ಸುಂಟಿಕೊಪ್ಪ, ಜ. ೨೫: ಸುಂಟಿಕೊಪ್ಪ ಸರಕಾರಿ ಮಾದರಿ ಪ್ರಾಥಮಿಕ ಶಾಲೆಯಲ್ಲಿ ಕಲಿಕಾ ಹಬ್ಬ ನಡೆಯಿತು. ಸುಂಟಿಕೊಪ್ಪ ಕ್ಲಸ್ಟರ್ ಕೇಂದ್ರದ ವ್ಯಾಪ್ತಿಯ ಸರಕಾರಿ ಮಾದರಿ ಕಲಿಕಾ ಹಬ್ಬವನ್ನು ಆಯೋಜಿಸಲಾಗಿತ್ತು. ಈ ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳಿಗೆ ಭಾಷೆ ಮತ್ತು ಗಣಿತದ ವಿಷಯಕ್ಕೆ ಸಂಬAಧಿಸಿದ ಚಟುವಟಿಕೆಗಳನ್ನು ವಿಜೇತರಿಗೆ ಬಹುಮಾನ ವಿತರಿಸಲಾಯಿತು.
ಸಮಾರಂಭದಲ್ಲಿ ಸುಂಟಿಕೊಪ್ಪ ಗ್ರಾಮ ಪಂಚಾಯಿತಿ ಅಧ್ಯಕ್ಷ ಪಿ.ಆರ್. ಸುನಿಲ್ ಕುಮಾರ್, ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ವಿ.ಜೆ. ಲೋಕೇಶ್, ಶಾಲಾಭಿವೃದ್ಧಿ ಸಮಿತಿ ಅಧ್ಯಕ್ಷ ಹೆಚ್.ಯು. ರಫೀಕ್ಖಾನ್, ಶಾಲಾ ಮುಖ್ಯೋಪಾಧ್ಯಾಯ ಪಿ.ಇ. ನಂದ ಸಹ ಶಿಕ್ಷಕಿ ಸೌಭಾಗ್ಯ, ಕ್ಲಸ್ಟರ್ ಸಂಪನ್ಮೂಲ ವ್ಯಕ್ತಿ ಸೀಮಾ, ಸರಕಾರಿ ಪದವಿಪೂರ್ವ ಕಾಲೇಜಿನ ಪ್ರೌಢಶಾಲಾ ವಿಭಾಗದ ಉಪ ಪ್ರಾಂಶುಪಾಲ ಬಾಲಕೃಷ್ಣ, ಶಿಕ್ಷಕರು, ಪೋಷಕರು ಪಾಲ್ಗೊಂಡಿದ್ದರು.