ವೀರಾಜಪೇಟೆ, ಜ. ೨೬: ಭಾರತ ಸಮರ್ಥ ಸತ್ವ ಹೊಂದಿರುವ ಸದೃಢ ದೇಶವಾಗಿದ್ದು, ಎಲ್ಲಾ ಜನರನ್ನು, ಮನಸ್ಸನ್ನು ಬೆಸೆಯುವ ಮೂಲಕ ಹಿಂದೂ ಧರ್ಮದ ಅಭಿಮಾನವನ್ನು ಜನರಿಗೆ ತಲುಪಿಸಬೇಕು ಎಂದು ರಾಷ್ಟಿçÃಯ ಸ್ವಯಂ ಸೇವಕ ಸಂಘದ ದಕ್ಷಿಣ ಕರ್ನಾಟಕ ಪ್ರಾಂತ ಸಹ ಕಾರ್ಯವಾಹಕ ಪಿ.ಎಸ್. ಪ್ರಕಾಶ್ ಕರೆ ನೀಡಿದರು.
ಅಮ್ಮತ್ತಿಯಲ್ಲಿ ಹಿಂದೂ ಸಂಗಮ ಆಯೋಜನಾ ಸಮಿತಿ ಆಶ್ರಯದಲ್ಲಿ ಕೊಡವ ಸಮಾಜದಲ್ಲಿ ನಡೆದ ಹಿಂದೂ ಸಂಗಮ ಕಾರ್ಯಕ್ರಮದಲ್ಲಿ ದಿಕ್ಸೂಚಿ ಭಾಷಣ ಮಾಡಿದ ಅವರು, ಶತಮಾನೋತ್ಸವ ಆಚರಿಸುತ್ತಿರುವ ರಾಷ್ಟಿçÃಯ ಸ್ವಯಂ ಸೇವಕ ಸಂಘ, ತನ್ನ ಕಾರ್ಯ ಯೋಜನೆಯಲ್ಲಿ ಹಿಂದೂ ಸಮಾಜೋತ್ಸವ ಎಂಬ ಕಾರ್ಯಕ್ರಮ ಹಮ್ಮಿಕೊಂಡಿದೆ. ಅಖಂಡ ಹಿಂದೂ ಸಮಾಜ ದೇಶದಲ್ಲಿ ಹರಿದು ಹಂಚಿ ಹೋಗಿರುವುದನ್ನು ಒಗ್ಗೂಡಿಸುವ ಸಲುವಾಗಿ ಶೋಭಾಯಾತ್ರೆ ನಡೆಸಲಾಗುತ್ತಿದೆ. ಹಿಂದೂ ಸಮಾಜದವರು ಜಾತಿ ಬೇಧ ಮರೆತು ಸಂಘಟಿತರಾಗಿ ನಾವೆಲ್ಲ ಒಂದು ನಾವೆಲ್ಲ ಮುಂದು ಎನ್ನುವ ಮೂಲಕ, ಯುವಕರ ಪ್ರಜ್ಞೆ ಧರ್ಮದೆಡೆಗೆ ಎಂಬ ಭಾವನೆ ಪ್ರತಿಯೊಬ್ಬರಲ್ಲೂ ಮೂಡಬೇಕು ಎಂದರು.
ಪ್ರಸ್ತುತ ಸಮಾಜ ಎದುರಿಸುತ್ತಿರುವ ಸಮಸ್ಯೆಗಳಿಂದ ಹೊರಗೆ ಬರಬೇಕಾದರೆ ನಾವು ಇನ್ನಷ್ಟು ದೃಢ ನಿರ್ಧಾರ ಕೈಗೊಳ್ಳಬೇಕಿದೆ. ನಮ್ಮ ಧರ್ಮ, ಸಂಸ್ಕöÈತಿಯನ್ನು ಕಾಪಾಡಿಕೊಳ್ಳುವುದು ಇಂದಿನ ತುರ್ತು. ಜಗತ್ತಿನ ಎಲ್ಲ ಕ್ಷೇತ್ರಕ್ಕೂ ಕೊಡುಗೆ ನೀಡಿರುವುದು ಹಿಂದೂ ಸಮಾಜ. ನಮ್ಮ ಕುಟುಂಬ, ಮಕ್ಕಳಿಗೆ ಒಳ್ಳೆಯದಾಗಲಿ ಎಂದು ಪ್ರಾರ್ಥಿಸುವ ಜೊತೆಗೆ ಅನ್ನ ಕೊಡುವ ರೈತನಿಗೆ, ಗಡಿ ಕಾಯುವ ಸೈನಿಕನ ಪರವಾಗಿಯೂ ಪ್ರಾರ್ಥನೆ ಮಾಡಬೇಕು. ಯುವ ಸಮೂಹವನ್ನು ಸನ್ಮಾರ್ಗದತ್ತ ಕರೆದೊಯ್ಯುವ ಕೆಲಸವಾಗಬೇಕು ಎಂದು ಹೇಳಿದರು.
ಭಾರತೀಯ ಸಂಸ್ಕöÈತಿ ಮೇಲೆ ಹೇಗೆ ಪಾಶ್ಚಾತ್ಯ ಸಂಸ್ಕöÈತಿ ಪ್ರಭಾವ ಬೀರುತ್ತಿದೆ. ಭಾರತೀಯ ಸಂಸ್ಕöÈತಿಯನ್ನು ಉಳಿಸಲು ಹಿಂದೂ ಸಂಗಮ ಅತೀ ಅಗತ್ಯ. ಆರ್‌ಎಸ್‌ಎಸ್ ವ್ಯಕ್ತಿ ನಿರ್ಮಾಣದ ಮೂಲಕ ರಾಷ್ಟç ನಿರ್ಮಾಣ ಮಾಡಿದೆ. ವ್ಯಕ್ತಿ ನಿರ್ಮಾಣದಿಂದ ಸಂಘಟನೆ ಜೊತೆಗೆ ಸಮಾಜ ಬೆಳೆಯಿತು. ಹಾಗೂ ಇದರಿಂದ ರಾಷ್ಟç ಕಟ್ಟುವ ಕೆಲಸವಾಗಿದೆ. ಹಿಂದೂ ಸಂಗಮದಿAದ ಹಿಂದೂ ಸಮಾಜಕ್ಕೆ ವಿಶ್ವಾಸ ಮೂಡಿದೆ ಎಂದರು.
ಕೊಡವ ಸಮಾಜದ ಅಧ್ಯಕ್ಷ ಐನಂಡ ಪ್ರಕಾಶ್ ಮಾತನಾಡಿ, ಜನಸಾಮಾನ್ಯರು ಹಿಂದುತ್ವದ ಜಾಗೃತಿ ಹಾಗೂ ದೇಶ ಭಕ್ತಿ ಹೊಂದುವAತಾಗಬೇಕು. ಭಾರತ ಈಗಾಗಲೇ ಸಾಮಾಜಿಕವಾಗಿ ಸಂಪನ್ನತೆ ಹೊಂದಿದ್ದು, ಸಂರಕ್ಷಿತ ರಾಷ್ಟçವಾಗಿದೆ. ಜೊತೆಗೆ ಸಾಮರಸ್ಯದ ಭಾವ ಹೊಂದಿದೆ ಹಿಂದೂ ಸಮಾಜದ ಸಂಘಟನೆ, ಸ್ವಾವಲಂಬಿ, ಸಂಸ್ಕಾರಯುಕ್ತ ಮತ್ತು ಸಾಮರಸ್ಯಯುಕ್ತ ಸಮಾಜವನ್ನು ನಿರ್ಮಾಣ ಮಾಡುವ ಕಾರ್ಯದಲ್ಲಿ ನಿರತರಾಗಬೇಕು. ಅಧ್ಯಾತ್ಮಿಕ ಜಾಗೃತಿಯನ್ನು ಮೂಡಿಸುವುದಲ್ಲದೇ ನಮ್ಮ ಧರ್ಮ, ಸಂಸ್ಕöÈತಿ, ಮೌಲ್ಯಗಳನ್ನು ಆಚರಣೆಗೆ ತರುವಲ್ಲಿ ಜಾಗೃತಿಯ, ಶಕ್ತಿಯ ಕೇಂದ್ರವಾಗಬೇಕು ಎಂದರು.
ಚೌಡೇಶ್ವರಿ ದೇವಸ್ಥಾನ ಸಮಿತಿ ಅಧ್ಯಕ್ಷ ಹೆಚ್.ಕೆ. ಶ್ರೀನಿವಾಸ್ ಮಾತನಾಡಿ, ೪ಐದನೇ ಪುಟಕ್ಕೆ
೪ಐದನೇ ಪುಟಕ್ಕೆ
ಹಿಂದೂ ಧರ್ಮದ ಮೇಲೆ ಅಭಿಮಾನ ಬೆಳೆಸಿಕೊಳ್ಳುವಂತೆ ಕರೆ ನೀಡಿದರು.
ಹಿಂದೂ ಸಂಗಮದ ಅಂಗವಾಗಿ ಅಮ್ಮತ್ತಿ ಪಟ್ಟಣದಲ್ಲಿ ವೈಭವದ ಶೋಭಾಯಾತ್ರೆ ನಡೆಯಿತು. ಸಹಸ್ರ ಸಂಖ್ಯೆಯಲ್ಲಿ ಹಿಂದೂ ಬಾಂಧವರು ಮೆರವಣಿಗೆ ನಡೆಸಿದರು. ಮೆರವಣಿಗೆ ಅಮ್ಮತ್ತಿ ಪಟ್ಟಣದ ಪ್ರಮುಖ ರಸ್ತೆಯುದ್ದಕ್ಕೂ ಸಂಚರಿಸಿ ಕೊಡವ ಸಮಾಜದವರೆಗೂ ಸಾಗಿ ಬಂತು.
ಭಜನಾ ನೃತ್ಯ, ದುಡಿಕೊಟ್ಟ್ ಪಾಟ್, ಭಾರತ ಮಾತೆಗೆ ಪುಷ್ಪಾರ್ಚನೆ ಸಲ್ಲಿಸಲಾಯಿತು. ಈ ಸಂದರ್ಭ ಸ್ವಾಗತ ನೃತ್ಯ, ಚಂಡೆ ವಾದ್ಯ, ದುಡಿಕೊಟ್ಟ್ ಪಾಟ್, ಕೊಡವ ವಾಲಗ, ಚೀನಿ ದುಡಿ, ಬೊಳಕಾಟ್, ಭಜನಾ ನೃತ್ಯ ಪ್ರದರ್ಶನ ನಡೆಯಿತು. ನೆಲ್ಲಮಕ್ಕಡ ಸಾಗರ್ ಸಾಮರಸ್ಯ ಗೀತೆ ಹಾಡಿದರು. ವೇದಿಕೆಯಲ್ಲಿ ಶ್ರೀ ಅಯ್ಯಪ್ಪ ದೇವಸ್ಥಾನ ಸಮಿತಿ ಅಧ್ಯಕ್ಷ ಕುಟ್ಟಂಡ ಸಂಜು, ಕಾವಾಡಿ ಶ್ರೀ ಭಗವತಿ ದೇವಸ್ಥಾನದ ಅಧ್ಯಕ್ಷ ಮುಕ್ಕಾಟಿರ ನಾಚಪ್ಪ, ಮುತ್ತಪ್ಪ ದೇವಸ್ಥಾನ ಸಮಿತಿ ಅಧ್ಯಕ್ಷ ಸಿ.ಕೆ. ರವಿ ಉಪಸ್ಥಿತರಿದ್ದರು. ಕಾರ್ಯಕ್ರಮದಲ್ಲಿ ಪ್ರಮುಖರಾದ ಸುವಿನ್ ಗಣಪತಿ, ಕುಟ್ಟಂಡ ಪ್ರಿನ್ಸ್ ಗಣಪತಿ, ಚಂದ್ರನ್, ವಿಶಾಲಾಕ್ಷಿ, ಎಂ.ಡಿ ಚಿಣ್ಣಪ್ಪ ಸೇರಿದಂತೆ ಗ್ರಾಮದ ಹಿಂದೂ ಬಾಂಧವರು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.