ಮಡಿಕೇರಿ, ಜ. ೨೬: ಭಾರತದ ಸಂವಿಧಾನಕ್ಕೆ ಬದ್ಧರಾಗಿ ಬದುಕುವುದು ಇಂದಿನ ತುರ್ತು ಅಗತ್ಯವಾಗಿದೆ ಎಂದು ಸಣ್ಣ ನೀರಾವರಿ, ವಿಜ್ಞಾನ ಮತ್ತು ತಂತ್ರಜ್ಞಾನ ಹಾಗೂ ಕೊಡಗು ಜಿಲ್ಲಾ ಉಸ್ತುವಾರಿ ಸಚಿವ ಎನ್.ಎಸ್. ಭೋಸರಾಜು ಹೇಳಿದರು.

ಜಿಲ್ಲಾಡಳಿತದ ವತಿಯಿಂದ ಜ.ತಿಮ್ಮಯ್ಯ ಕ್ರೀಡಾಂಗಣದಲ್ಲಿ ಏರ್ಪಡಿಸಲಾಗಿದ್ದ ೭೭ನೇ ಗಣರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಧ್ವಜಾರೋಹಣ ನೆರವೇರಿಸಿ ಜನತೆಗೆ ಸಂದೇಶ ನೀಡಿದರು. ಸಂವಿಧಾನದ ಶ್ರೇಷ್ಠ ಮೌಲ್ಯಗಳಾದ ಸಮಾನತೆ, ಸ್ವಾತಂತ್ರö್ಯ ಮತ್ತು ಭಾತೃತ್ವಕ್ಕೆ ನಿಜವಾದ ಅರ್ಥ ಸಿಗಬೇಕಾದರೆ ನಾವೆಲ್ಲರೂ ಸಂವಿಧಾನಕ್ಕೆ ಬದ್ಧರಾಗಿ ಬದುಕುವದು ಇಂದಿನ ತುರ್ತು ಅಗತ್ಯವಾಗಿದೆ ಎಂದು ಹೇಳಿದರು. ೧೯೫೦ರ ಜನವರಿ ೨೬ ರಂದು ನಮ್ಮ ಸಂವಿಧಾನ ಜಾರಿಗೆ ಬರುವ ಮೂಲಕ, ಭಾರತವು ವಿಶ್ವದ ಅತಿ ದೊಡ್ಡ ಪ್ರಜಾ ಪ್ರಭುತ್ವ ರಾಷ್ಟçವಾಗಿ ಹೊರಹೊಮ್ಮಿತು. ಹಕ್ಕು ಮತ್ತು ಕರ್ತವ್ಯಗಳ ಸಮನ್ವಯವೇ ನಮ್ಮ ಸಂವಿಧಾನದ ಶಕ್ತಿ.

ಈ ಶುಭ ಸಂದರ್ಭದಲ್ಲಿ ಮಹಾತ್ಮ ಗಾಂಧೀಜಿ, ಸಂವಿಧಾನ ಶಿಲ್ಪಿ ಡಾ. ಬಿ.ಆರ್. ಅಂಬೇಡ್ಕರ್ ಸರ್ದಾರ್ ವಲ್ಲಭಬಾಯಿ ಪಟೇಲ್ ಹಾಗೂ ನಮ್ಮ ನೆಲದ ಹೆಮ್ಮೆಯ ಸೇನಾ ದಂಡನಾಯಕರಾದ ಫೀಲ್ಡ್ ಮಾರ್ಷಲ್ ಕೆ.ಎಂ. ಕಾರ್ಯಪ್ಪ ಮತ್ತು ಜನರಲ್ ತಿಮ್ಮಯ್ಯ ಅವರ ತ್ಯಾಗವನ್ನು ಸ್ಮರಿಸುವುದು ನಮ್ಮ ಕರ್ತವ್ಯ. “ವ್ಯಕ್ತಿಗಿಂತ ಸಮಾಜ ಮುಖ್ಯ, ಸಮಾಜಕ್ಕಿಂತ ದೇಶ ಮುಖ್ಯ'' ಎಂಬ ಧ್ಯೇಯದೊಂದಿಗೆ, ಸಂವಿಧಾನದ ಆಶಯಗಳನ್ನು ಎತ್ತಿ ಹಿಡಿಯುತ್ತಾ ನಾವೆಲ್ಲರೂ ಮುನ್ನಡೆಯೋಣ ಎಂದರು.

ಬಡವರ ಆರ್ಥಿಕ ಸಬಲೀಕರಣ

ಉಚಿತ “ಶಕ್ತಿ'' ಯೋಜನೆಯಡಿ ೧,೪೪,೬೮,೫೦೨ ಮಹಿಳೆಯರು ಪ್ರಯಾಣದ ಸದುಪಯೋಗ ಪಡೆದುಕೊಂಡಿದ್ದು, ಸಂಸ್ಥೆಗೆ ೬೩ ಕೋಟಿ ರೂಪಾಯಿಗಳಷ್ಟು ಆದಾಯ ಬಂದಿದೆ. ಕೊಡಗಿನಲ್ಲಿ ಶೇ.೯೯.೧೫ ರಷ್ಟು ಯಶಸ್ವಿ ನೋಂದಣಿ ಕಂಡಿರುವ “ಗೃಹಜ್ಯೋತಿ'' ಯೋಜನೆಯಡಿ, ೧,೯೯,೬೧೦ ಕುಟುಂಬಗಳಿಗೆ ಈವರೆಗೆ ೭೩೧.೨೮ ಲಕ್ಷ ರೂ. ಗಳ ಸಹಾಯ ಧನ ಭರಿಸಲಾಗಿದೆ. ‘ಅನ್ನಭಾಗ್ಯ’ ಯೋಜನೆಯಡಿ ೧,೦೪,೬೧೨ ಕುಟುಂಬಗಳು ಈ ಯೋಜನೆಯ ಲಾಭ ಪಡೆಯುತ್ತಿವೆ ಮಹಿಳಾ ಸಬಲೀಕರಣದ “ಗೃಹಲಕ್ಷಿö್ಮ'' ಯೋಜನೆಯಡಿ ಜಿಲ್ಲೆಯ ೧,೧೭,೮೨೪ ಯಜಮಾನಿಯರ ಖಾತೆಗೆ ಈವರೆಗೆ ೫೩೫.೪೧ ಕೋಟಿ ರೂ. ಗಳನ್ನು ನೇರವಾಗಿ ಜಮೆ ಮಾಡಲಾಗಿದೆ. “ಯುವನಿಧಿ'' ಯೋಜನೆಯಡಿ ಜಿಲ್ಲೆಯ ೧,೬೪೯ ಯುವ ಜನರಿಗೆ ಈವರೆಗೆ ೪೩೮.೮೭ ಲಕ್ಷ ರೂ. ಭತ್ಯೆಯನ್ನು ಪಾವತಿಸಲಾಗಿದೆ. ಈ ಐದು ಯೋಜನೆಗಳ ಅಡಿಯಲ್ಲಿ ಜಿಲ್ಲೆಯಲ್ಲಿ ಒಟ್ಟು ೧,೪೮,೯೨,೧೯೭ (ಸುಮಾರು ೧.೪೯ ಕೋಟಿ) ಫಲಾನುಭವಿಗಳು (ಶಕ್ತಿ ಯೋಜನೆಯ ಪ್ರಯಾಣಿಕರು ಸೇರಿ) ಸೌಲಭ್ಯ ಪಡೆದಿದ್ದು, ಈವರೆಗೆ ಒಟ್ಟು ೬೧೦.೧೧ ಕೋಟಿ ರೂ.ಗಳ ಆರ್ಥಿಕ ನೆರವನ್ನು ಒದಗಿಸಲಾಗಿದೆ ಎಂದು ಸಚಿವರು ಮಾಹಿತಿ ನೀಡಿದರು.

ವಿವಿಧ ಯೋಜನೆಗಳು

ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯಡಿ, ವೈದ್ಯಕೀಯ ಮತ್ತು ಇಂಜಿನಿಯರಿAಗ್ ವಿದ್ಯಾರ್ಥಿಗಳಿಗಾಗಿ ಪೊನ್ನಂಪೇಟೆ ಹಾಗೂ ಕುಶಾಲನಗರದಲ್ಲಿ ತಲಾ ೧೦೦ ಸಂಖ್ಯಾಬಲದ ಎರಡು ಹೊಸ ವಿದ್ಯಾರ್ಥಿ ನಿಲಯಗಳನ್ನು ಪ್ರಾರಂಭಿಸಲಾಗಿದೆ. ಪಂಚಾಯತ್ ರಾಜ್ ಇಂಜಿನಿಯರಿAಗ್ ವಿಭಾಗದಡಿ ರಾಜ್ಯ ಹಣಕಾಸು ಆಯೋಗ, ಗ್ರಾಮ ಸಡಕ್ ಕೆರೆ ಹಾಗೂ ಕಟ್ಟಡಗಳ ಅಭಿವೃದ್ಧಿಗೆ ಒಟ್ಟು ೧,೧೬೪ ಲಕ್ಷ ರೂ. ಅನುಮೋದನೆಗೊಂಡಿದ್ದು, ಕಾಮಗಾರಿಗಳು ಅಂತಿಮ ಹಂತದಲ್ಲಿವೆ. ಲೋಕೋಪಯೋಗಿ ಇಲಾಖೆಯಡಿ ಕಾಲುಸಂಕ ನಿರ್ಮಾಣಕ್ಕಾಗಿ ೨ ಕೋಟಿ ರೂ. ಮತ್ತು ವೀರಾಜಪೇಟೆ ಕ್ಷೇತ್ರದ ಅಭಿವೃದ್ಧಿಗೆ ೨೦ ಕೋಟಿ ರೂ. ಸೇರಿದಂತೆ, ಒಟ್ಟು ೨೨ ಕೋಟಿ ರೂ. ಅನುದಾನದಲ್ಲಿ ವಿವಿಧ ಕಾಮಗಾರಿಗಳನ್ನು ಕೈಗೆತ್ತಿಕೊಳ್ಳಲಾಗಿದೆ. ಮಡಿಕೇರಿಯಲ್ಲಿ ಉಪ ಪ್ರಾದೇಶಿಕ ವಿಜ್ಞಾನ ಕೇಂದ್ರ ಹಾಗೂ ಕಿರು ತಾರಾಲಯ ಸ್ಥಾಪನೆಗೆ ಒಟ್ಟು ೧೨೨೬.೫೦ ಲಕ್ಷ ರೂ. ಅನುದಾನ ಬಿಡುಗಡೆಯಾಗಿದ್ದು, ಕಾಮಗಾರಿ ಪ್ರಗತಿಯಲ್ಲಿದೆ. ಸಣ್ಣ ನೀರಾವರಿ ಮತ್ತು ಅಂತರ್ಜಲ ಅಭಿವೃದ್ಧಿ ಇಲಾಖೆಯಡಿ ಚೆಕ್ ಡ್ಯಾಂ, ನಾಲೆ ಹಾಗೂ ತಡೆಗೋಡೆ ನಿರ್ಮಾಣ ಕಾಮಗಾರಿಗಳಿಗೆ ಒಟ್ಟು ೭೦ ಕೋಟಿ ರೂಪಾಯಿ ಅನುದಾನ ಒದಗಿಸಲಾಗಿದೆ. ಇದರೊಂದಿಗೆ, ಪರಿಶಿಷ್ಟ ಸಮುದಾಯದ ರೈತರಿಗೆ ೯೮ ಕೊಳವೆಬಾವಿಗಳನ್ನು ಮಂಜೂರು ಮಾಡಲಾಗಿದೆ. ಪಶುಪಾಲನಾ ಇಲಾಖೆಯ ೪ಐದನೇ ಪುಟಕ್ಕೆ

(ಮೊದಲ ಪುಟದಿಂದ) “ರಾಷ್ಟಿçÃಯ ಜಾನು ವಾರು ಮಿಷನ್'' ಅಡಿಯಲ್ಲಿ ೨.೬೪ ಲಕ್ಷ ರೂ. ಅನುದಾನ ಒದಗಿಸಲಾಗಿದೆ. ಜಿಲ್ಲೆಯಲ್ಲಿ ೪೧ ಜಾನುವಾರುಗಳಿಗೆ ವಿಮಾ ಸೌಲಭ್ಯ ಕಲ್ಪಿಸಲಾಗಿದೆ. ಬಾಕಿ ಉಳಿದ ಜಾನುವಾರುಗಳಿಗೂ ವಿಮೆ ಒದಗಿಸಲು ಕ್ರಮಕೈಗೊಳ್ಳಲಾಗುತ್ತಿದೆ ಎಂದು ತಿಳಿಸಿದರು.

ಫುಡ್ ಕೋರ್ಟ್-ವ್ಯೂ ಪಾಯಿಂಟ್

ಮಡಿಕೇರಿಯ ರಾಜಾಸೀಟು ಉದ್ಯಾನವನದಲ್ಲಿ ಪ್ರವಾಸಿಗರ ಅನುಕೂಲಕ್ಕಾಗಿ, ಉತ್ತಮ ಗುಣಮಟ್ಟದ ಆಹಾರ ಒದಗಿಸುವ ನಿಟ್ಟಿನಲ್ಲಿ ಫುಡ್ ಕೋರ್ಟ್ ನಿರ್ಮಿಸಲು ಸಚಿವ ಸಂಪುಟ ಸಭೆಯಲ್ಲಿ ಅನುಮೋದನೆ ನೀಡಲಾಗಿದೆ. ಜಿಲ್ಲಾ ನಗರಾಭಿವೃದ್ಧಿ ಕೋಶದ ವತಿಯಿಂದ “ಗೃಹಭಾಗ್ಯ'' ಯೋಜನೆಯಡಿ ೪೪ ಪೌರ ಕಾರ್ಮಿಕರಿಗೆ ಮನೆ ನಿರ್ಮಿಸಲು ೨೬೪ ಲಕ್ಷ ರೂ. ಅನುದಾನ ಒದಗಿಸಲಾಗಿದೆ. ಈ ಪೈಕಿ ೨೨ ಮನೆಗಳ ನಿರ್ಮಾಣ ಪೂರ್ಣಗೊಂಡಿದೆ. ನಗರ ಭೂ ಸಾರಿಗೆ ನಿರ್ದೇಶನಾಲಯದ (ಡಲ್ಟ್) ವತಿಯಿಂದ ಮಡಿಕೇರಿ, ವಿರಾಜಪೇಟೆ ಮತ್ತು ಕುಶಾಲನಗರ ವ್ಯಾಪ್ತಿಯ ಅಭಿವೃದ್ಧಿ ಕಾಮಗಾರಿಗಳಿಗಾಗಿ ೧೨.೦೨ ಲಕ್ಷ ರೂ. ಅನುದಾನವನ್ನು ಹಂಚಿಕೆ ಮಾಡಲಾಗಿದೆ. ನಮ್ಮ ಜಿಲ್ಲೆಯ ನಗರಗಳ ಸೌಂದರ್ಯ ಮತ್ತು ನಾಗರಿಕರ ಸುರಕ್ಷತೆ ನಮ್ಮ ಆದ್ಯತೆಯಾಗಿದೆ. ಈ ನಿಟ್ಟಿನಲ್ಲಿ ಒಟ್ಟು ೧೧.೯೯ ಕೋಟಿ ರೂ. ವೆಚ್ಚದ ಮಹತ್ವದ ಕಾಮಗಾರಿಗಳಿಗೆ ಚಾಲನೆ ನೀಡಲಾಗಿದೆ. ಪ್ರವಾಸೋದ್ಯಮಕ್ಕೆ ಉತ್ತೇಜನ ನೀಡುವ ನಿಟ್ಟಿನಲ್ಲಿ, ವೀರಾಜಪೇಟೆಯ “ವ್ಯೂಪಾಯಿಂಟ್'' ಅಭಿವೃದ್ಧಿಗೆ ೧.೭೨ ಕೋಟಿ ರೂ. ಮೀಸಲಿಡಲಾಗಿದೆ. ಸಾರ್ವಜನಿಕರ ಹಿತದೃಷ್ಟಿಯಿಂದ, ಕುಶಾಲನಗರದ ಬಿ.ಎಂ. ರಸ್ತೆ ಹಾಗೂ ಮಡಿಕೇರಿಯ ಜಿ.ಟಿ. ಮತ್ತು ಎಂ.ಜಿ. ರಸ್ತೆಗಳಲ್ಲಿ ಸುಸಜ್ಜಿತ ಪಾದಚಾರಿ ಮಾರ್ಗ ನಿರ್ಮಾಣಕ್ಕಾಗಿ ಒಟ್ಟು ೧೦.೨೭ ಕೋಟಿ ರೂ. ವೆಚ್ಚದ ಕಾಮಗಾರಿಗಳನ್ನು ಕೈಗೆತ್ತಿಕೊಳ್ಳಲಾಗಿದೆ. ಪ್ರಸಕ್ತ ಸಾಲಿನಲ್ಲಿ ಗೋಣಿಕೊಪ್ಪ, ಕುಟ್ಟ, ಶಿರಂಗಾಲ, ಕುಶಾಲನಗರ ಹಾಗೂ ಕೂಡಿಗೆಯಲ್ಲಿ ಒಟ್ಟು ೫ ಕರ್ನಾಟಕ ಪಬ್ಲಿಕ್ ಶಾಲೆಗಳನ್ನು ಮಂಜೂರು ಮಾಡಲಾಗಿರುತ್ತದೆ. ಶಾಲೆಗಳ ಮೂಲಭೂತ ಸೌಕರ್ಯಕ್ಕಾಗಿ ಸರ್ಕಾರದಿಂದ ಪ್ರತಿ ಶಾಲೆಗೆ ೩ ಕೋಟಿ ರೂ. ಅನುದಾನ ಮಂಜೂರಾಗಿರುತ್ತದೆ. ವೀರಾಜಪೇಟೆ ತಾಲೂಕು ಆಸ್ಪತ್ರೆಯನ್ನು ೯೧.೫ ಕೋಟಿ ರೂ. ಗಳ ವೆಚ್ಚದಲ್ಲಿ ಮೇಲ್ದರ್ಜೆಗೇರಿಸಿ, ೨೫೦ ಬೆಡ್‌ಗಳ ಸುಸಜ್ಜಿತ ಆಸ್ಪತ್ರೆಯನ್ನು ನಿರ್ಮಾಣ ಮಾಡಲಾಗುತ್ತಿದೆ. ಕುಶಾಲನಗರ ತಾಲೂಕಿನ ಸಮುದಾಯ ಆರೋಗ್ಯ ಕೇಂದ್ರವನ್ನು ೪೧.೫ ಕೋಟಿ ರೂ.ಗಳ ವೆಚ್ಚದಲ್ಲಿ ೧೦೦ ಬೆಡ್‌ಗಳ ತಾಲೂಕು ಆಸ್ಪತ್ರೆಯಾಗಿ ಮೇಲ್ದರ್ಜೆಗೇರಿಸಲಾಗಿದೆ. ಸಮುದಾಯ ಆರೋಗ್ಯ ಕೇಂದ್ರ ಗೋಣಿಕೊಪ್ಪವನ್ನು ಹೆಚ್ಚುವರಿಯಾಗಿ ೫.೭೫ ಕೋಟಿ ರೂ. ಗಳ ವೆಚ್ಚದಲ್ಲಿ ೫೦ ಬೆಡ್ ಗಳ ಆಸ್ಪತ್ರೆಯಾಗಿ ಮೇಲ್ದರ್ಜೆಗೇರಿಸಲಾಗಿದೆ. ಪ್ರಾಥಮಿಕ ಆರೋಗ್ಯ ಕೇಂದ್ರ ಹುದಿಕೇರಿಯನ್ನು ೩೦ ಬೆಡ್‌ಗಳ ಸಮೂದಾಯ ಆರೋಗ್ಯ ಕೇಂದ್ರವನ್ನಾಗಿ ೫.೭೫ ಕೋಟಿ ರೂ.ಗಳ ವೆಚ್ಚದಲ್ಲಿ ಮೇಲ್ದರ್ಜೆಗೇರಿಸಲಾಗಿದೆ. ಪ್ರಸಕ್ತ ಸಾಲಿನಲ್ಲಿ ವೀರಾಜಪೇಟೆ ತಾಲೂಕಿನ ವಿ.ಬಾಡಗ ಗ್ರಾಮದಲ್ಲಿ ಕ್ರೀಡಾ ತರಬೇತಿ ಕೇಂದ್ರ ಸ್ಥಾಪನೆಯ ಉದ್ದೇಶಕ್ಕಾಗಿ ಜಾಗವನ್ನು ಕಾಯ್ದಿರಿಸಲಾಗಿದೆ ಎಂದು ಸಚಿವರು ಮಾಹಿತಿ ನೀಡಿದರು.

ಮೂಲ ಸೌಕರ್ಯ ಅಭಿವೃದ್ಧಿ ಯೋಜನೆ

೨೦೨೫-೨೬ನೇ ಸಾಲಿನ ಬಜೆಟ್‌ನಲ್ಲಿ ಘೋಷಿಸಿದಂತೆ, ಮುಖ್ಯಮಂತ್ರಿಗಳ ಮೂಲ ಸೌಕರ್ಯ ಅಭಿವೃದ್ಧಿ ಕಾರ್ಯಕ್ರಮದಡಿ ಸಮಗ್ರ ಅಭಿವೃದ್ಧಿ ನಮ್ಮ ಸರ್ಕಾರದ ಗುರಿಯಾಗಿದೆ. ಈ ಕಾರ್ಯಕ್ರಮದಡಿ, ರಸ್ತೆ, ವಿದ್ಯುತ್, ನೀರು ಸೇರಿದಂತೆ ಮೂಲಭೂತ ಸೌಕರ್ಯಗಳ ಸಮಗ್ರ ಅಭಿವೃದ್ಧಿಗಾಗಿ ಜಿಲ್ಲೆಯ ಎರಡು ವಿಧಾನ ಸಭಾಕ್ಷೇತ್ರಗಳಿಗೆ ತಲಾ ೫೦ ಕೋಟಿಯಂತೆ, ಒಟ್ಟು ೧೦೦ ಕೋಟಿ ರೂ. ಅನುದಾನವನ್ನು ಮೀಸಲಿರಿಸಲಾಗಿದೆ.

ಡಿಸೆಂಬರ್ ೨೦೨೫ರಲ್ಲಿ ಕರ್ನಾಟಕ ಭೂಕಂದಾಯ ಕಾಯ್ದೆಗೆ ತಿದ್ದುಪಡಿ ತರುವ ಮೂಲಕ, ಕೊಡಗಿನ ದಶಕಗಳ ಜಮ್ಮಾಬಾಣೆ ಸಮಸ್ಯೆಯನ್ನು ಬಗೆಹರಿಸಿ, ಪಹಣಿಯಲ್ಲಿ ಪಟ್ಟಿದಾರರ ಹೆಸರು ನಮೂದಿಸಲು ಕ್ರಮ ಕೈಗೊಳ್ಳಲಾಗಿದೆ. ಕೊಡಗಿನ “ಸಿ'' ಮತ್ತು “ಡಿ'' ವರ್ಗದ ಜಮೀನುಗಳ ಸಮಸ್ಯೆ ಪರಿಹಾರಕ್ಕಾಗಿ ಈಗಾಗಲೇ ಸಮಿತಿ ರಚಿಸಲಾಗಿದ್ದು, ಸಮಿತಿಯ ವರದಿ ಬಂದ ಕೂಡಲೇ ಮುಂದಿನ ಸೂಕ್ತ ಕ್ರಮಗಳನ್ನು ಕೈಗೊಳ್ಳಲಾಗುವುದು. ನೂತನ ಕುಶಾಲನಗರ ಮತ್ತು ಪೊನ್ನಂಪೇಟೆ ತಾಲೂಕುಗಳ ಆಡಳಿತಾತ್ಮಕ ಹಿತದೃಷ್ಟಿಯಿಂದ, ತಲಾ ೮.೬೦ ಕೋಟಿ ರೂ. ವೆಚ್ಚದಲ್ಲಿ ಪ್ರಜಾಸೌಧ ನಿರ್ಮಾಣ ಕಾಮಗಾರಿಗಳು ಭರದಿಂದ ಸಾಗುತ್ತಿವೆ. ಭೂ ಸುರಕ್ಷಾ ಯೋಜನೆಯಡಿ ಜಿಲ್ಲೆಯ ಐದೂ ತಾಲೂಕು ಕಚೇರಿಗಳ ದಾಖಲೆಗಳ ಸ್ಕ್ಯಾನಿಂಗ್ ಸಂಪೂರ್ಣಗೊಳಿಸಿ, ರಾಜ್ಯದಲ್ಲೇ ಪ್ರಥಮ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದು, ಪ್ರಸ್ತುತ ಜಿಲ್ಲಾಧಿಕಾರಿ ಹಾಗೂ ಉಪವಿಭಾಗಾಧಿಕಾರಿ ಕಚೇರಿಗಳ ದಾಖಲೆಗಳ ಡಿಜಿಟಲೀಕರಣ ಪ್ರಗತಿಯಲ್ಲಿದೆ ಎಂದು ಸಚಿವರು ತಿಳಿಸಿದರು.

ಸಾಧಕರಿಗೆ ಸನ್ಮಾನ

ಇದೇ ಸಂದರ್ಭದಲ್ಲಿ ರಾಷ್ಟಿçÃಯ ಮತ್ತು ರಾಜ್ಯ ಪುರಸ್ಕಾರ ಪಡೆದ ವಿದ್ಯಾರ್ಥಿಗಳಿಗೆ ಸ್ಕೌಟ್ಸ್ ಮತ್ತು ಗೈಡ್ಸ್ ವತಿಯಿಂದ ಹಾಗೂ ಇತರ ಕ್ಷೇತ್ರದಲ್ಲಿ ಸಾಧನೆ ಮಾಡಿದ ವಿದ್ಯಾರ್ಥಿಗಳಿಗೆ ಕಂದಾಯ ಇಲಾಖೆಯ ಇ-ಪೌತಿ ಯೋಜನೆಯಡಿ ಅತಿ ಹೆಚ್ಚು ಅರ್ಜಿಗಳ ಪ್ರಗತಿ ಸಾಧಿಸಿದ ಗ್ರಾಮ ಆಡಳಿತ ಅಧಿಕಾರಿಗಳು, ಮಕ್ಕಳ ವ್ಯಕ್ತಿತ್ವ ವಿಕಸನ ಕಾರ್ಯಕ್ರಮಕ್ಕೆ ಆಯ್ಕೆಯಾಗಿ ವಿಶೇಷ ಗೌರವ ಪ್ರಶಸ್ತಿ ಪಡೆದ ಬಾಲಕರ ಬಾಲಮಂದಿರದ ವಿದ್ಯಾರ್ಥಿಗಳನ್ನು ಸಚಿವರು ಸನ್ಮಾನಿಸಿ ಗೌರವಿಸಿದರು.

ವೇದಿಕೆಯಲ್ಲಿ ಮಡಿಕೇರಿ ಕ್ಷೇತ್ರದ ಶಾಸಕ ಡಾ.ಮಂತರ್ ಗೌಡ, ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ರಾಜ್ಯ ಉಪಾಧ್ಯಕ್ಷ ಎಸ್.ಆರ್. ಮೆಹರೋಝ್ ಖಾನ್, ರಾಜ್ಯ ಕ್ರೀಡಾ ಪ್ರಾಧಿಕಾರದ ಉಪಾಧ್ಯಕ್ಷ ಸಿ.ಎಸ್. ಅರುಣ್‌ಮಾಚಯ್ಯ, ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಜಿಲ್ಲಾಧ್ಯಕ್ಷ ಧರ್ಮಜ ಉತ್ತಪ್ಪ, ಮಡಿಕೇರಿ ನಗರ ಸಭಾಧ್ಯಕ್ಷೆ ಪಿ. ಕಲಾವತಿ, ಜಿಲ್ಲಾಧಿಕಾರಿ ಸೋಮಶೇಖರ್, ಅಪರ ಜಿಲ್ಲಾಧಿಕಾರಿ ಆರ್.ಐಶ್ವರ್ಯ, ಜಿ.ಪಂ.ಮುಖ್ಯ ಕಾರ್ಯನಿರ್ವಹಣಾಧಿಕಾರಿ ಆನಂದ್ ಪ್ರಕಾಶ್ ಮೀನಾ, ಉಪವಿಭಾಗಾಧಿಕಾರಿ ನಿತಿನ್ ಚಕ್ಕಿ, ಪೊಲೀಸ್ ವರಿಷ್ಠಾಧಿಕಾರಿ ಬಿಂದುಮಣಿ, ತಹಶೀಲ್ದಾರ್ ಶ್ರೀಧರ್ ಇದ್ದರು. ನಿವೃತ್ತ ಚಿತ್ರಕಲಾ ಶಿಕ್ಷಕ, ನಿರೂಪಣ ರತ್ನ ರಾಜ್ಯ ಪ್ರಶಸ್ತಿ ವಿಜೇತ ಉ.ರಾ. ನಾಗೇಶ್ ಹಾಗೂ ಮಡಿಕೇರಿ ಸಂತ ಮೈಕಲರ ಶಾಲಾ ಶಿಕ್ಷಕಿ ಡಾ. ಸವರಿನ್ ಡಿಸೋಜ ಅವರುಗಳು ಕಾರ್ಯಕ್ರಮ ನಿರೂಪಿಸಿದರು. ಪಿ.ಎಂ.ಶ್ರೀ. ಶಾಲಾ ವಿದ್ಯಾರ್ಥಿಗಳು ನಾಡಗೀತೆ ಹಾಗೂ ರೈತ ಗೀತೆ ಹಾಡಿದರು.