ನಾಪೋಕ್ಲು, ಜ. ೨೮: ಸಂಕ್ರಾAತಿ ಅಂಗವಾಗಿ ಪೆರಾಜೆಯಲ್ಲಿ ನಡೆದ ಕೊಡಗು-ದಕ್ಷಿಣ ಕನ್ನಡ ಜಿಲ್ಲೆಗಳನ್ನು ಒಳಗೊಂಡ ಕ್ರೀಡಾಕೂಟದ ಮಹಿಳೆಯರ ಹಗ್ಗಜಗ್ಗಾಟ ಸ್ಪರ್ಧೆಯಲ್ಲಿ ಚೇರಂಬಾಣೆ ಗೌಡ ಮಹಿಳಾ ಒಕ್ಕೂಟ ತಂಡ ದ್ವಿತೀಯ ಸ್ಥಾನ ಗಳಿಸಿಕೊಂಡಿದೆ. ಪೆರಾಜೆಯ ಕುಂಬಳಚೇರಿಯ ಸರಕಾರಿ ಮಾದರಿ ಪ್ರಾಥಮಿಕ ಶಾಲಾ ಮೈದಾನದಲ್ಲಿ ನಡೆದ ಪಂದ್ಯಾವಳಿಯಲ್ಲಿ ನಾಗಬ್ರಹ್ಮ ಕೊಡಿಯಾಲ್ ತಂಡ ಪ್ರಥಮ ಸ್ಥಾನ ಪಡೆದರೆ, ಚೇರಂಬಾಣೆ ಗೌಡ ಮಹಿಳಾ ಒಕ್ಕೂಟದ ತಂಡ ದ್ವಿತೀಯ ಸ್ಥಾನವನ್ನು ಪಡೆದುಕೊಂಡು ನಗದು ಹಾಗೂ ಟ್ರೋಫಿಯನ್ನು ತನ್ನದಾಗಿಸಿಕೊಂಡಿತು.