ಕೋವರ್‌ಕೊಲ್ಲಿ ಇಂದ್ರೇಶ್

ಬೆAಗಳೂರು, ಜ. ೨೬ : ಸರ್ಕಾರದ ಹಿರಿಯ ಅಧಿಕಾರಿಗಳು ಶಾಸಕರು ಮತ್ತು ವಿಧಾನ ಪರಿಷತ್ ಸದಸ್ಯರ ದೂರವಾಣಿ ಕರೆಗಳನ್ನು ಸ್ವೀಕರಿಸದೆ ನಿರ್ಲಕ್ಷö್ಯ ಮಾಡುತ್ತಿರುವ ಕುರಿತು ರಾಜ್ಯ ಸರ್ಕಾರ ಮಹತ್ವದ ಆದೇಶವೊಂದನ್ನು ಹೊರಡಿಸಿದೆ. ಈ ಬಗ್ಗೆ ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ಡಾ. ಶಾಲಿನಿ ರಜನೀಶ್ ಸುತ್ತೋಲೆಯೊಂದನ್ನು ಹೊರಡಿಸಿದ್ದು ಇನ್ನು ಮುಂದೆ ಎಲ್ಲಾ ಸರ್ಕಾರಿ ಅಧಿಕಾರಿಗಳು ಎಂಎಲ್‌ಎಗಳ ಮತ್ತು ಎಂಎಲ್‌ಸಿಗಳ ದೂರವಾಣಿ ಕರೆಗಳನ್ನು ಸ್ವೀಕರಿಸಲೇಬೇಕು. ಒಂದು ವೇಳೆ ಕರೆ ಬಂದಾಗ ಇತರ ಕೆಲಸಗಳಲ್ಲಿ ಬಿಝಿ ಇದ್ದಲ್ಲಿ ಮರಳಿ ಕರೆ ಮಾಡಿ ಮಾತನಾಡಬೇಕು ಎಂದು ಸೂಚನೆ ನೀಡಿದ್ದಾರೆ.

ಅಧಿಕಾರಿಗಳು ಜನಪ್ರತಿನಿಧಿಗಳ ಕರೆಗಳನ್ನು ಸ್ವೀಕರಿಸುವಲ್ಲಿ ಮತ್ತು ಮರುಕರೆ ಮಾಡುವಲ್ಲಿ ನಿರ್ಲಕ್ಷö್ಯ ತೋರುತ್ತಿದ್ದಾರೆ ಎಂದು ಕರ್ನಾಟಕ ವಿಧಾನ ಪರಿಷತ್ತಿನ ಸಭಾಪತಿಯವರು ದಿನಾಂಕ ೧೬-೧೨-೨೦೨೫ ರಂದು ಮುಖ್ಯ ಕಾರ್ಯದರ್ಶಿರವರಿಗೆ ಪತ್ರ ಬರೆದ ಹಿನ್ನೆಲೆಯಲ್ಲಿ ಈ ಆದೇಶ ಹೊರಡಿಸಲಾಗಿದೆ. ರಾಜ್ಯದ ವಿವಿಧ ಭಾಗಗಳಿಂದ ಸಾರ್ವಜನಿಕರು ಅವರ ಸಮಸ್ಯೆಗಳನ್ನು ಮತ್ತು ಕುಂದು ಕೊರತೆಗಳನ್ನು ಪರಿಹರಿಸಿಕೊಳ್ಳುವ ಉದ್ದೇಶದಿಂದ ಮಾನ್ಯ ವಿಧಾನಸಭಾ ಹಾಗೂ ವಿಧಾನಪರಿಷತ್ತಿನ ಸದಸ್ಯರುಗಳಿಗೆ ವಿನಂತಿಸಿಕೊAಡಾಗ ಅನಿವಾರ್ಯವಾಗಿ ಸಂಬAಧಿಸಿದ ಅಧಿಕಾರಿಗಳಿಗೆ ದೂರವಾಣಿ ಕರೆ ಮಾಡಬೇಕಾಗಿರುತ್ತದೆ. ಅಂತಹ ಸಂದರ್ಭಗಳಲ್ಲಿ ಜನಪ್ರತಿನಿಧಿಗಳ ದೂರವಾಣಿ ಕರೆಗಳನ್ನು ಕೆಲವು ಅಧಿಕಾರಿಗಳು ಸ್ವೀಕರಿಸದೇ ಇರುವುದು ಹಾಗೂ ಒಂದು ವೇಳೆ ಆ ಸಮಯದಲ್ಲಿ ಬೇರೆ ತುರ್ತು ಕಾರ್ಯದಲ್ಲಿ ನಿರತರಾಗಿದ್ದಲ್ಲಿ ತದನಂತರ ಸೌಜನ್ಯಕ್ಕಾದರೂ ಮರು ಕರೆ ಮಾಡದೆ ಇರುವುದು ಗಮನಕ್ಕೆ ಬಂದಿದೆ ಎಂದು ಸಭಾಪತಿಗಳು ದೂರಿಕೊಂಡಿದ್ದರು.

ಈ ಅಂಶಗಳ ಹಿನ್ನೆಲೆಯಲ್ಲಿ ಇನ್ನು ಮುಂದೆ ಎಲ್ಲಾ ಅಧಿಕಾರಿಗಳು ಜನಪ್ರತಿನಿಧಿಗಳಾದ ವಿಧಾನಸಭಾ ಹಾಗೂ ವಿಧಾನ ಪರಿಷತ್ತಿನ ಸದಸ್ಯರು ಮತ್ತು ಮಾನ್ಯ ಲೋಕಸಭಾ ಹಾಗೂ ಸಭಾ ರಾಜ್ಯಸಭಾ ಸದಸ್ಯರುಗಳ ದೂರವಾಣಿ ಸಂಖ್ಯೆಯನ್ನು ತಮ್ಮ ಬಳಿ ಕಡ್ಡಾಯವಾಗಿ ಇಟ್ಟುಕೊಳ್ಳತಕ್ಕದ್ದು ಹಾಗೂ ಅವರು ಕರೆ ಮಾಡಿದಾಗ ಕರೆಯನ್ನು ಸ್ವೀಕರಿಸುವುದು, ಒಂದು ವೇಳೆ ತಾವು ಅನ್ಯ ಕರ್ತವ್ಯದಲ್ಲಿ ನಿರತರಾಗಿದ್ದಲ್ಲಿ ಅವರುಗಳಿಗೆ ತಮ್ಮ ಕರ್ತವ್ಯ ಮುಗಿದ ನಂತರ ಮರು ಕರೆಯನ್ನು ಮಾಡುವುದರ ಮೂಲಕ ಸೂಕ್ತವಾಗಿ ಸಮಸ್ಯೆಗಳ ಕುರಿತು ಸ್ಪಂದಿಸುವAತೆ ಈ ಮೂಲಕ ಸೂಚನೆಯನ್ನು ನೀಡಿದೆ ಎಂದು ಮುಖ್ಯ ಕಾರ್ಯದರ್ಶಿಗಳು ಸುತ್ತೋಲೆಯಲ್ಲಿ ಉಲ್ಲೇಖಿಸಿದ್ದಾರೆ. ಈ ಸೂಚನೆಯನ್ನು ತಮ್ಮ ಆಪ್ತ ಶಾಖೆ ಸಿಬ್ಬಂದಿಗಳಿಗೂ ನೀಡಬೇಕು ಎಂದು ಸರ್ಕಾರದ ಎಲ್ಲಾ ಅಪರ ಮುಖ್ಯ ಕಾರ್ಯದರ್ಶಿ, ಪ್ರಧಾನ ಕಾರ್ಯದರ್ಶಿ ಹಾಗೂ ಇತರ ಕಾರ್ಯದರ್ಶಿಗಳಿಗೆ ಸೂಚಿಸಿದ್ದಾರೆ. ಬೆಂಗಳೂರಿನ ಹಿರಿಯ ಐಎಎಸ್, ಐಪಿಎಸ್ ಮತ್ತು ಐಎಫ್‌ಎಸ್ ಅಧಿಕಾರಿಗಳು ಕರೆಗೆ ಉತ್ತರಿಸದೆ ನಿರ್ಲಕ್ಷö್ಯ ತೋರಿರುವ ಹಿನ್ನೆಲೆ ಈ ಆದೇಶವನ್ನು ಹೊರಡಿಸಲಾಗಿದೆ.