ಜ. ೨೪: ಮೂರ್ನಾಡು-ಕೋಡಂಬೂರುವಿನ ಬಿ.ಎಲ್. ಯಶಸ್ ರೈ ಈ ಸಾಲಿನ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ರಾಜ್ಯ ಯುವ ಪ್ರಶಸ್ತಿಗೆ ಕೊಡಗು ಜಿಲ್ಲೆಯಿಂದ ಭಾಜನರಾಗಿದ್ದಾರೆ. ಕರ್ನಾಟಕ ರಾಜ್ಯ ಯುವ ಸಂಘಗಳ ಒಕ್ಕೂಟ ಹಾಗೂ ಬೆಳಗಾವಿ ಜಿಲ್ಲಾ ಯುವ ಘಟಕದ ವತಿಯಿಂದ ನೀಡಲಾಗುವ ಈ ಪ್ರಶಸ್ತಿಗೆ ಇವರು ಭಾಜನರಾಗಿದ್ದಾರೆ.

ಇವರು ೨೦೨೫ ರಲ್ಲಿ ದೆಹಲಿಯಲ್ಲಿ ನಡೆದ ಸ್ವಾತಂತ್ರ‍್ಯ ದಿನಾಚರಣೆಯಲ್ಲಿ ವಿಶೇಷ ಯುವ ರಾಯಭಾರಿಯಾಗಿ ಕರ್ನಾಟಕವನ್ನು ಪ್ರತಿನಿಧಿಸಿದ್ದರು.ಅಲ್ಲದೆ ಜಿಲ್ಲಾ ಯುವ ಜನೋತ್ಸವದಲ್ಲಿ ಭಾಗವಹಿಸಿ ವಿಜ್ಞಾನ ಮೇಳದಲ್ಲಿ ಕೊಡಗು ಜಿಲ್ಲೆಯನ್ನು ಪ್ರತಿನಿಧಿಸಿದ್ದರು. ಪ್ರಶಸ್ತಿಯನ್ನು ತಾ. ೨೭ ರಂದು ಬೆಳಗಾವಿ ಜಿಲ್ಲೆ ಮೂಡಲಗಿಯಲ್ಲಿ ಯುವ ಜಾತ್ರೆ ಕಾರ್ಯಕ್ರಮದಲ್ಲಿ ಪ್ರದಾನ ಮಾಡಲಾಗುವುದು ಎಂದು ಕೊಡಗು ಜಿಲ್ಲಾ ಯುವ ಒಕ್ಕೂಟದ ಅಧ್ಯಕ್ಷ ಪಿ.ಪಿ. ಸುಕುಮಾರ್ ತಿಳಿಸಿದ್ದಾರೆ.