ಸುಂಟಿಕೊಪ್ಪ, ಜ. ೨೪: ರಾಷ್ಟçಪಿತ ಮಹಾತ್ಮ ಗಾಂಧೀಜಿ ಮದ್ಯಪಾನ ಮುಕ್ತ ಸಮಾಜದಿಂದ ಮಾತ್ರ ರಾಮರಾಜ್ಯ ಸ್ಥಾಪನೆ ಎಂಬುದನ್ನು ಪ್ರತಿಪಾದಿಸಿದ್ದರು. ಆದರೆ ಅವರ ತತ್ವ ಆದರ್ಶಗಳು ಇಂದು ಪಾಲನೆ ಆಗುತ್ತಿಲ್ಲ ಎಂದು ಕೊಡಗು ಜಿಲ್ಲಾ ಜನಜಾಗೃತಿ ವೇದಿಕೆಯ ಸ್ಥಾಪಕ ಅಧ್ಯಕ್ಷ ಎಂ.ಬಿ. ಅಭಿಮನ್ಯುಕುಮಾರ್ ವಿಷಾದಿಸಿದರು.
ಇಲ್ಲಿನ ಮಂಜನಾಥಯ್ಯ ಮೀನಾಕ್ಷಮ್ಮ ಕಲ್ಯಾಣ ಮಂಟಪದಲ್ಲಿ ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ. ಟ್ರಸ್ಟ್ ಮಡಿಕೇರಿ ತಾಲೂಕು, ಜಿಲ್ಲಾ ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ ಟ್ರಸ್ಟ್, ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ವ್ಯಸನ ಮುಕ್ತಿ ಮತ್ತು ಸಂಶೋಧನ ಕೇಂದ್ರ ರಾಯಿಲ ಉಜಿರೆ, ಕರ್ನಾಟಕ ರಾಜ್ಯ ಮದ್ಯಪಾನ ಸಂಯಮ ಮಂಡಳಿ-ಬೆAಗಳೂರು ಮತ್ತು ಪಗ್ರತಿ ಬಂಧು ಸ್ವ-ಸಹಾಯ ಸಂಘಗಳ ಒಕ್ಕೂಟ-ಸುಂಟಿಕೊಪ್ಪ ವಲಯದ ಎಲ್ಲಾ ಅಂಗ ಸಂಸ್ಥೆಗಳು, ಅರಕ್ಷಕ ಠಾಣೆ ಪ್ರಾಥಮಿಕ ಆರೋಗ್ಯ ಕೇಂದ್ರ, ನವಜೀವನ ಸಮಿತಿ, ಶೌರ್ಯ ವಿಪತ್ತು ನಿರ್ವಹಣ ಘಟಕ-ಮಡಿಕೇರಿ ತಾಲೂಕು ಹಾಗೂ ಸ್ಥಳೀಯ ಸಂಸ್ಥೆಗಳ ನೆರವಿನೊಂದಿಗೆ ೨೦೪೦ನೇ ಮದ್ಯವರ್ಜನ ಶಿಬಿರದ ಉದ್ಘಾಟನೆಯನ್ನು ನೆರÀವೇರಿಸಿ ಅವರು ಮಾತನಾಡಿದರು.
ಎಲ್ಲಾ ಕ್ಷೇತ್ರಗಳಲ್ಲಿ ಶ್ರೀಕ್ಷೇತ್ರ ಧರ್ಮಸ್ಥಳವು ಛಾಪನ್ನು ಮೂಡಿಸಿದ್ದು, ಮನೆ ಮನೆಗಳಲ್ಲಿ ಶಾಂತಿ, ನೆಮ್ಮದಿ ನೆಲೆಸುವ ನಿಟ್ಟಿನಲ್ಲಿ ಮದ್ಯಪಾನ ಮುಕ್ತರಾಗಿಸುವ ತಪಸ್ಸನ್ನು ಕೈಗೊಂಡಿದ್ದು ಯಾವುದೇ ಪ್ರತಿಫಲಾಪೇಕ್ಷೆ ಇಲ್ಲದೆ ಸೇವೆ ಸಲ್ಲಿಸುತ್ತಿದೆ ಎಂದರು.
ಮುಖ್ಯ ಅತಿಥಿಗಳಲ್ಲಿ ಒಬ್ಬರಾಗಿದ್ದ ಮದ್ಯವರ್ಜನ ಶಿಬಿರದ ವ್ಯವಸ್ಥಾಪನ ಸಮಿತಿಯ ಅಧ್ಯಕ್ಷರೂ ಆಗಿರುವ ಸುಂಟಿಕೊಪ್ಪ ಗ್ರಾಮ ಪಂಚಾಯಿತಿ ಅಧ್ಯಕ್ಷ ಪಿ.ಆರ್. ಸುನಿಲ್ ಕುಮಾರ್ ಮಾತನಾಡಿ, ಶ್ರೀಕ್ಷೇತ್ರ ಧರ್ಮಸ್ಥಳದ ಬಗ್ಗೆ ಸಾಕಷ್ಟು ಅಪಪ್ರಚಾರ, ಸುಳ್ಳಿನ ವದಂತಿಗಳು ಹರಡಿವೆ. ಆದರೆ ಸತ್ಯಕ್ಕೆ ಜಯವಿದೆ ಎಂಬುದನ್ನು ಇತ್ತೀಚಿನ ದಿನಗಳಲ್ಲಿ ನಡೆದ ಬೆಳವಣಿಗೆಗಳಲ್ಲಿ ತಿಳಿದು ಬಂದಿದೆ ಎಂದು ಅವರು ಹೇಳಿದರು.
ಜಿಲ್ಲಾ ಜನಜಾಗೃತಿ ವೇದಿಕೆಯ ಸದಸ್ಯರು ಹಾಗೂ ವಿಶ್ವ ಹಿಂದೂ ಪರಿಷತ್ನ ಮಾಜಿ ಜಿಲ್ಲಾ ಕಾರ್ಯದರ್ಶಿ ಡಿ.ನರಸಿಂಹ ಮಾತನಾಡಿ, ಜನರಿಂದ ಜನರಿಗಾಗಿ ಜನರಿಗೋಸ್ಕರ ತಮ್ಮ ಕ್ಷೇತ್ರದಲ್ಲಿ ಬಂದ ಕಾಣಿಕೆ ಹಣವನ್ನು ಮರಳಿ ಜನರಿಗೆ ನೀಡಿದ ಅಪರೂಪದಲ್ಲಿ ಅಪರೂಪದ ಧರ್ಮಕ್ಷೇತ್ರ ಶ್ರೀಕ್ಷೇತ್ರ ಧರ್ಮಸ್ಥಳ ಎಂದು ಬಣ್ಣಿಸಿದರು.
ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ ಜಿಲ್ಲಾ ಜನಜಾಗೃತಿ ವೇದಿಕೆಯ ಅಧ್ಯಕ್ಷ ಎ.ಟಿ. ರಾಮಸ್ವಾಮಿ ಮಾತನಾಡಿ, ಶ್ರೀಕ್ಷೇತ್ರ ಧರ್ಮಸ್ಥಳದ ಕೆಲವು ಕಾರ್ಯಕ್ರಮಗಳು ಹಣ ಮಾಡುವ ಉದ್ದೇಶವನ್ನು ಹೊಂದಿದೆ. ಭಾವನೆಯನ್ನು ಕೆಲವರು ಹೊಂದಿದ್ದಾರೆ, ಆದರೆ ಮದ್ಯವರ್ಜನ ಶಿಬಿರವು ಸೇರಿದಂತೆ ಕ್ಷೇತ್ರದ ಎಲ್ಲಾ ಕಾರ್ಯಕ್ರಮಗಳು ಜನೋಪಯೋಗಿ ಮತ್ತು ಸಮಾಜಮುಖಿಯಾಗಿವೆ ಎಂದು ಹೇಳಿದರು. ಮದ್ಯವರ್ಜನ ಶಿಬಿರದ ಸದುಪಯೋಗವನ್ನು ಪಡೆದುಕೊಳ್ಳುವಂತೆ ಅವರು ಕರೆ ನೀಡಿದರು.
ಕಾರ್ಯಕ್ರಮದಲ್ಲಿ ಸುಂಟಿಕೊಪ್ಪ ಪೊಲೀಸ್ ಠಾಣೆಯ ಸಹಾಯಕ ಉಪನಿರೀಕ್ಷಕ ಬಸಪ್ಪ, ಮದ್ಯವರ್ಜನ ಶಿಬಿರದ ಗೌರವಧ್ಯಕ್ಷ ವಿ.ಎ. ಸಂತೋಷ್, ಶ್ರೀರಾಮ ಸೇವಾ ಸಮಿತಿಯ ಅಧ್ಯಕ್ಷ ಎಸ್.ಬಿ. ಶಂಕರ್, ತಾಲೂಕು ಯೋಜನಾಧಿಕಾರಿ ಎನ್. ಪುರುಷೋತ್ತಮ್, ಶಿಬಿರದ ಉಪಾಧ್ಯಕ್ಷ ಪಿ.ಆರ್. ಸುಕುಮಾರ್ ಉಪಸ್ಥಿತರಿದ್ದರು.
ಕಾರ್ಯಕ್ರಮದಲ್ಲಿ ಮೊದಲಿಗೆ ಉಡುಪಿ ಪ್ರಾದೇಶಿಕ ಕಚೇರಿಯ ಯೋಜನಾಧಿಕಾರಿ ಗಣೇಶ್ ಆಚಾರ್ಯ ಪ್ರಾಸ್ತಾವಿಕವಾಗಿ ಮಾತನಾಡಿ, ಮದ್ಯವರ್ಜನ ಶಿಬಿರಗಳಿಂದ ಸರಿಸುಮಾರು ಒಂದುವರೆ ಲಕ್ಷ ವ್ಯಸನಿಗಳು ವ್ಯಸನದಿಂದ ಮುಕ್ತರಾಗಿದ್ದಾರೆ ಎಂದರು.
ಋತುಶ್ರೀ ಪ್ರಾರ್ಥಿಸಿ, ಮಹೇಂದ್ರ ಸ್ವಾಗತಿಸಿ, ಸಂತೋಷ್ ನಿರೂಪಿಸಿ, ವಂದಿಸಿದರು.