ಮೈಸೂರು, ಜ. ೨೪: ಮೈಸೂರು-ಕುಶಾಲನಗರ ರೈಲು ಮಾರ್ಗ ಯೋಜನೆಯನ್ನು ಸ್ಥಗಿತಗೊಳಿಸುವ ರೈಲ್ವೆ ಇಲಾಖೆಯ ಕ್ರಮದ ಬಗ್ಗೆ ತೀವ್ರ ಕಳವಳ ವ್ಯಕ್ತಪಡಿಸಿರುವ ಮೈಸೂರು ವಾಣಿಜ್ಯ ಮತ್ತು ಕೈಗಾರಿಕಾ ಸಂಸ್ಥೆ (ಒಅಅI) ಪ್ರಧಾನಮಂತ್ರಿಗಳು, ರಾಜ್ಯದ ಮುಖ್ಯಮಂತ್ರಿಗಳು ಹಾಗೂ ನೈಋತ್ಯ ರೈಲ್ವೇ ಅಧಿಕಾರಿಗಳಿಗೆ ಯೋಜನೆಯನ್ನು ಅನುಮೋದಿಸಿ ಅದನ್ನು ಕಾರ್ಯಗತಗೊಳಿಸುವಂತೆ ಪತ್ರ ಮುಖೇನ ಒತ್ತಾಯಿಸಿದೆ.
ಈ ಕುರಿತು ಮಾಹಿತಿ ನೀಡಿದ ಎಂಸಿಸಿಐ ಅಧ್ಯಕ್ಷ ಕೆ.ಬಿ. ಲಿಂಗರಾಜು ಅವರು, ಈ ಕುರಿತು ಕೊಡಗು ಜಿಲ್ಲಾ ಚೇಂಬರ್ ಆಫ್ ಕಾಮರ್ಸ್ ಪದಾಧಿಕಾರಿಗಳನ್ನೂ ಸಂಪರ್ಕಿಸಿದ್ದು ಜಂಟಿಯಾಗಿ ರೈಲ್ವೇ ಮಾರ್ಗ ಅನುಷ್ಠಾನಕ್ಕೆ ಪ್ರಯತ್ನಿಸುವುದಾಗಿ ತಿಳಿಸಿದರು. ಮುಂದಿನ ದಿನಗಳಲ್ಲಿ ಯೋಜನೆಯ ಕ್ಷಿಪ್ರ ಅನುಷ್ಠಾನಕ್ಕಾಗಿ ಪ್ರಧಾನಮಂತ್ರಿ ಹಾಗೂ ಮುಖ್ಯಮಂತ್ರಿಗಳ ಬಳಿಗೂ ನಿಯೋಗವನ್ನು ಕೊಂಡೊಯ್ಯಲಿದ್ದೇವೆ ಎಂದು ತಿಳಿಸಿದರು.
ಈಗಾಗಲೇ ರೈಲ್ವೇ ಜನರಲ್ ಮ್ಯಾನೇಜರ್ಗೆ ಬರೆದ ಪತ್ರದಲ್ಲಿ, ಲಿಂಗರಾಜು ಅವರು ಮೈಸೂರು ಮತ್ತು ಕುಶಾಲನಗರ ನಡುವಿನ ಹೊಸ ರೈಲು ಮಾರ್ಗ ಯೋಜನೆಯು ಮೈಸೂರು ಮತ್ತು ಕೊಡಗು ಜಿಲ್ಲೆಗಳ ಜನರ ಬಹಳ ವರ್ಷದ ಆಕಾಂಕ್ಷೆಯಾಗಿದೆ ಎಂದು ತಿಳಿಸಿದ್ದು, ಪರಿಸರಕ್ಕೆ ಹಾನಿಯಿಲ್ಲದ ಈ ರೈಲು ಮಾರ್ಗ ರಸ್ತೆ ಸಂಚಾರ ದಟ್ಟಣೆಯನ್ನು ಕಡಿಮೆ ಮಾಡುತ್ತದೆ. ಇದರಿಂದಾಗಿ ಪ್ರಯಾಣದ ಸಮಯ ಮತ್ತು ವೆಚ್ಚ ಎರಡರಲ್ಲೂ ಉಳಿತಾಯವಾಗುತ್ತದೆ ಎಂದು ಹೇಳಿದ್ದಾರೆ.
ಮೈಸೂರಿನ ಇಬ್ಬರು ಮಾಜಿ ಸಂಸದರಾದ ಎ.ಹೆಚ್. ವಿಶ್ವನಾಥ್ ಮತ್ತು ಪ್ರತಾಪ್ ಸಿಂಹ ಅವರು ಈ ಯೋಜನೆಯ ಬಗ್ಗೆ ತೀವ್ರ ಆಸಕ್ತಿಯನ್ನು ತೋರಿಸಿದ್ದಾರೆ ಎಂದು ಪತ್ರದಲ್ಲಿ ೪ಏಳನೇ ಪುಟಕ್ಕೆ
(ಮೊದಲ ಪುಟದಿಂದ) ತಿಳಿಸಿದ್ದು, ಈ ಯೋಜನೆಯ ಅನುಷ್ಠಾನದೊಂದಿಗೆ, ಮೈಸೂರು, ಹುಣಸೂರು ಮತ್ತು ಕುಶಾಲನಗರ ಪ್ರದೇಶಗಳಿಂದ ಕೈಗಾರಿಕಾ, ವಾಣಿಜ್ಯ ಮತ್ತು ಕೃಷಿ ಉತ್ಪನ್ನಗಳ ಸಾಗಣೆ ಸುಲಭವಾಗುತ್ತದೆ. ಇದರಿಂದಾಗಿ ಸ್ಥಳೀಯ ಕೈಗಾರಿಕೆಗಳಿಗೆ ಪ್ರಮುಖ ಉತ್ತೇಜನ ದೊರೆಯುತ್ತದೆ. ಕೊಡಗು ಜಿಲ್ಲೆಯ ಪ್ರವಾಸಿ ತಾಣಗಳಿಗೆ ರೈಲು ಸಂಪರ್ಕದಿAದ ದೇಶೀಯ ಮತ್ತು ಅಂತರರಾಷ್ಟಿçÃಯ ಪ್ರವಾಸಿಗರ ಒಳಹರಿವು ಗಣನೀಯವಾಗಿ ಹೆಚ್ಚಾಗುತ್ತದೆ ಎಂದು ಸಂಸ್ಥೆ ಹೇಳಿದೆ. ಯೋಜನೆಯ ನಿರ್ಮಾಣ ಮತ್ತು ಅದರ ನಂತರದ ಕಾರ್ಯಾಚರಣೆಗಳು ಸ್ಥಳೀಯ ನೂರಾರು ಯುವಕರಿಗೆ ನೇರ ಮತ್ತು ಪರೋಕ್ಷ ಉದ್ಯೋಗಾವಕಾಶಗಳನ್ನು ಸೃಷ್ಟಿಸುತ್ತವೆ ಎಂದು ಲಿಂಗರಾಜು ಪತ್ರದಲ್ಲಿ ತಿಳಿಸಿದ್ದಾರೆ.
ಅಲ್ಲದೆ, ರಸ್ತೆ ಸಂಚಾರ ದಟ್ಟಣೆ ಕಡಿಮೆಯಾಗುವುದರಿಂದ ಪ್ರಯಾಣದ ಸಮಯ ಮತ್ತು ವೆಚ್ಚ ಉಳಿತಾಯವಾಗುತ್ತದೆ. ಮುಖ್ಯವಾಗಿ, ರೈಲು ಸಾರಿಗೆಯು ರಸ್ತೆ ಸಾರಿಗೆಗೆ ಹೋಲಿಸಿದರೆ ಕಡಿಮೆ ಪರಿಸರ ಹಾನಿಯನ್ನುಂಟು ಮಾಡುತ್ತದೆ ಮತ್ತು ಹೆಚ್ಚು ಪರಿಸರ ಸ್ನೇಹಿಯಾಗಿದೆ. ಇದು ಸೈನಿಕರು ಮತ್ತು ಅಗತ್ಯ ಸೇವೆಗಳಿಗೆ ಸಂಚಾರವನ್ನು ಸುಗಮಗೊಳಿಸುತ್ತದೆ ಎಂದು ಪತ್ರದಲ್ಲಿ ತಿಳಿಸಲಾಗಿದ್ದು, ರೈಲ್ವೆ ಯೋಜನೆಯನ್ನು ಆದಷ್ಟು ಬೇಗ ಅನುಮೋದಿಸುವಂತೆ ಮತ್ತು ಅದರ ಅನುಷ್ಠಾನಕ್ಕೆ ಅಗತ್ಯ ಕ್ರಮಗಳನ್ನು ತೆಗೆದುಕೊಳ್ಳುವಂತೆ ಒತ್ತಾಯಿಸಲಾಗಿದೆ