ಕಣಿವೆ, ಜ. ೨೫: ಕಣಿವೆ ಹಾಗೂ ಹಕ್ಕೆ ಅವಳಿ ಗ್ರಾಮಗಳ ಸಾರ್ವಜನಿಕರಿಗೆ ಅನುಕೂಲವಾಗುವ ನಿಟ್ಟಿನಲ್ಲಿ ರೋಟರಿ ವತಿಯಿಂದ ನಿರ್ಮಾಣ ಮಾಡಿದ್ದ ಪ್ರಯಾಣಿಕರ ತಂಗುದಾಣವನ್ನು ಶಾಸಕ ಡಾ. ಮಂತರ್ ಗೌಡ ಉದ್ಘಾಟಿಸಿದರು.
ಗ್ರಾಮಾಭಿವೃದ್ಧಿಯಲ್ಲಿ ಸಂಘ-ಸAಸ್ಥೆಗಳ ಸಹಯೋಗ ಅತಿ ಮುಖ್ಯ. ಸಾಮಾಜಿಕ ಸೇವೆಯಲ್ಲಿ ತೊಡಗಿಸಿಕೊಂಡಿರುವ ರೋಟರಿ ಸಂಸ್ಥೆಯ ಸೇವೆ ಶ್ಲಾಘನೀಯ ಎಂದರು. ಈ ಸಂದರ್ಭ ಕುಶಾಲನಗರ ತಾಲೂಕು ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಅಧ್ಯಕ್ಷ ವಿ.ಪಿ. ಶಶಿಧರ್, ಜಿ.ಪಂ. ಮಾಜಿ ಅಧ್ಯಕ್ಷ ಹೆಚ್.ಎಸ್. ಅಶೋಕ್, ಕಾಂಗ್ರೆಸ್ ಮುಖಂಡರಾದ ನಟೇಶಗೌಡ, ಹೆಬ್ಬಾಲೆ ರಾಜಶೇಖರ, ಕುಶಾಲನಗರ ರೋಟರಿ ಅಧ್ಯಕ್ಷ ಉಲ್ಲಾಸ್ ಕೃಷ್ಣ, ಮಾಜಿ ಅಧ್ಯಕ್ಷ ಕೆ.ಎಸ್. ರಾಜಶೇಖರ್, ಎಸ್.ಕೆ. ಸತೀಶ್, ಶೋಭಾ ಸತೀಶ್, ಹೆಬ್ಬಾಲೆ ಗ್ರಾ.ಪಂ. ಉಪಾಧ್ಯಕ್ಷೆ ಪುಟ್ಟಲಕ್ಷಿö್ಮ ಇದ್ದರು.