ವೀರಾಜಪೇಟೆ, ಜ. ೨೬: ಗಣತಂತ್ರ ಹಬ್ಬವನ್ನು ಆಚರಿಸುವ ಮೂಲಕ, ನಾವು ನಮ್ಮ ದೇಶದ ಸಾಂವಿಧಾನಿಕ, ಸಾಂಸ್ಕöÈತಿಕ ಹಾಗೂ ವೈವಿಧ್ಯಮಯ ಅನನ್ಯತೆಯನ್ನು ವಿಶ್ವಾದ್ಯಂತ ಸಾರೋಣ. ಗಣತಂತ್ರ ವ್ಯವಸ್ಥೆಯ ಮಹತ್ವವನ್ನು ಪ್ರತಿಯೊಬ್ಬರೂ ಅರಿತು ನಾಡಿನ ಏಳಿಗೆಗಾಗಿ ಶ್ರಮಿಸಬೇಕು ಎಂದು ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರು ಹಾಗೂ ವೀರಾಜಪೇಟೆ ವಿಧಾನಸಭಾ ಕ್ಷೇತ್ರದ ಶಾಸಕ ಎ.ಎಸ್. ಪೊನ್ನಣ್ಣ ಕರೆ ನೀಡಿದರು.

ರಾಷ್ಟಿçಯ ಹಬ್ಬಗಳ ಆಚರಣಾ ಸಮಿತಿ ವೀರಾಜಪೇಟೆ ತಾಲೂಕು ಆಡಳಿತ ವತಿಯಿಂದ ಇಲ್ಲಿನ ತಾಲೂಕು ಮೈದಾನದಲ್ಲಿ ನಡೆದ ೭೭ನೇ ಗಣರಾಜ್ಯೋತ್ಸವ ದಿನಾಚರಣೆ ಕಾರ್ಯಕ್ರಮದಲ್ಲಿ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿ, ಇಡೀ ವಿಶ್ವಕ್ಕೆ ಮಾದರಿಯಾದ ಭಾರತದ ಸಂವಿಧಾನ ಜಾರಿಯಾದ ಈ ದಿನದಂದು ನಾವುಗಳು ಹೆಮ್ಮೆಯಿಂದ ಗಣರಾಜ್ಯೋತ್ಸವವನ್ನು ಆಚರಿಸುತ್ತಿದ್ದೇವೆ. ಇದು ಪ್ರತಿಯೊಬ್ಬ ಭಾರತೀಯನಿಗೂ ಅತ್ಯಂತ ಪ್ರಾಮುಖ್ಯತೆಯ ದಿನವಾಗಿದೆ. ಆರ್ಥಿಕ ಮತ್ತು ಸಾಮಾಜಿಕವಾಗಿ ಸ್ವಾತಂತ್ರ÷್ಯ ಸಾಕ್ಷಾತ್ಕಾರಗೊಂಡಾಗ ಮಾತ್ರ ಪ್ರಜಾಪ್ರಭುತ್ವ. ಇದನ್ನೇ ಬಾಬಾ ಸಾಹೇಬ್ ಅಂಬೇಡ್ಕರ್ ಸಾಮಾಜಿಕ ಪ್ರಜಾಪ್ರಭುತ್ವ ಎಂದು ಹೇಳಿದ್ದು. ಸಂವಿಧಾನದ ಈ ಆಶಯವನ್ನು ಸಾಕಾರಗೊಳಿಸುವುದು ನಮ್ಮ ಕರ್ತವ್ಯವಾಗಿದೆ ಎಂದರು.

ವಿಶ್ವಕ್ಕೆ ಮಾದರಿ ಸ್ವರೂಪದ ಇಂತಹದ್ದೊAದು ಸಂವಿಧಾನವನ್ನು ನಮಗೆ ನೀಡಿದ ಡಾ. ಬಾಬಾ ಸಾಹೇಬ್ ಅಂಬೇಡ್ಕರ್ ಅವರನ್ನು ನೆನಪು ಮಾಡಿಕೊಂಡು ಗೌರವ ಸಲ್ಲಿಸುವುದು ನಮ್ಮೆಲ್ಲರ ಕರ್ತವ್ಯವಾಗಿದೆ. ಎಲ್ಲಾ ವಿದ್ಯಾರ್ಥಿಗಳು ಸಂವಿಧಾನದ ಪೀಠಿಕೆ ಓದಲೇಬೇಕು. ಸಂವಿಧಾನ ಏನು ಅನ್ನುವುದನ್ನು ತಿಳಿಯಬೇಕು ಎಂದು ಹೇಳಿದರು.

ತಾಲೂಕು ದಂಡಾಧಿಕಾರಿ, ತಹಶೀಲ್ದಾರ್ ಪಿ. ಪ್ರವೀಣ್ ಕುಮಾರ್ ದ್ವಜಾರೋಹಣ ನೆರವೇರಿಸಿ, ಧ್ವಜವಂದನೆ ಸ್ವೀಕರಿಸಿ ಗಣರಾಜ್ಯೋತ್ಸವದ ಸಂದೇಶ ನೀಡಿ ಮಾತನಾಡಿ, ಡಾ. ಅಂಬೇಡ್ಕರ್ ಅವರು ವಿವಿಧ ದೇಶಗಳ ಸಂವಿಧಾನ ಅಧ್ಯಯನ ಮಾಡಿ, ಸತತ ಪರಿಶ್ರಮದ ಮೂಲಕ ಸಂವಿಧಾನವನ್ನು ರಚಿಸಿ ಅಖಂಡ ಭಾರತಕ್ಕೆ ಅರ್ಪಿಸಿದ್ದಾರೆ. ಸಂವಿಧಾನದಲ್ಲಿ ಪೂರ್ವ ಪೀಠಿಕೆಯು ಸಂವಿಧಾನ ದಿಕ್ಸೂಚಿಯಾಗಿದೆ. ದೇಶದ ಪ್ರತಿಯೊಬ್ಬ ಪ್ರಜೆಯೂ ಸಮಾನವಾಗಿ ಬದುಕುವ ಹಕ್ಕು ಮತ್ತು ಸ್ವಾತಂತ್ರ÷್ಯವನ್ನು ಸಂವಿಧಾನವು ನೀಡಿದೆ. ಇದೇ ಆಶಯಗಳೊಂದಿಗೆ ದೇಶ ಮುನ್ನಡೆಯುತ್ತಿದೆ. ಆದ್ದರಿಂದ ದೇಶದ ಪ್ರತಿಯೊಬ್ಬ ನಾಗರಿಕರೆಲ್ಲರೂ ಸಂವಿಧಾನವನ್ನು ಗೌರವಿಸಬೇಕು ಎಂದು ತಿಳಿಸಿದರು. ಇದೇ ಸಂದರ್ಭ ಕ್ರೀಡಾಕೂಟದಲ್ಲಿ ಭಾಗವಹಿಸಿ ಕೊಡಗಿಗೆ ಕೀರ್ತಿ ತಂದ ವಿದ್ಯಾರ್ಥಿಗಳನ್ನು ಸನ್ಮಾನಿಸಲಾಯಿತು.

ವೇದಿಕೆಯಲ್ಲಿ ವೀರಾಜಪೇಟೆ ಡಿವೈಎಸ್‌ಪಿ ಮಹೇಶ್ ಕುಮಾರ್, ವೀರಾಜಪೇಟೆ ವೃತ್ತ ನಿರೀಕ್ಷಕ ಅನೂಪ್ ಮಾದಪ್ಪ, ತಾಲೂಕು ಕ್ಷೇತ್ರ ಶಿಕ್ಷಣಾಧಿಕಾರಿ ಆನಂದ್, ಕಂದಾಯ ಇಲಾಖೆ ಪರಿವೀಕ್ಷಕ ಎಂ.ಎಲ್. ಹರೀಶ್, ಪುರಸಭೆ ಮುಖ್ಯಾಧಿಕಾರಿ ಪಿ.ಕೆ. ನಾಚಪ್ಪ, ಕನ್ನಡ ಸಾಹಿತ್ಯ ಪರಿಷತ್ತು ತಾಲೂಕು ಅಧ್ಯಕ್ಷ ರಾಜೇಶ್ ಪದ್ಮನಾಭ, ಅಕ್ರಮ ಸಕ್ರಮ ಸಮಿತಿ ಅಧ್ಯಕ್ಷ ಆರ್.ಕೆ. ಸಲಾಂ, ವಿರಾಜಪೇಟೆ ಗ್ಯಾರಂಟಿ ಅನುಷ್ಠಾನ ಅಧ್ಯಕ್ಷರು ಜಾನ್ಸನ್, ಮಾಜಿ ಸೈನಿಕರ ಸಂಘದ ಅಧ್ಯಕ್ಷ ಚಪ್ಪಂಡ ಹರೀಶ್, ಉಪಾಧ್ಯಕ್ಷ ಪೂವಯ್ಯ, ವಿವಿಧ ಇಲಾಖೆಯ ಅಧಿಕಾರಿಗಳು, ಸಿಬ್ಬಂದಿಗಳು ಉಪಸ್ಥಿತರಿದ್ದರು. ವಿದ್ಯಾರ್ಥಿಗಳಿಂದ ರೈತಗೀತೆ, ನಾಡಗೀತೆ, ದೇಶಭಕ್ತಿಯನ್ನು ಪ್ರಸ್ತುತ ಪಡಿಸಲಾಯಿತು. ಪಟ್ಟಣದ ವಿವಿಧ ಶಾಲೆಯ ವಿದ್ಯಾರ್ಥಿಗಳು ರಾಷ್ಟಿçÃಯ ಭಾವೈಕ್ಯತೆ ಮತ್ತು ದೇಶಭಕ್ತಿ ಸಾರುವ ಹಾಡುಗಳಿಗೆ ಆಕರ್ಷಕ ನೃತ್ಯ ಮಾಡುವ ಮೂಲಕ ಪ್ರೇಕ್ಷಕರಿಗೆ ಮನರಂಜನೆ ನೀಡಿದರು. ನೃತ್ಯ ಮಾಡಿದ ವಿದ್ಯಾರ್ಥಿಗಳಿಗೆ ಬಹುಮಾನ ವಿತರಣೆ ಮಾಡಲಾಯಿತು. ವೀರಾಜಪೇಟೆ ನಗರ ಠಾಣಾಧಿಕಾರಿ ಎಚ್.ಸಿ. ಪ್ರಮೋದ್ ನೇತೃತ್ವದಲ್ಲಿ ಪಥಸಂಚಲನ ಹಾಗೂ ವಿವಿಧ ಶಾಲೆಗಳ ಸ್ಕೌಟ್ ಮತ್ತು ಗೈಡ್, ಬುಲ್ ಬುಲ್, ಸಂತ ಅನ್ನಮ್ಮ ಶಾಲೆಯ ಬ್ಯಾಂಡ್ ತಂಡ ಪಥಸಂಚಲನ ನಡೆಸಿತು.