ಕೂಡಿಗೆ, ಜ. ೨೪: ನಂಜರಾಯಪಟ್ಟಣ ಗ್ರಾಮ ಪಂಚಾಯಿತಿ, ಸರಕಾರಿ ಮಾದರಿ ಪ್ರಾಥಮಿಕ ಶಾಲೆ, ಎಸ್. ಡಿ.ಎಂ.ಸಿ, ಹಳೆ ವಿದ್ಯಾರ್ಥಿಗಳ ಸಂಘ ಸಂಯುಕ್ತ ಆಶ್ರಯದಲ್ಲಿ ೨೦೨೫-೨೬ನೇ ಸಾಲಿನ ಗ್ರಾಮೀಣ ಕ್ರೀಡಾಕೂಟ ಮತ್ತು ಗಣರಾಜ್ಯೋತ್ಸವ ಕಾರ್ಯಕ್ರಮ ಶಾಲಾ ಮೈದಾನದಲ್ಲಿ ತಾ. ೨೫ (ಇಂದು) ಮತ್ತು ತಾ. ೨೬ ರಂದು ನಡೆಯಲಿದೆ.

ಕ್ರೀಡಾಕೂಟದ ಧ್ವಜಾ ರೋಹಣವನ್ನು ನಂಜರಾಯಪಟ್ಟಣ ಗ್ರಾಮ ಪಂಚಾಯಿತಿ ಅಧ್ಯಕ್ಷ ಸಿ.ಎಲ್. ವಿಶ್ವ ನೆರವೇರಿಸಲಿದ್ದಾರೆ.ಕಾರ್ಯಕ್ರಮದಲ್ಲಿ ನಿವೃತ್ತ ಸೈನಿಕರು, ಶಾಲಾ ಎಸ್.ಡಿ.ಎಂ.ಸಿ. ಅಧ್ಯಕ್ಷರು, ಆಡಳಿತ ಮಂಡಳಿಯ ಸದಸ್ಯರು, ವಿವಿಧ ಸಂಘಗಳ ಅಧ್ಯಕ್ಷರು ಹಾಜರಿರಲಿದ್ದಾರೆ.