ನಾಪೋಕ್ಲು: ಸ್ಥಳೀಯ ಸರ್ಕಾರಿ ಪದವಿ ಪೂರ್ವ ಕಾಲೇಜು ಮತ್ತು ಪ್ರೌಢಶಾಲೆಯ ಸ್ಥಳ ದಾನಿಗಳು, ಹಳೆಯ ವಿದ್ಯಾರ್ಥಿಗಳು ಹಾಗೂ ಸಾರ್ವಜನಿಕರು ಸರ್ಕಾರಿ ಪದವಿ ಪೂರ್ವ ಕಾಲೇಜಿನ ಪಾಂಶುಪಾಲರನ್ನು ಕಾಲೇಜಿನಲ್ಲಿ ಭೇಟಿಯಾಗಿ ಶಾಲೆಯ ಜಾಗ ಒತ್ತುವರಿಯಾಗಿರುವ ಬಗ್ಗೆ ಸ್ಪಷ್ಟನೆಯನ್ನು ಬಯಸಿದರು.

ಬೇತು ಗ್ರಾಮದ ಬೊಳ್ಳೆಪಂಡ, ಚೋಕಿರ, ಕೀಕಂಡ ಮತ್ತು ಪೋರಾಡ್ ಬ್ರಾಹ್ಮಣರ ಕುಟುಂಬಸ್ಥರು ಉದಾರವಾಗಿ ನೀಡದ ಜಾಗ ಒತ್ತುವರಿಯಾಗಿದೆ. ಪ್ರಾಂಶುಪಾಲರು ಸಂಬAಧಿಸಿದವರಿಗೆ ಪತ್ರ ಬರೆದರೂ ನಿರ್ಲಕ್ಷö್ಯ ಮಾಡಿ ಸರ್ಕಾರಿ ಶಾಲೆಯ ಜಾಗದಲ್ಲಿ ಶಾದಿ ಮಹಲ್ ನಿರ್ಮಿಸಲು ಅಧಿಕಾರಿಗಳು ಅವಕಾಶ ನೀಡಿರುವ ಬಗ್ಗೆ ಆಕ್ಷೇಪ ವ್ಯಕ್ತವಾಯಿತು

ನಾಪೋಕ್ಲು ಕಾಲೇಜಿನ ಜಾಗದಲ್ಲಿ ಶಾದಿಮಹಲ್ ನಿರ್ಮಾಣ ಕಾಮಗಾರಿ ನಡೆಯುತ್ತಿದೆ. ಜಾಗದ ತಕರಾರಿದ್ದು, ಸರ್ವೆ ಕಾರ್ಯಕ್ಕೂ ಮುಂದಾಗಿಲ್ಲ. ಕಾಮಗಾರಿ ಸ್ಥಗಿತಕ್ಕೆ ಒತ್ತಾಯಿಸಿದರು.

ಸರ್ಕಾರಿ ಪದವಿ ಪೂರ್ವ ಕಾಲೇಜು ಪ್ರಾಂಶುಪಾಲ ವಿಶಾಲ ಕುಶಾಲಪ್ಪ, ಉಪ ಪ್ರಾಂಶುಪಾಲ ಶಿವಣ್ಣ ಎಂ.ಎಸ್ , ಅಭಿವೃದ್ಧಿ ಸಮಿತಿಯ ಉಪಾಧ್ಯಕ್ಷ ಎನ್.ಎಸ್ ಉದಯಶಂಕರ್ ಅವರುಗಳು ಮಾತನಾಡಿ, ಈ ಬಗ್ಗೆ ಸಂಬAಧಿಸಿದವರಿಗೆ ಪತ್ರ ವ್ಯವಹಾರ ನಡೆಸಿ ಗಮನ ಸೆಳೆಯುವ ಕೆಲಸ ಮಾಡಲಾಗಿದೆ ಎಂದು ತಿಳಿಸಿದರು.

ಈ ಸಂದರ್ಭ ಕಾಲೇಜು ಅಭಿವೃದ್ಧಿ ಸಮಿತಿಯ ಮಾಜಿ ಉಪಾಧ್ಯಕ್ಷ ಕರವಂಡ ಲವ ನಾಣಯ್ಯ, ಜಿಲ್ಲಾ ಪಂಚಾಯತ್ ಮಾಜಿ ಅಧ್ಯಕ್ಷ ಶಾಂತೆಯAಡ ರವಿ ಕುಶಾಲಪ್ಪ, ಸ್ಥಳ ದಾನಿಗಳಾದ ಕೀಕಂಡ ರಾಜ ಮೇದಪ್ಪ , ನಾರಾಯಣ, ಕೀಕಂಡ ವಿಠಲ, ಹಳೆ ವಿದ್ಯಾರ್ಥಿಗಳಾದ ಕುಲ್ಲೇಟಿರ ಅಜಿತ್ ನಾಣಯ್ಯ, ಕುಂಡ್ಯೋಳAಡ ರಮೇಶ್ ಮುದ್ದಯ್ಯ , ಶಿವಚಾಳಿಯಂಡ ಜಗದೀಶ್, ಕುಂಡ್ಯೋಳAಡ ವಿಶು ಪೂವಯ್ಯ, ಪಾಡಿಯಮ್ಮಂಡ ಮನು ಮಹೇಶ್, ಬಿದ್ದಾಟಂಡ ಸಂಪತ್, ಕಂಗಾAಡ ಜಾಲಿ ಪೂವಪ್ಪ, ಬಾಳೆಯಡ ಮೇದಪ್ಪ ಉಪಸ್ಥಿತರಿದ್ದರು.