ಸುಂಟಿಕೊಪ್ಪ, ಜ. ೨೭: ಎಸ್.ಎಸ್.ಎಲ್.ಸಿ ಮತ್ತು ದ್ವಿತೀಯ ಪಿಯುಸಿಯಲ್ಲಿ ಪಡೆದ ಅಂಕಗಳೇ ಮುಂದಿನ ಭವಿಷ್ಯಕ್ಕೆ ಮುನ್ನುಡಿ. ಆದುದರಿಂದ ವಿದ್ಯಾರ್ಥಿಗಳು ಎಸ್.ಎಸ್.ಎಲ್.ಸಿ ಮತ್ತು ದ್ವಿತೀಯ ಪಿಯುಸಿಯಲ್ಲಿ ಶಿಕ್ಷಣಕ್ಕೆ ಆದ್ಯತೆ ನೀಡಿದಾಗ ಮಾತ್ರ ನಿಮ್ಮ ಗುರಿ ಸಾಧನೆಗೆ ಸಹಕಾರಿಯಾಗಲಿದೆ ಎಂದು ಪೋಷಕರಿಗೆ ಶಿಕ್ಷಕಿ ಹರ್ಷಿತ ಮಾಹಿತಿ ನೀಡಿದರು.

ಮಂಜಿಕೆರೆ ಸಮುದಾಯ ಭವನದಲ್ಲಿ ಕಾನ್‌ಬೈಲ್ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ತಲಕಾವೇರಿ ಜ್ಞಾನವಿಕಾಸ ಕೇಂದ್ರದ ಕಾನ್‌ಬೈಲ್ ಕಾರ್ಯಕ್ಷೇತ್ರದ ವತಿಯಿಂದ ಆಯೋಜಿಸಲಾಗಿದ್ದ ಮಾಹಿತಿ ಕಾರ್ಯಾಗಾರವನ್ನು ಉದ್ದೇಶಿಸಿ ಮಾತನಾಡಿದ ಅವರು, ಮಕ್ಕಳು ಮೊಬೈಲ್ ಬಳಕೆಯ ಸಂದರ್ಭ ಪಠ್ಯ ಚಟುವಟಿಕೆಗೆ ಸಂಬAಧಿಸಿದ ಅಥವಾ ಇತರ ವಿಚಾರಗಳ ಬಳಕೆ ಮಾಡುತ್ತಿದ್ದಾರೆಯಾ ಎಂಬುದರ ಬಗ್ಗೆ ನಿಗಾವಹಿಸಬೇಕು. ಎಸ್.ಎಸ್.ಎಲ್.ಸಿ ಮತ್ತು ಪಿಯುಸಿ ಅಂಕಗಳೇ ಮಕ್ಕಳ ಮುಂದಿನ ಭವಿಷ್ಯಕ್ಕೆ ಬೇಕಾಗಿರುವ ಅಂಕವಾಗಿದೆ.

ಮಕ್ಕಳ ವಿವೇಚನೆಯನ್ನು ಅರಿತು ಶಿಕ್ಷಣಕ್ಕೆ ಆದ್ಯತೆ ನೀಡುವುದರಿಂದ ಮಕ್ಕಳ ಉತ್ತಮ ಭವಿಷ್ಯ ಸಾಧ್ಯ ಎಂದು ಹೇಳಿದರು.

ಮಾಹಿತಿ ಕಾರ್ಯಾಗಾರದಲ್ಲಿ ಆರೋಗ್ಯ ಇಲಾಖೆಯ ಆರೋಗ್ಯ ಅಧಿಕಾರಿ ರೋಷಿತ ಮಾತನಾಡಿ, ಇಂದಿನ ದಿನಗಳಲ್ಲಿ ಆಹಾರ ಪದ್ಧತಿಯು ದಿನದಿಂದ ದಿನಕ್ಕೆ ಬದಲಾಗುತ್ತಿದೆ. ಹಿಂದಿನ ಕಾಲದಲ್ಲಿ ರಾಸಾಯನಿಕ ಗೊಬ್ಬರ ಬಳಕೆಯಿಂದ ದೂರವಿದ್ದು ಇತ್ತೀಚಿನ ವರ್ಷಗಳಲ್ಲಿ ಬಳಕೆಯನ್ನು ಹೆಚ್ಚು ಅವಲಂಭಿತರಾಗಿರುವುದರಿAದ ಸಾಕಷ್ಟು ಆರೋಗ್ಯ ಸಮಸ್ಯೆಗಳು ಉದ್ಭವಿಸಲು ಕಾರಣವೆಂದು ಹೇಳಿದರು. ಸಮಾರಂಭದ ಅಧ್ಯಕ್ಷತೆಯನ್ನು ಶ್ರೀನಿಧಿ ತಂಡದ ಸದಸ್ಯೆ ಮೇರಿ ಅವರು ವಹಿಸಿದ್ದರು. ಈ ಸಂದರ್ಭ ಒಕ್ಕೂಟದ ನಿಕಟಪೂರ್ವ ಅಧ್ಯಕ್ಷೆ ಖತೀಜ, ಜ್ಞಾನವಿಕಾಸ ಕಾನ್‌ಬೈಲ್ ವ್ಯಾಪ್ತಿಯ ಸೇವಾ ಪ್ರತಿನಿಧಿ ಯಶೋಧ ಬಸವರಾಜ್ ಮತ್ತಿತರರು ಇದ್ದರು. ಕಾನ್‌ಬೈಲ್ ವ್ಯಾಪ್ತಿಯ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಸ್ವ-ಸಹಾಯ ಸಂಘÀಗಳಾದ ಭೂಮಿಕ, ಶ್ರೀನಿಧಿ, ಕನ್ನಿಕ, ದೃಥಿ, ಭಗವತಿ ಹಾಗೂ ಜನನಿ ಸಂಘದ ಸದಸ್ಯರುಗಳು ಪಾಲ್ಗೊಂಡಿದ್ದರು. ಸವಿತ ಸ್ವಾಗತಿಸಿ, ಫೌಸಿಯ ವಂದಿಸಿದರು.