯಲಿದೆ.
ಸಾರ್ವಜನಿಕ ವಿಭಾಗದಲ್ಲಿ ನಡೆಯುವ ರಾಜ್ಯಮಟ್ಟದ ಪಂದ್ಯಾವಳಿಯಲ್ಲಿ ವಿಜೇತರಾಗುವ ತಂಡಕ್ಕೆ ಪ್ರಥಮ ಬಹುಮಾನವಾಗಿ ಆಕರ್ಷಕ ಟ್ರೋಫಿ ಹಾಗೂ ರೂ. ೧೫ ಸಾವಿರ ನಗದು, ದ್ವಿತೀಯ ಬಹುಮಾನವಾಗಿ ರೂ. ೮ ಸಾವಿರ ನಗದು ಹಾಗೂ ಟ್ರೋಫಿ, ತೃತೀಯ ರೂ. ೫ ಸಾವಿರ ನಗದು ಹಾಗೂ ಟ್ರೋಫಿ ನೀಡಲಾಗುವುದು. ಜಿಲ್ಲಾ ಮಟ್ಟದ ಪಂದ್ಯಾಟ ವಿಜೇತ ತಂಡಗಳಿಗೂ ಬಹುಮಾನ ನೀಡಲಾಗುವುದು ಎಂದು ಅಧ್ಯಕ್ಷ ಹೆಚ್.ಎ. ನಾಗರಾಜು ತಿಳಿಸಿದ್ದಾರೆ.