ನಾಪೋಕ್ಲು, ಜ. ೨೫: ಇಲ್ಲಿಗೆ ಸಮೀಪದ ಕೋಪಟ್ಟಿ ಸರಕಾರಿ ಕಿರಿಯ ಪ್ರಾಥಮಿಕ ಶಾಲಾ ಕ್ರೀಡಾಕೂಟ ಹಾಗೂ ವಾರ್ಷಿಕೋತ್ಸವ ಸಂಭ್ರಮದಿAದ ಜರುಗಿತು.

ಶಾಲಾ ಆವರಣದಲ್ಲಿ ಆಯೋಜಿಸಲಾಗಿದ್ದ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶಾಲಾ ಆಡಳಿತ ಮಂಡಳಿಯ ಅಧ್ಯಕ್ಷೆ ಗೀತಾ ಅವರು ವಹಿಸಿದ್ದರು. ಅರುಣಾ ಪದವಿಪೂರ್ವ ಕಾಲೇಜಿನ ನಿವೃತ್ತ ಪ್ರಾಂಶುಪಾಲ ದಾಯನ ರಾಮಕೃಷ್ಣ ಅವರು ಮುಖ್ಯ ಅತಿಥಿಗಳಾಗಿ ಭಾಗವಹಿಸಿ ಮಾತನಾಡಿ, ತಾವು ಉನ್ನತ ಹುದ್ದೆಗೆ ಏರಲು ಇದೇ ಶಾಲೆ ಕಾರಣ, ಇದು ನನ್ನ ಎರಡನೇ ದೇವಾಲಯವಿದ್ದಂತೆ ಎಂದು ಸಂತಸ ವ್ಯಕ್ತಪಡಿಸಿದರು.

ಸಮಾರಂಭದಲ್ಲಿ ಅತಿಥಿಗಳಾಗಿ ಕುಂದಚೇರಿ ಗ್ರಾಮ ಪಂಚಾಯಿತಿ ಅಧ್ಯಕ್ಷ ಪೊಡನೋಳನ ದಿನೇಶ್, ನಿವೃತ್ತ ಶಿಕ್ಷಕಿ ಬಿ.ಎನ್. ಜಯಂತಿ, ಮಡಿಕೇರಿಯ ಕ್ರಿಯೇಟಿವ್ ಇಮೇಜಸ್‌ನ ಮಾಲೀಕ ಕಲೀಲ್, ಶಾಲೆಯ ಎಸ್.ಡಿ.ಎಂ.ಸಿ ಸದಸ್ಯರು, ಪೋಷಕರು ಭಾಗವಹಿಸಿದ್ದರು. ಈ ಸಂದರ್ಭ ಆಟೋಟ ಸ್ಪರ್ಧೆಯಲ್ಲಿ ವಿಜೇತರಾದ ವಿದ್ಯಾರ್ಥಿಗಳಿಗೆ ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದ ಗಣ್ಯರು ಬಹುಮಾನವನ್ನು ವಿತರಿಸಿದರು.

ಶಾಲೆಯ ಮುಖ್ಯ ಶಿಕ್ಷಕಿ ರೇಖಾ ಸ್ವಾಗತಿಸಿ, ಸಹ ಶಿಕ್ಷಕಿ ಲಿಖಿತಾ ಕಾರ್ಯಕ್ರಮ ನಿರೂಪಿಸಿದರು. ಬಳಿಕ ವಿದ್ಯಾರ್ಥಿಗಳಿಂದ ನಡೆದ ವೈವಿಧ್ಯಮಯ ಸಾಂಸ್ಕೃತಿಕ ಕಾರ್ಯಕ್ರಮ ಸಭಿಕರನ್ನು ರಂಜಿಸಿತು.