ಮಡಿಕೇರಿ: ನಾಪೋಕ್ಲು ಸರಕಾರಿ ಕರ್ನಾಟಕ ಪಬ್ಲಿಕ್ ಶಾಲೆಗೆ ಸೇರಿದ ಜಾಗದಲ್ಲಿ ನಿರ್ಮಾಣಗೊಳ್ಳುತ್ತಿರುವ ಶಾದಿ ಮಹಲ್ ಕಾಮಗಾರಿ ಸ್ಥಗಿತ ಮಾಡುವಂತೆ ವೀರಾಜಪೇಟೆ ಬಿಜೆಪಿ ಮಂಡಲದ ವಕ್ತಾರ ಚೆಪ್ಪುಡಿರ ರಾಕೇಶ್ ದೇವಯ್ಯ ಅವರು ಒತ್ತಾಯಿಸಿದ್ದಾರೆ. ಪತ್ರಿಕಾ ಪ್ರಕಟಣೆ ನೀಡಿರುವ ಈ ಕುರಿತು ಶಾಲೆಯ ಪ್ರಾಂಶುಪಾಲರು ಕೂಡ ಶಾಸಕರು ಹಾಗೂ ಅಧಿಕಾರಿಗಳ ಗಮನ ಸೆಳೆದು ಮನವರಿಕೆ ಮಾಡಿಕೊಟ್ಟಿದ್ದಾರೆ. ಆದರೆ ಯಾರಿಂದಲೂ ಯಾವುದೇ ಸ್ಪಂದÀನ ದೊರೆತ್ತಿಲ್ಲ ಎನ್ನುವ ಆರೋಪ ಕೇಳಿಬಂದಿದೆ ಎಂದು ತಿಳಿಸಿದ್ದಾರೆ. ಸರಕಾರಿ ಶಾಲೆಗೆ ಸೇರಿದ ಜಾಗ ಶೈಕ್ಷಣಿಕ ಕಟ್ಟಡಗಳ ನಿರ್ಮಾಣ ಮತ್ತು ಶೈಕ್ಷಣಿಕ ಚಟುವಟಿಕೆಗಳಿಗಷ್ಟೇ ಸೀಮಿತವಾಗಿರಬೇಕು. ಶಾಲೆಯ ಜಾಗದಲ್ಲಿ ಶಾದಿ ಮಹಲ್ ಸೇರಿದಂತೆ ಬೇರೆ ಯಾವುದೇ ಕಟ್ಟಡ ನಿರ್ಮಾಣಕ್ಕೆ ಅವಕಾಶವಿರುವುದಿಲ್ಲ. ಆದರೂ ಶಾದಿ ಮಹಲ್ ನಿರ್ಮಾಣಗೊಳ್ಳುತ್ತಿರುವುದು ಆಶ್ಚರ್ಯಕ್ಕೆ ಕಾರಣವಾಗಿದೆ. ಬೇರೆ ಯಾವುದೋ ಜಾಗದ ಆರ್‌ಟಿಸಿ ತೋರಿಸಿ ಸರಕಾರದಿಂದ ಶಾದಿ ಮಹಲ್‌ಗೆ ಮಂಜೂರಾತಿ ಪಡೆದಿರುವುದು ಕಂಡು ಬಂದಿದೆ. ಆದ್ದರಿಂದ ಸಂಬAಧಿಸಿದ ಹಿರಿಯ ಅಧಿಕಾರಿಗಳು ಈ ಕುರಿತು ತನಿಖೆ ಕೈಗೊಂಡು ಸಾರ್ವಜನಿಕರಿಗೆ ಸ್ಪಷ್ಟೀಕರಣ ನೀಡಬೇಕು ಮತ್ತು ಶಾಲೆಗೆ ಸೇರಿದ ಜಾಗದಲ್ಲಿ ನಡೆಯುತ್ತಿರುವ ಶಾದಿ ಮಹಲ್ ಕಾಮಗಾರಿಯನ್ನು ತಕ್ಷಣ ಸ್ಥಗಿತಗೊಳಿಸಬೇಕು ಎಂದು ರಾಕೇಶ್ ದೇವಯ್ಯ ಒತ್ತಾಯಿಸಿದ್ದಾರೆ.