ಸುಂಟಿಕೊಪ್ಪ, ಜ. ೨೫: ನಾಕೂರು, ಶಿರಂಗಾಲ, ಕಾನ್‌ಬೈಲ್ ಫ್ರೆಂಡ್ಸ್ ಯೂತ್ ಕ್ಲಬ್‌ನ ವತಿಯಿಂದ ೨೬ನೇ ವರ್ಷದ ವಾರ್ಷಿಕೋತ್ಸವ ಅಂಗವಾಗಿ ಗ್ರಾಮೀಣ ಕ್ರೀಡಾಕೂಟ ಹಾಗೂ ಡ್ಯಾನ್ಸ್ಮೇಳ ಕಾರ್ಯಕ್ರಮವು ಫೆ. ೨೨ ರಂದು ಕಾನ್‌ಬೈಲ್ ಸರಕಾರಿ ಹಿರಿಯ ಪ್ರಾಥಮಿಕ ಶಾಲಾ ಮೈದಾನದಲ್ಲಿ ಆಯೋಜಿಸಲಾಗಿದೆ ಎಂದು ಅಧ್ಯಕ್ಷ ಶಂಕರನಾರಾಯಣ ತಿಳಿಸಿದ್ದಾರೆ.

೨೬ನೇ ವಾರ್ಷಿಕೋತ್ಸವದ ಅಂಗವಾಗಿ ಜಿಲ್ಲಾ ಮಟ್ಟದ ಮುಕ್ತ ವಾಲಿಬಾಲ್ ಪಂದ್ಯಾವಳಿಯನ್ನು ಆಯೋಜಿಸಲಾಗಿದೆ. ಪ್ರಥಮ ಸ್ಥಾನ ಪಡೆದ ತಂಡಕ್ಕೆ ನಗದು ರೂ.೨೦,೦೦೦ ಹಾಗೂ ಆಕರ್ಷಕ ಟ್ರೋಫಿ, ದ್ವಿತೀಯ ಸ್ಥಾನ ರೂ.೧೫,೦೦೦ ಹಾಗೂ ಆಕರ್ಷಕ ಟ್ರೋಫಿ, ತೃತೀಯ ಸ್ಥಾನ ಪಡೆದ ತಂಡಕ್ಕೆ ರೂ. ೧೦,೦೦೦ ನೀಡಲಾಗುವುದು.

ಪುರುಷರಿಗೆ ಮುಕ್ತ ಕಬಡ್ಡಿ ಪಂದ್ಯಾವಳಿಯನ್ನು ಆಯೋಜಿಸಲಾಗಿದೆ. ಪ್ರಥಮ ಸ್ಥಾನ ಪಡೆದ ತಂಡಕ್ಕೆ ನಗದು ರೂ. ೨೦,೦೦೦ ಹಾಗೂ ಆಕರ್ಷಕ ಟ್ರೋಫಿ, ದ್ವಿತೀಯ ಸ್ಥಾನ ರೂ. ೧೦,೦೦೦ ಹಾಗೂ ಆಕರ್ಷಕ ಟ್ರೋಫಿ ನೀಡಲಾಗುವುದು. ಹೋಬಳಿ ಮಟ್ಟದ ಮಹಿಳೆಯರ ಥ್ರೋಬಾಲ್ ಪಂದ್ಯಾವಳಿಯಲ್ಲಿ ಪ್ರಥಮ ಸ್ಥಾನ ಪಡೆದ ತಂಡಕ್ಕೆ ನಗದು ರೂ. ೧೦,೦೦೦ ಹಾಗೂ ಆಕರ್ಷಕ ಟ್ರೋಫಿ, ದ್ವಿತೀಯ ಸ್ಥಾನ ರೂ. ೫,೦೦೦ ನಗದು ಹಾಗೂ ಟ್ರೋಫಿ ನೀಡಲಾಗುವುದು. ಪುರುಷರಿಗೆ ಮುಕ್ತ ರಸ್ತೆ ಓಟ, ಸ್ಥಳೀಯ ಮಹಿಳೆಯರಿಗೆ ಮತ್ತು ಪುರುಷರಿಗೆ ಹಗ್ಗಜಗ್ಗಾಟ ಹಾಗೂ ೫ ವರ್ಷದೊಳಗಿನ ಮಕ್ಕಳಿಗೆ ವಿವಿಧ ಗ್ರಾಮೀಣ ಕ್ರೀಡಾಕೂಟಗಳು ಹಾಗೂ ಡ್ಯಾನ್ಸ್ ಮೇಳ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ.

ಡ್ಯಾನ್ಸ್ ಮೇಳದಲ್ಲಿ ಭಾಗವಹಿಸುವವರು ಫೆಬ್ರವರಿ ೧೫ ರೊಳಗೆ ಹೆಸರು ನೊಂದಾಯಿಸಿಕೊಳ್ಳಬೇಕು. ಕ್ರೀಡಾಕೂಟದಲ್ಲಿ ಪಾಲ್ಗೊಳ್ಳುವವರು ಫೆ. ೨೦ ರೊಳಗೆ ನೋಂದಾಯಿಸಿಕೊಳ್ಳುವAತೆ ಪತ್ರಿಕಾ ಹೇಳಿಕೆಯಲ್ಲಿ ಅಧ್ಯಕ್ಷ ಶಂಕರನಾರಾಯಣ, ಗೌರವ ಅಧ್ಯಕ್ಷ ಕಿಟ್ಟಣ್ಣ ರೈ, ಪ್ರಧಾನ ಕಾರ್ಯದರ್ಶಿ ಪ್ರಶಾಂತ್ ಅವರುಗಳು ತಿಳಿಸಿದ್ದಾರೆ.