ವೀರಾಜಪೇಟೆ, ಜ. ೨೫: ವೀರಾಜಪೇಟೆ ತಾಲೂಕು ಗ್ಯಾರಂಟಿ ಅನುಷ್ಠಾನ ಸಮಿತಿ ಪ್ರಗತಿ ಪರಿಶೀಲನಾ ಸಭೆ ತಾಲೂಕು ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಅಧ್ಯಕ್ಷ ಪಿ.ವಿ. ಜಾನ್ಸನ್ ಅಧ್ಯಕ್ಷತೆಯಲ್ಲಿ ಜರುಗಿತು.
ವೀರಾಜಪೇಟೆಯ ಶಾಸಕರ ಕಚೇರಿಯಲ್ಲಿ ಆಯೋಜಿಸಿದ್ದ ಸಭೆಯಲ್ಲಿ ಮಾತನಾಡಿದ ಜಾನ್ಸನ್, ತಾಲೂಕಿನಲ್ಲಿ ಕಡುಬಡವರ ಬಿಪಿಎಲ್ ಕಾರ್ಡ್ಗಳೂ ರದ್ದಾಗಿವೆ. ಕೆಲವರಿಗೆ ತಾಂತ್ರಿಕ ದೋಷಗಳಿಂದ ಗೃಹಲಕ್ಷಿö್ಮ ಹಣ ಫಲಾನುಭವಿಗಳ ಖಾತೆಗೆ ಜಮಾ ಆಗುತ್ತಿಲ್ಲ. ಕೆಲವೆಡೆ ಕೆಎಸ್ಆರ್ಟಿಸಿ ಬಸ್ಗಳು ನಿಲುಗಡೆ ನೀಡುತ್ತಿಲ್ಲವೆಂಬ ದೂರುಗಳಿವೆ. ಆದ್ದರಿಂದ ಪ್ರತಿ ಹೋಬಳಿವಾರು ಬಿಪಿಎಲ್ ಕಾರ್ಡ್ ರದ್ದಾಗಿರುವವರು ಹಾಗೂ ಗೃಹಲಕ್ಷಿö್ಮ ಹಣ ಬರುತ್ತಿಲ್ಲವೆನ್ನುವಂತವರನ್ನು ಪಟ್ಟಿ ಮಾಡಿ ಅವರ ದಾಖಲೆಗಳನ್ನು ಪಡೆದು ಸತ್ಯಾಸತ್ಯತೆಯ ವರದಿಯನ್ನು ರಾಜ್ಯ ಸಮಿತಿಗೆ ಕಳುಹಿಸುವ ಕೆಲಸ ಮಾಡಲಾಗುವುದು. ಕೆಲವೆಡೆ ಬಸ್ಗಳು ನಿಲುಗಡೆ ನೀಡುತ್ತಿಲ್ಲವೆನ್ನುವ ದೂರುಗಳಿದ್ದು ಆ ಸಮಸ್ಯೆಯನ್ನು ಬಗೆಹರಿಸಲಾಗುವುದು ಎಂದು ತಿಳಿಸಿದರು.
ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಂಬAಧ ತಾಲೂಕಿನಲ್ಲಿ ಹೋಬಳಿವಾರು ಕುಂದುಕೊರತೆ ಸಭೆಯನ್ನು ನಡೆಸುವ ಮೂಲಕ ಸಮಸ್ಯೆಗಳಿದ್ದಲ್ಲಿ ಬಗೆಹರಿಸುವ ಕೆಲಸ ಮಾಡಲಾಗುವುದು. ಪಡಿತರ ಚೀಟಿ ವಿತರಣೆಯಲ್ಲಿ ಸಾಕಷ್ಟು ಗೊಂದಲವಿದೆ. ಬಿಪಿಎಲ್ ಪಡಿತರ ಚೀಟಿದಾರರನ್ನು ಎಪಿಎಲ್ಗೆ ವರ್ಗಾಯಿಸಿದ್ದು, ಇದನ್ನು ಕೂಡಲೇ ಪರಿಶೀಲಿಸಬೇಕು. ಬಡವರಿಗೆ ಅನ್ಯಾಯವಾಗಬಾರದು. ಬಿಪಿಎಲ್ನಿಂದ ಎಪಿಎಲ್ ಆಗಿದ್ದಲ್ಲಿ ಯಾವುದೇ ಕುಟುಂಬ ತಹಶೀಲ್ದಾರ್ ಕಚೇರಿಯ ಆಹಾರ ಶಾಖೆಗೆ ಮನವಿ ಸಲ್ಲಿಸಿ ಬಿಪಿಎಲ್ ಕಾರ್ಡ್ ಪಡೆಯುವಂತಾಗಬೇಕು. ಅರ್ಹರೆಲ್ಲರಿಗೂ ಬಿಪಿಎಲ್ ಪಡಿತರ ಚೀಟಿ ದೊರೆಯುವಂತಾಗಬೇಕು. ಆ ನಿಟ್ಟಿನಲ್ಲಿ ತಹಶೀಲ್ದಾರ್ ಕಚೇರಿಗೆ ಮನವಿ ಸಲ್ಲಿಸುವಂತೆ ತಿಳಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಆಹಾರ ನಿರೀಕ್ಷಕರಾದ ಸೀನಾ ಕುಮಾರಿ ಇತ್ತೀಚೆಗೆ ಬಿಪಿಎಲ್ನಿಂದ ಎಪಿಎಲ್ಗೆ ಬದಲಾಗಿದ್ದಲ್ಲಿ, ಸರಿಪಡಿಸಿಕೊಳ್ಳಲು ಅವಕಾಶವಿದೆ. ಆದರೆ, ಈ ಹಿಂದೆ ಆಗಿರುವುದನ್ನು ಸದ್ಯ ಬದಲಾಯಿಸಲು ಅವಕಾಶವಿಲ್ಲ ಎಂದು ವಿವರಿಸಿದರು.
ಸದಸ್ಯ ಹರೀಶ್ ಮಾತನಾಡಿ, ನ್ಯಾಯಬೆಲೆ ಅಂಗಡಿ ನಡೆಸುತ್ತಿರುವ ಕೆಲವರು ಜನರಿಂದ ಹಣ ತೆಗೆದುಕೊಳ್ಳುತ್ತಿದ್ದಾರೆ. ಕೆಲವರು ೪ ನ್ಯಾಯಬೆಲೆ ಅಂಗಡಿ ನಡೆಸುತ್ತಿದ್ದಾರೆ. ಇದರ ಬಗ್ಗೆ ಕ್ರಮ ತೆಗೆದುಕೊಳ್ಳಬೇಕು ಎಂದು ಪದೆ ಪದೇ ಸಭೆಯಲ್ಲಿ ಒತ್ತಾಯಿಸಲಾಗುತ್ತಿದೆ. ಆದರೆ ಆಹಾರ ಇಲಾಖೆಯವರು ಯಾವುದೇ ಕ್ರಮ ತೆಗೆದುಕೊಳ್ಳುತ್ತಿಲ್ಲ. ಸರಕಾರದಿಂದ ಉಚಿತವಾಗಿ ಕೊಡುವ ಅಕ್ಕಿಗೆ ಇಲ್ಲಿ ಹಣ ಕೊಡಬೇಕು ಎನ್ನುವುದು ಯಾವ ನ್ಯಾಯ ಎಂದು ಪ್ರಶ್ನಿಸಿದರು.
ಯುವನಿಧಿಗೆ ಸಂಬAಧಿಸಿದAತೆ ಮಾಹಿತಿ ನೀಡಿದ ಮಾಲತಿ ಅವರು ತಾಲೂಕಿನಲ್ಲಿ ೨೮೨ ಮಂದಿ ಯುವನಿಧಿ ಸೌಲಭ್ಯ ಪಡೆಯುತ್ತಿದ್ದಾರೆ ಎಂದು ಹೇಳಿದರು.
ಇದಕ್ಕೆ ಪ್ರತಿಕ್ರಿಯಿಸಿದ ಅಧ್ಯಕ್ಷರು ಹಾಡಿಗಳಲ್ಲಿ ಯುವನಿಧಿಯ ಬಗ್ಗೆ ಪ್ರಚಾರ ಆಗಬೇಕು ಎಸ್ಸಿ-ಎಸ್ಟಿ ವಿದ್ಯಾರ್ಥಿಗಳು ಇದರ ಪ್ರಯೋಜನ ಪಡೆದುಕೊಳ್ಳಬೇಕು ಎಂದರು. ಗೃಹಜ್ಯೋತಿ ಯೋಜನೆಯಡಿ ೩೨೯೨೮ ಗ್ರಾಹಕರು ನೋಂದಣಿಯಾಗಿದ್ದು ಶೇ. ೯೯.೧೪ ರಷ್ಟು ಪ್ರಗತಿ ಸಾಧಿಸಲಾಗಿದೆ ಎಂದು ಸೆಸ್ಕ್ ಸಹಾಯಕ ಕಾರ್ಯಪಾಲಕ ಅಭಿಯಂತರ ಪಿ. ಸುರೇಶ್ ಹೇಳಿದರು.
ಶಕ್ತಿ ಯೋಜನೆಗೆ ಸಂಬAಧಿಸಿದAತೆ ಮಾಹಿತಿ ನೀಡಿದ ಕೆಎಸ್ಆರ್ಟಿಸಿ ವೀರಾಜಪೇಟೆ ಘಟಕದ ನಿಯಂತ್ರಣಾಧಿಕಾರಿ ಚಂದ್ರಶೇಖರ್, ಅಗತ್ಯವಿರುವ ಕಡೆಗಳಲ್ಲಿ ಕೆಎಸ್ಆರ್ಟಿಸಿ ಬಸ್ಗಳ ಸಂಚಾರಕ್ಕೆ ಅವಕಾಶ ಕಲ್ಪಿಸಲಾಗಿದೆ ಎಂದರು.
ತಾಲೂಕಿನ ವ್ಯಾಪ್ತಿಯಲ್ಲಿ ಗೃಹಲಕ್ಷಿ÷್ಮಯೋಜನೆಗೆ ಸಂಬAಧಿಸಿದ ಮಾಹಿತಿ ನೀಡಿದ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಅಧಿಕಾರಿ ರೇಣುಕಾ ಹೊಸಮನಿ, ಗೃಹಲಕ್ಷಿö್ಮ ಯೋಜನೆಯ ಸಮನ್ವಯ ಅಧಿಕಾರಿ ತಂಗಮ್ಮ ಮಾಹಿತಿ ನೀಡಿ, ಗೃಹಲಕ್ಷಿ÷್ಮ ಯೋಜನೆಯಡಿ ಸೆಪ್ಟೆಂಬರ್ ತಿಂಗಳವರೆಗೆ ಹೊಸ ಫಲಾನುಭವಿಗಳು ಹೆಸರು ನೋಂದಾಯಿಸಿಕೊAಡಿದ್ದು ಯೋಜನೆಯ ಸದುಪಯೋಗವನ್ನು ಪಡೆದುಕೊಳ್ಳುತ್ತಿದ್ದಾರೆ ಎಂದರು.
ಐಟಿ ಮತ್ತು ಜಿಎಸ್ಟಿ ಪಾವತಿ ಮಾಡುತ್ತಿರುವ ಫಲನುಭವಿಗಳಲ್ಲಿ ಕೆಲವು ತಾಂತ್ರಿಕ ದೋಷಗಳು ಕಂಡುಬರುತ್ತಿದ್ದು, ಈ ಬಗ್ಗೆ ಸರಕಾರದ ಗಮನಕ್ಕೆ ತಂದು ಸಮಸ್ಯೆ ಬಗೆಹರಿಸಲು ಸಭೆಯಲ್ಲಿ ಚರ್ಚಿಸಲಾಯಿತು.
ಸಭೆಯಲ್ಲಿ ಶಕ್ತಿ ಯೋಜನೆ, ಗೃಹಜ್ಯೋತಿ, ಯುವ ನಿಧಿ ಯೋಜನೆಗಳ ಕುರಿತು ಚರ್ಚಿಸಲಾಯಿತು. ವೀರಾಜಪೇಟೆ ತಾಲೂಕು ಪಂಚಾಯಿತಿ ಕಾರ್ಯನಿರ್ವಹಣಾಧಿಕಾರಿ ಕೆ.ಸಿ. ಅಪ್ಪಣ್ಣ, ಮೋಹನ್, ಗ್ಯಾರಂಟಿ ಯೋಜನೆ ಅನುಷ್ಠಾನ ಸಮಿತಿ ಸದಸ್ಯರುಗಳಾದ ಆಲಿ, ಮುಕ್ಕಾಟಿರ ಕಾವೇರಮ್ಮ, ಇಂದಿರಾ ಜೆ.ಆರ್., ನಿಶಿತಾ ಕೆ.ಎ., ಎಂ.ಪಿ. ಗಣೇಶ್ ಹಾಗೂ ವಿವಿಧ ಇಲಾಖೆಯ ಅಧಿಕಾರಿಗಳು ಉಪಸ್ಥಿತರಿದ್ದರು.