ಗೋಣಿಕೊಪ್ಪಲು, ಜ. ೨೬: ರಾಷ್ಟಿçÃಯ ಹಬ್ಬಗಳ ಆಚರಣಾ ಸಮಿತಿ ಹಾಗೂ ಪೊನ್ನಂಪೇಟೆ ತಾಲೂಕು ಆಡಳಿತದ ವತಿಯಿಂದ ೭೭ನೇ ಗಣರಾಜ್ಯೋತ್ಸವವನ್ನು ಪೊನ್ನಂಪೇಟೆಯ ಜೂನಿಯರ್ ಕಾಲೇಜು ಆವರಣದಲ್ಲಿ ವಿಜೃಂಭಣೆಯಿAದ ಆಚರಿಸಲಾಯಿತು.

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ವೀರಾಜಪೇಟೆ ವಿಧಾನಸಭಾ ಕ್ಷೇತ್ರದ ಶಾಸಕ, ಮುಖ್ಯಮಂತ್ರಿಗಳ ಕಾನೂನು ಸಲಹೆಗಾರ ಎ.ಎಸ್. ಪೊನ್ನಣ್ಣ ಮಾತನಾಡಿ, ಸಂವಿಧಾನದ ಆಶಯಕ್ಕೆ ಬದ್ಧರಾಗಿ ಜೀವನ ನಡೆಸಬೇಕು. ಗಣರಾಜ್ಯೋತ್ಸವ ದಿನ ಪ್ರತಿಯೊಬ್ಬ ಭಾರತೀಯನಿಗೂ ಅತ್ಯಂತ ಪ್ರಮುಖವಾದ ದಿನವಾಗಿದೆ. ಗಣತಂತ್ರಗೊAಡ ದಿನವನ್ನು ಆಚರಿಸುವ ಮೂಲಕ ನಾವು ನಮ್ಮ ದೇಶದ ಸಂವಿಧಾನಿಕ ಸಾಂಸ್ಕೃತಿಕ ಹಾಗೂ ವೈವಿಧ್ಯಮಯ ಅನನ್ಯತೆಯನ್ನು ವಿಶ್ವಾದ್ಯಂತ ಸಾರಬೇಕು. ಗಣತಂತ್ರ ವ್ಯವಸ್ಥೆಯ ಮಹತ್ವವನ್ನು ಪ್ರತಿಯೊಬ್ಬರು ಅರಿತು ನಾಡಿನ ಏಳಿಗೆಗಾಗಿ ಶ್ರಮಿಸಬೇಕೆಂದು ಕರೆ ನೀಡಿದರು.

ಕಾರ್ಯಕ್ರಮದಲ್ಲಿ ಪೊನ್ನಂಪೇಟೆಯ ತಹಶೀಲ್ದಾರ್ ಪಿ.ಸಿ.ಪ್ರವೀಣ್ ಕುಮಾರ್ ಧ್ವಜಾರೋಹಣ ನೆರವೇರಿಸಿ ಪ್ರಾಸ್ತಾವಿಕವಾಗಿ ಮಾತನಾಡಿದರು. ಪೊನ್ನಂಪೇಟೆ ತಾಲೂಕು ಕಾರ್ಯನಿರ್ವಹಣಾಧಿಕಾರಿ ಕೆ.ಸಿ.ಅಪ್ಪಣ್ಣ, ಪೊನ್ನಂಪೇಟೆ ಪಟ್ಟಣ ಪಂಚಾಯಿತಿ ಉಪಾಧ್ಯಕ್ಷ ಆಲಿರ ಎಂ. ರಶೀದ್, ಬಗರ್ ಹುಕುಂ ಸಾಗುವಳಿ ಸಕ್ರಮಿಕರಣ ಸಮಿತಿಯ ಪೊನ್ನಂಪೇಟೆ ತಾಲೂಕು ಅಧ್ಯಕ್ಷ ಎ.ಬಿ. ಅಪ್ಪಣ್ಣ, ತಾಲೂಕು ಗ್ಯಾರಂಟಿ ಅನುಷ್ಠಾನ ಸಮಿತಿಯ ಅಧ್ಯಕ್ಷ ಕಾಳಿಮಾಡ ಪ್ರಶಾಂತ್, ಪೊನ್ನಂಪೇಟೆ ಪಟ್ಟಣ ಪಂಚಾಯಿತಿ ಮುಖ್ಯಾಧಿಕಾರಿ ಎಸ್. ಗೋಪಿ, ಗೋಣಿಕೊಪ್ಪ ಗ್ರಾಮ ಪಂಚಾಯಿತಿ ಅಧ್ಯಕ್ಷ ಕುಲ್ಲಚಂಡ ಪ್ರಮೋದ್ ಗಣಪತಿ, ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯ ಮೂಕಳೇರ ಕುಶಾಲಪ್ಪ, ಶಾಲೆಯ ಉಪ ಪ್ರಾಂಶುಪಾಲ ಚಂಗಪ್ಪ, ಶಾಲೆಯ ದೈಹಿಕ ಶಿಕ್ಷಣ ಶಿಕ್ಷಕ ಡ್ಯಾನಿ ಈರಪ್ಪ ಸೇರಿದಂತೆ ಇನ್ನಿತರ ಗಣ್ಯರು ಮುಖ್ಯ ಅತಿಥಿಗಳಾಗಿ ಭಾಗವಹಿಸಿದ್ದರು.

ಪೊಲೀಸ್ ಇಲಾಖೆಯ ಪೊನ್ನಂಪೇಟೆ ಠಾಣೆಯ ಠಾಣಾಧಿಕಾರಿ ನವೀನ್ ಕುಮಾರ್ ನೇತೃತ್ವದಲ್ಲಿ ಪಥಸಂಚಲನ ನಡೆಯಿತು. ಪಥಸಂಚಲನದಲ್ಲಿ ಶಾಲೆಯ ಎನ್‌ಸಿಸಿ ವಿದ್ಯಾರ್ಥಿಗಳು ಪಾಲ್ಗೊಂಡಿದ್ದರು. ಕಾರ್ಯಕ್ರಮದ ಅಂಗವಾಗಿ ಹಲವು ಸಾಧಕರಿಗೆ ಗಣ್ಯರು ಸನ್ಮಾನಿಸಿ ಗೌರವಿಸಲಾಯಿತು. ಶಾಲಾ ವಿದ್ಯಾರ್ಥಿಗಳಿಂದ ಹಾಗೂ ಶಿಕ್ಷಕರಿಂದ ರೈತಗೀತೆ ಮೊಳಗಿತು. ಕಾರ್ಯಕ್ರಮದ ಅಂಗವಾಗಿ ಶಾಲಾ ವಿದ್ಯಾರ್ಥಿಗಳಿಂದ ಸಾಂಸ್ಕೃತಿಕ ಕಾರ್ಯಕ್ರಮ ಜರುಗಿತು.