ಕುಶಾಲನಗರ, ಜ. ೨೬: ಪ್ರತಿಯೊಬ್ಬರು ದೇಶದ ಸಂವಿಧಾನದ ಮೂಲ ತತ್ವಗಳನ್ನು ಅರಿತು ಪಾಲಿಸುವ ಮೂಲಕ ರಾಷ್ಟçದ ಪ್ರಗತಿಯಲ್ಲಿ ತೊಡಗಿಸಿಕೊಳ್ಳಬೇಕು ಎಂದು ತಾಲೂಕು ತಹಶೀಲ್ದಾರ್ ಹಾಗೂ ತಾಲೂಕು ರಾಷ್ಟಿçÃಯ ಹಬ್ಬಗಳ ಆಚರಣಾ ಸಮಿತಿಯ ಅಧ್ಯಕ್ಷ ಕಿರಣ್ ಜಿ ಗೌರಯ್ಯ ಕರೆ ನೀಡಿದರು.
ಕುಶಾಲನಗರದಲ್ಲಿ ತಾಲೂಕು ರಾಷ್ಟಿçÃಯ ಹಬ್ಬಗಳ ಆಚರಣಾ ಸಮಿತಿ ಆಶ್ರಯದಲ್ಲಿ ಸರಕಾರಿ ಮಾದರಿ ಪ್ರಾಥಮಿಕ ಶಾಲಾ ಮೈದಾನ ಆವರಣದಲ್ಲಿ ನಡೆದ ೭೭ನೇ ಗಣರಾಜ್ಯೋತ್ಸವ ದಿನಾಚರಣೆ ಕಾರ್ಯಕ್ರಮದಲ್ಲಿ ಧ್ವಜಾರೋಹಣ ನೆರವೇರಿಸಿ ಮಾತನಾಡಿದರು.
ಸಂವಿಧಾನದಲ್ಲಿ ಉಲ್ಲೇಖಿಸಿದಂತೆ ಕರ್ತವ್ಯ ನಿರ್ವಹಿಸಬೇಕು. ಯುವ ಪೀಳಿಗೆಯಲ್ಲಿ ಜಾಗೃತಿ ಮೂಡಿಸಬೇಕು. ಸಮಸ್ಯೆಗಳಿಗೆ ಪರಿಹಾರ ಕಂಡು ಹಿಡಿಯುವಂತಾಗಬೇಕು. ಸರ್ವಾಂಗೀಣ ಪ್ರಗತಿ ಕಂಡಿರುವ ನಮ್ಮ ದೇಶ ಆರ್ಥಿಕವಾಗಿ ಬಲಿಷ್ಠವಾಗಿದೆ ಎಂದ ಕಿರಣ್ ಗೌರಯ್ಯ ಅವರು, ಭವ್ಯ ಭಾರತದ ನಿರ್ಮಾಣಕ್ಕೆ ಪ್ರತಿಯೊಬ್ಬರೂ ಕೈಜೋಡಿಸಬೇಕು. ಸ್ವಚ್ಛ ಪರಿಸರದೊಂದಿಗೆ ಮುಂದಿನ ಪೀಳಿಗೆಗೆ ಸಮೃದ್ಧ ನಾಡನ್ನು ಹಸ್ತಾಂತರಿಸುವುದು ಪ್ರತಿಯೊಬ್ಬರ ಆಧ್ಯ ಕರ್ತವ್ಯವಾಗಿದೆ ಎಂದರು.
ಮುಖ್ಯ ಭಾಷಣಕಾರರಾದ ಸರ್ಕಾರಿ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲ ಹಂಡ್ರAಗಿ ನಾಗರಾಜು ಮಾತನಾಡಿ, ಸಂವಿಧಾನದ ಆಶೋತ್ತರಗಳನ್ನು ಪಾಲಿಸುವುದು ಎಲ್ಲರ ಕರ್ತವ್ಯವಾಗಿದೆ. ಸತ್ಯದ ಅನ್ವೇಷಣೆ ಮೂಲಕ ದೇಶ ಕಟ್ಟುವ ಕೆಲಸ ಆಗಬೇಕಿದೆ. ಸಂವಿಧಾನ ಭಾರತೀಯರ ನಂಬಿಕೆಯ ಗ್ರಂಥವಾಗಿದ್ದು ಅದರಂತೆ ನಡೆಯುವುದು ನಮ್ಮೆಲ್ಲರ ಜವಾಬ್ದಾರಿಯಾಗಿದೆ ಎಂದರು. ಮುಖ್ಯ ಅತಿಥಿಗಳಾಗಿ ಪಾಲ್ಗೊಂಡ ಕುಶಾಲನಗರ ತಾಲೂಕು ಗ್ಯಾರಂಟಿ ಅನುಷ್ಠಾನ ಸಮಿತಿಯ ಅಧ್ಯಕ್ಷ ವಿ.ಪಿ. ಶಶಿಧರ್ ಮಾತನಾಡಿ, ಪ್ರಜಾಪ್ರಭುತ್ವದ ಘನತೆಯನ್ನು ಕಾಪಾಡುವ ಹೊಣೆ ಎಲ್ಲರ ಮೇಲಿದೆ. ದೇಶದ ಭವಿಷ್ಯ ರೂಪಿಸಬೇಕಾದ ಯುವ ಪೀಳಿಗೆ ಈ ವಿಷಯದಲ್ಲಿ ಮೌನ ತಾಳಿರುವುದು, ಪ್ರಜೆಗಳು ಮಾನಸಿಕವಾಗಿ ಭ್ರಷ್ಟಾಚಾರದತ್ತ ಮುಖ ಮಾಡುತ್ತಿರುವುದು ಆತಂಕಕಾರಿ ಬೆಳವಣಿಗೆಯಾಗಿದೆ ಎಂದರು.
ಮಾಜಿ ಸೈನಿಕರಾದ ಹಾನರಿ ಕ್ಯಾಪ್ಟನ್ ಪಿ.ಈ. ಮುತ್ತಣ್ಣ, ನಾಟಿ ವೈದ್ಯೆ ಅಯಿನಮಂಡ ಲೀಲಾವತಿ ಗಣಪತಿ, ಪೌರಕಾರ್ಮಿಕರಾದ ಗೌರಮ್ಮ ಮತ್ತು ರಾಷ್ಟಿçÃಯ ಮಟ್ಟದ ಕ್ರೀಡಾಪಟುಗಳಾದ ಬ್ರಿಜೇಶ್, ಮುಕುಂದ್ ಅವರುಗಳನ್ನು ಸನ್ಮಾನಿಸಲಾಯಿತು. ಇದೇ ಸಂದರ್ಭ ರಾಷ್ಟಿçÃಯ ಹಬ್ಬಗಳ ಆಚರಣಾ ಸಮಿತಿ ಅಧ್ಯಕ್ಷರು ಹಾಗೂ ತಾಲೂಕು ತಹಶೀಲ್ದಾರ್ ಕಿರಣ್ ಜಿ ಗೌರಯ್ಯ ಅವರ ಪರಿಸರ ಸ್ನೇಹಿ ಕಾರ್ಯ ವೈಖರಿ ಗಮನಿಸಿ, ಕಾವೇರಿ ನದಿ ಸ್ವಚ್ಛತಾ ಆಂದೋಲನ ಸಮಿತಿ ವತಿಯಿಂದ ಸನ್ಮಾನಿಸಲಾಯಿತು.
ಈ ಸಂದರ್ಭ ವೇದಿಕೆಯಲ್ಲಿ ಸೋಮವಾರಪೇಟೆ ಉಪ ವಿಭಾಗದ ಡಿವೈಎಸ್‌ಪಿ ಚಂದ್ರಶೇಖರ್, ಪುರಸಭೆ ಮುಖ್ಯ ಅಧಿಕಾರಿ ಟಿ.ಎಸ್. ಗಿರೀಶ್, ಪೊಲೀಸ್ ವೃತ್ತ ನಿರೀಕ್ಷಕ ಪ್ರದೀಪ್ ಬಿ.ಆರ್., ಜಿಲ್ಲಾ ಪಂಚಾಯಿತಿ ಮಾಜಿ ಅಧ್ಯಕ್ಷೆ ಕೆ.ಪಿ. ಚಂದ್ರಕಲಾ, ಪುರಸಭೆ ಆರೋಗ್ಯ ಅಧಿಕಾರಿ ಉದಯ್ ಕುಮಾರ್, ಅಧಿಕಾರಿಗಳು ರಾಷ್ಟಿçÃಯ ಹಬ್ಬಗಳ ಆಚರಣಾ ಸಮಿತಿಯ ಸದಸ್ಯರು ಮತ್ತಿತರರು ಇದ್ದರು.
ಕಾರ್ಯಕ್ರಮಕ್ಕೆ ಮುನ್ನ ಪೊಲೀಸ್ ಎನ್‌ಸಿಸಿ ತಂಡಗಳು, ಶಾಲಾ ಕಾಲೇಜು ಮಕ್ಕಳಿಂದ ಆಕರ್ಷಕ ಪಥಸಂಚಲನ ನಡೆಯಿತು. ಪಥಸಂಚಲನದಲ್ಲಿ ಪಾಲ್ಗೊಂಡ ತಂಡದ ನಾಯಕರುಗಳಿಗೆ ಪ್ರಸಂಶನಾ ಪತ್ರ ವಿತರಿಸಲಾಯಿತು. ಶಿಕ್ಷಕರು ವಿದ್ಯಾರ್ಥಿಗಳು ನಾಡಗೀತೆ ರೈತ ಗೀತೆ ಹಾಡಿದರು. ಮಹೇಶ್ ಅಮೀನ್ ಅವರು ವಂದೇ ಮಾತರಂ ಗೀತೆಯನ್ನು ಹಾಡಿದರು. ಲೋಕೇಶ್ ತಂಡದಿAದ ಕ್ರಾಂತಿ ಗೀತೆ, ಶಿಕ್ಷಕಿಯರಾದ ತುಳಸಿ ಮತ್ತು ಭವ್ಯ ಅವರು ಕಾರ್ಯಕ್ರಮ ನಿರೂಪಿಸಿದರು. ಮುಖ್ಯ ಶಿಕ್ಷಕರಾದ ನವೀನ್ ಕುಮಾರ್ ಸ್ವಾಗತಿಸಿ ಸಿಂಧೂರಿ ವಂದಿಸಿದರು. ನಂತರ ಶಾಲಾ-ಕಾಲೇಜು ವಿದ್ಯಾರ್ಥಿಗಳ ತಂಡದಿAದ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆದವು.