ಮಡಿಕೇರಿ: ಮಡಿಕೇರಿ ಆಕಾಶವಾಣಿ ಕೇಂದ್ರದಲ್ಲಿ ೭೭ನೇ ಗಣರಾಜ್ಯೋತ್ಸವವನ್ನು ಸಂಭ್ರಮ, ಸಡಗರದಿಂದ ಆಚರಿಸಲಾಯಿತು. ನಿಲಯದ ಇಂಜಿನಿಯರಿAಗ್ ವಿಭಾಗದ ಮುಖ್ಯಸ್ಥ ಪಿ. ಆನಂದನ್ ಧ್ವಜಾರೋಹಣ ನೆರವೇರಿಸಿ ಮಾತನಾಡಿ, ಭಾರತದ ಸಂವಿಧಾನವು ಜಾರಿಗೆ ಬಂದು ಭಾರತವು ಗಣರಾಜ್ಯವಾದ ಈ ದಿನವು ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಅತ್ಯಂತ ಮಹತ್ವದ ದಿನವಾಗಿದೆ ಎಂದರು.
ಕಾರ್ಯಕ್ರಮ ನಿರ್ವಾಹಕ ಅಧಿಕಾರಿ ಎಂ. ಶಕುಂತಲಾ ಮಾತನಾಡಿ, ಸಂವಿಧಾನದ ಆಶಯಗಳನ್ನು ಜಾರಿಗೊಳಿಸುವಲ್ಲಿ ಶ್ರವ್ಯ ಮಾಧ್ಯಮವಾದ ಆಕಾಶವಾಣಿಯ ಪಾತ್ರ ಪ್ರಮುಖವಾಗಿದೆ ಎಂದರು.
ಇAಜಿನಿಯರಿAಗ್ ವಿಭಾಗದ ಕೆ.ಎಸ್. ಉದಯಕುಮಾರ್, ಎ. ರೆಂಜಿತ್ ಕುಮಾರ್, ಎ.ಎಸ್. ಸೋಮಶೇಖರ್ ಹಾಗೂ ಸಿಬ್ಬಂದಿಗಳಾದ ಟಿ. ಸಿದ್ದೋಜಿ ರಾವ್, ಪುರುಷೋತ್ತಮ, ಭದ್ರತಾ ಸಿಬ್ಬಂದಿಗಳಾದ ಸುಬ್ರಾಯ ಕಾಸ್ಪಾಡಿ, ಕೇಡನ ವಾಸು ಮತ್ತಿತರ ಸಿಬ್ಬಂದಿಗಳು ಈ ಸಂದರ್ಭ ಹಾಜರಿದ್ದರು.ಕಡಂಗ: ಚೇರಂಬಾಣೆಯ ಸ್ವಲಾಹುಲ್ ಇಸ್ಲಾಂ ಮದರಸಾ ವಿದ್ಯಾರ್ಥಿಗಳ ಮದರಸಾ ಅಂಗಣದಲ್ಲಿ ಗಣರಾಜ್ಯೋತ್ಸವ ಆಚರಿಸಲಾಯಿತು. ಜಮಾಅತ್ ಅಧ್ಯಕ್ಷರು ಧ್ವಜಾರೋಹಣ ನೆರವೇರಿಸಿದರು.
ರಾಷ್ಟçಗೀತೆಯೊಂದಿಗೆ ಕಾರ್ಯಕ್ರಮ ಪ್ರಾರಂಭಿಸಿ ಸಂವಿಧಾನ ಪೀಠಿಕೆ ಓದುವ ಮೂಲಕ ಮಕ್ಕಳಿಗೆ ಸಂವಿಧಾನದ ಬಗ್ಗೆ ಅರಿವು ಮೂಡಿಸಲಾಯಿತು. ಪ್ರಮುಖರು ದೇಶದ ಇತಿಹಾಸದ ಬಗ್ಗೆ ಸಂಕ್ಷಿಪ್ತವಾಗಿ ತಿಳಿಸಿದರು. ಜಮಾಅತ್ ಪದಾಧಿಕಾರಿಗಳು, ಪೋಷಕರು ಹೆಚ್ಚಿನ ಸಂಖ್ಯೆಯಲ್ಲಿ ಹಾಜರಿದ್ದರು. ಕೊನೆಯಲ್ಲಿ ಸಿಹಿ ಹಂಚಿ ಸಂತೋಷ ವ್ಯಕ್ತಪಡಿಸಲಾಯಿತು.ಕಣಿವೆ: ಗುಡ್ಡೆಹೊಸೂರು ಗ್ರಾ.ಪಂ. ವತಿಯಿಂದ ಗಣರಾಜ್ಯೋತ್ಸವ ಆಚರಿಸಲಾಯಿತು. ಪಂಚಾಯಿತಿ ಅಧ್ಯಕ್ಷೆ ಸೌಮ್ಯ ಧ್ವಜಾರೋಹಣ ನೆರವೇರಿಸಿದರು.
ಈ ಸಂದರ್ಭ ಗ್ರಾಮ ಪಂಚಾಯಿತಿ ವ್ಯಾಪ್ತಿಯ ವಿವಿಧ ಇಲಾಖೆಗೆ ಸಂಬAಧಿಸಿದ ಕಾರ್ಯಕ್ರಮಗಳನ್ನು ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸುವಲ್ಲಿ ಅಪಾರ ಶ್ರಮವಹಿಸಿ ಹೊಣೆಗಾರಿಕೆಯನ್ನು ಪ್ರದರ್ಶಿಸಿದ ಸಿಬ್ಬಂದಿಗಳನ್ನು ಗೌರವಿಸಲಾಯಿತು.
ಸಾರ್ವಜನಿಕ ಹಿತದೃಷ್ಟಿಯಿಂದ ಶಿಕ್ಷಣ, ಆರೋಗ್ಯ, ಚೆಸ್ಕಾಂ, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ, ಅಂಚೆ ಕಚೇರಿ, ಗ್ರಾಮೀಣ ಪುನರ್ ವಸತಿ ಕಾರ್ಯಕರ್ತರು ಹಾಗೂ ಗ್ರಾಮ ಪಂಚಾಯಿತಿಯ ಸ್ವಚ್ಛತಾ ಸಿಬ್ಬಂದಿಗಳನ್ನು ಗುರುತಿಸಿ ಇವರು ಸಲ್ಲಿಸುತ್ತಿರುವ ಸೇವೆಯನ್ನು ಗುರುತಿಸಿ ಪ್ರಶಂಸನಾ ಪತ್ರ ನೀಡಿ ಅಭಿನಂದಿಸಲಾಯಿತು.
ಇದೇ ಸಂದರ್ಭ ರಾಷ್ಟçಮಟ್ಟದಲ್ಲಿ ಸಾಧನೆ ಮಾಡಿದ ರಾಷ್ಟಿçÃಯ ಅಥ್ಲೆಟ್ ಮಾದಾಪಟ್ಟಣ ಗ್ರಾಮದ ಶೈಲ ಅವರನ್ನು ಸನ್ಮಾನಿಸಲಾಯಿತು.
ಕಾರ್ಯದರ್ಶಿ ಕುಮಾರಸ್ವಾಮಿ ಪ್ರ್ರಾಸ್ತಾವಿಕ ನುಡಿಗಳನ್ನಾಡಿದರೆ, ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಸುಮೇಶ್ ನಿರೂಪಿಸಿದರು. ವೇದಿಕೆಯಲ್ಲಿ ಉಪಾಧ್ಯಕ್ಷ ಪ್ರವೀಣ್ ಕುಮಾರ್ ಹಾಗೂ ಆಡಳಿತ ಮಂಡಳಿ ಸದಸ್ಯರು ಉಪಸ್ಥಿತರಿದ್ದರು.ಕಡಂಗ: ಗಣರಾಜ್ಯೋತ್ಸವವನ್ನು ಕಾರುಗುಂದ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಆಚರಿಸಲಾಯಿತು.
ಧ್ವಜಾರೋಹಣವನ್ನು ಮಾಜಿ ಸೈನಿಕ, ಹಾಲಿ ಪೊಲೀಸ್ ಇಲಾಖೆಯ ಸಿಬ್ಬಂದಿ ಉತ್ತಪ್ಪ ನೆರವೇರಿಸಿದರು. ರಾಷ್ಟçಗೀತೆಯೊಂದಿಗೆ ಕಾರ್ಯಕ್ರಮ ಪ್ರಾರಂಭಿಸಿ, ಶಾಲಾ ಮುಖ್ಯೋಪಾಧ್ಯಾಯರಾದ ಪರ್ವೀನ್ ದೇಶದ ಇತಿಹಾಸದ ಬಗ್ಗೆ ಮತ್ತು ಸಂವಿಧಾನ ಬಗ್ಗೆ ಸಂಕ್ಷಿಪ್ತವಾಗಿ ತಿಳಿಸಿದರು.ಮಡಿಕೇರಿ: ಅರೆಸೇನಾಪಡೆಯ ಮಾಜಿ ಯೋಧ ಕುಶಾಲನಗರದ ಹರೀಶ್ ಕುಮಾರ್ ಗೌಡ ಅವರು ಗಣರಾಜ್ಯೋತ್ಸವ ಅಂಗವಾಗಿ ಮಡಿಕೇರಿಯ ತನಲ್ ವೃದ್ಧಾಶ್ರಮಕ್ಕೆ ಇನ್ವರ್ಟರ್ ಅನ್ನು ಉದಾರವಾಗಿ ನೀಡಿದರು.
ಈ ಸಂದರ್ಭ ಅರೆಸೇನಾಪಡೆ ಒಕ್ಕೂಟದ ಸಂಚಾಲಕ ಭೀಮಯ್ಯ, ಕಾರ್ಯದರ್ಶಿ ರವೀಂದ್ರ ಇದ್ದರು. ನಿರ್ದೇಶಕ ಜಿ.ಕೆ. ದಿನೇಶ ಕುಮಾರ್ ಹಾಗೂ ತನಲ್ ವೃದ್ಧಾಶ್ರಮದ ವ್ಯವಸ್ಥಾಪಕರಿದ್ದರು.ಐಗೂರು: ಐಗೂರಿನ ಸರಕಾರಿ ಪದವಿಪೂರ್ವ ಕಾಲೇಜು ಮತ್ತು ಪ್ರೌಢಶಾಲಾ ವಿಭಾಗದ ಸಂಯುಕ್ತ ಆಶ್ರಯದಲ್ಲಿ ಕಾರ್ಯಕ್ರಮ ನಡೆಯಿತು. ಧ್ವಜಾರೋಹಣವನ್ನು ಸಾವಿತ್ರಿ ಪಾಲಾಕ್ಷ ನೆರವೇರಿಸಿದರು.
ದಿನದ ಮಹತ್ವವನ್ನು ಕುರಿತು ಅತಿಥಿಗಳು ಮತ್ತು ಅಧ್ಯಾಪಕ ವೃಂದದವರು ಮಾತನಾಡಿದರು. ವಿದ್ಯಾರ್ಥಿಗಳಿಂದ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯಿತು. ಕಾರ್ಯಕ್ರಮದಲ್ಲಿ ಕಾಲೇಜಿನ ಆಡಳಿತ ಮಂಡಳಿಯ ಉಪಾಧ್ಯಕ್ಷ ಎಸ್.ಎನ್. ಯೋಗೇಶ್, ನಿರ್ದೇಶಕ ಬಿ.ಬಿ. ಭರತ್ ಕುಮಾರ್, ಪ್ರಾಂಶುಪಾಲ ಉಮೇಶ್, ಮುಖ್ಯ ಶಿಕ್ಷಕ ಯಶ್ವಂತ್ ಕುಮಾರ್, ಎಸ್ಡಿಎಂಸಿ ಅಧ್ಯಕ್ಷ ವಸಂತ, ಮಾಜಿ ಗ್ರಾ.ಪಂ. ಅಧ್ಯಕ್ಷ ಕೆ.ಪಿ. ರಾಯ್, ಮಾಜಿ ಗ್ರಾ.ಪಂ. ಉಪಾಧ್ಯಕ್ಷ ಎಂ.ಎ. ಪ್ರಭಾಕರ, ಮಾಜಿ ಗ್ರಾ.ಪಂ. ಸದಸ್ಯ ಕೆ.ಪಿ. ಮುತ್ತಪ್ಪ, ಸೋಮಯ್ಯ ಮಾಸ್ಟರ್, ಐಗೂರು ಪ್ಯಾಕ್ಸ್ನ ಹೊನ್ನಪ್ಪ, ಹೈಸ್ಕೂಲು ಮತ್ತು ಕಾಲೇಜಿನ ಅಧ್ಯಾಪಕ ವೃಂದದವರು ಭಾಗವಹಿಸಿದ್ದರು.ಕಡಂಗ: ಅರಮೇರಿ ಎಸ್ಎಂಎಸ್ ವಿದ್ಯಾಸಂಸ್ಥೆ ಯಲ್ಲಿ ಗಣರಾಜ್ಯೋತ್ಸವ ಕಾರ್ಯಕ್ರಮವನ್ನು ಆಚರಿಸಲಾಯಿತು. ಧ್ವಜಾರೋಹಣವನ್ನು ಕಾಫಿ ಬೆಳೆಗಾರ ಕಂಡ್ರತAಡ ಪ್ರವೀಣ್ ಪೂವಯ್ಯ ನೆರವೇರಿಸಿದರು.
ಸಭಾ ಕಾರ್ಯಕ್ರಮದಲ್ಲಿ ವಿದ್ಯಾಸಂಸ್ಥೆಯ ಪ್ರಾಂಶುಪಾಲೆ ಕುಸುಮ್ ಟಿಟ್ಟೋ ಮಾತನಾಡಿ, ಗಣರಾಜ್ಯೋತ್ಸವ ಕುರಿತು ಸಂಕ್ಷಿಪ್ತವಾಗಿ ವಿವರಿಸಿದರು.
ಪ್ರವೀಣ್ ಪೂವಯ್ಯ ಮಾತನಾಡಿದರು. ಎಸ್ಎಂಎಸ್ ವಿದ್ಯಾಪೀಠದ ಶ್ರೀ ಶಾಂತ ಮಲ್ಲಿಕಾರ್ಜುನ ಸ್ವಾಮೀಜಿ ಮಾತನಾಡಿ, ಯುವಜನತೆ ಹಾಗೂ ವಿದ್ಯಾರ್ಥಿಗಳು ತಮ್ಮ ಜೀವನದಲ್ಲಿ ದೇಶಕ್ಕಾಗಿ ಏನಾದರು ಒಳ್ಳೆಯ ಕೊಡುಗೆಗಳನ್ನು ನೀಡಲು ಸಿದ್ಧರಿರಬೇಕೆಂದು ತಿಳಿಸಿದರು.
ಕಾರ್ಯಕ್ರಮದಲ್ಲಿ ಎನ್ಸಿಸಿ, ಸ್ಕೌಟ್ ಗೈಡ್ಸ್ ಮತ್ತು ಎಸ್ಎಂಎಸ್ ಬ್ಯಾಂಡ್ "ಪಾಂಚಜನ್ಯ", ನಡೆಸಿದ ಪೆರೇಡ್ ಆಕರ್ಷಕವಾಗಿತ್ತು. ಭಾರತದ ಸಂವಿಧಾನದ ಹಿನ್ನೆಲೆಯನ್ನು ತಿಳಿಸಿಕೊಟ್ಟ ರೂಪಕ ವಿಶೇಷವಾಗಿ ಗಮನ ಸೆಳೆಯಿತು. ನೇತ್ರಾವತಿ ಎಂ.ಎA. ನಿರೂಪಿಸಿ, ಸ್ವಾಗತಿಸಿದರು. ವೃಂದ ಅಯ್ಯಪ್ಪ ವಂದಿಸಿದರು.ಕಣಿವೆ: ಅತ್ತೂರು ಜ್ಞಾನಗಂಗಾ ವಸತಿ ಶಾಲೆಯಲ್ಲಿ ಕಾರ್ಯಕ್ರಮ ಜರುಗಿತು. ಕಾರ್ಗಿಲ್ ಯೋಧ ದೇವಂಗೋಡಿ ದೇವಯ್ಯ ಮುಖ್ಯ ಅತಿಥಿಯಾಗಿ ಪಾಲ್ಗೊಂಡು ಧ್ವಜಾರೋಹಣ ನೆರವೇರಿಸಿ ಮಾತನಾಡಿದರು.
ದೇಶದ ಗಡಿ ಕಾಯುವ ಸೈನಿಕರಿಗೆ ಸದಾ ಗೌರವ ಸಲ್ಲಿಸುವ ಜೊತೆಗೆ ಹೆತ್ತವರು ಹಾಗೂ ಶಿಕ್ಷಕರಿಗೆ ವಿಧೇಯರಾಗುವ ಮೂಲಕ ಉತ್ತಮ ಸಂಸ್ಕಾರಗಳನ್ನು ಬೆಳೆಸಿಕೊಳ್ಳಬೇಕೆಂದು ಕರೆಕೊಟ್ಟರು.
ವಸತಿ ಶಾಲೆಯ ಆಡಳಿತ ಮಂಡಳಿ ಅಧ್ಯಕ್ಷ ಟಿ.ಕೆ. ಸುಧೀರ್ ಮಾತನಾಡಿ, ದೇಶ ವಾಸಿಗಳು ಸರಿ ಇದ್ದರೆ ದೇಶ ಸರಿಯಾಗಿರುತ್ತದೆ. ದೇಶ ಅಭಿವೃದ್ಧಿ ಶೀಲ ರಾಷ್ಟçವಾಗುತ್ತದೆ ಎಂದರು.
ಶಾಲೆಯ ಕಾರ್ಯದರ್ಶಿ ಬಿ.ಎಸ್. ನಿಂಗಪ್ಪ ಮಾತನಾಡಿದರು. ಶಾಲೆಯ ಪ್ರಾಂಶುಪಾಲೆ ಸತ್ಯಸುಲೋಚನಾ, ಉಪಪ್ರಾಂಶುಪಾಲ ನಾಗರಾಜು ಇದ್ದರು. ಕಾರ್ಯಕ್ರಮದ ಬಳಿಕ ವಿದ್ಯಾರ್ಥಿಗಳಿಂದ ದೇಶಪ್ರೇಮ ಮೂಡಿಸುವ ವೈವಿಧ್ಯಮಯ ಸಾಂಸ್ಕೃತಿಕ ಕಾರ್ಯಕ್ರಮಗಳು ಜರುಗಿದವು. ವಿದ್ಯಾರ್ಥಿ ಕುಲದೀಪ್ ಸ್ವಾಗತಿಸಿದರು. ಯಶಿಕಾರಾಜ್ ನಿರೂಪಿಸಿದರು. ಹಿತೇನ್ ವಂದಿಸಿದರು.ಚೆಟ್ಟಳ್ಳಿ: ಚೆಟ್ಟಳ್ಳಿಯ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಗಣರಾಜ್ಯೋತ್ಸವವನ್ನು ಆಚರಿಸಲಾಯಿತು.
ಶಾಲೆಯ ಎಸ್ಡಿಎಂಸಿ ಅಧ್ಯಕ್ಷೆ ಪುಷ್ಪಾ ಅಧ್ಯಕ್ಷತೆ ವಹಿಸಿದ್ದರು.ಮುಖ್ಯ ಶಿಕ್ಷಕಿ ರಮಾ ಸ್ವಾಗತಿಸಿ, ಸಹಶಿಕ್ಷಕಿ ವಿಲಾಸಿನಿ ಕಾರ್ಯಕ್ರಮ ನಿರೂಪಿಸಿದರು. ಶಾಲಾ ಮಕ್ಕಳಿಂದ ಪಥಸಂಚಲನ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯುವ ಮೂಲಕ ಸಮಾರಂಭಕ್ಕೆ ಮೆರುಗು ನೀಡಿತು.
ಕಾರ್ಯಕ್ರಮದಲ್ಲಿ ಎಸ್ಡಿಎಂಸಿ ಸದಸ್ಯರು, ಪೋಷಕರು ಹಾಗೂ ಸಾರ್ವಜನಿಕರು ಭಾಗವಹಿಸಿದ್ದರು. ಶಿಕ್ಷಕಿ ಜಾಲಿ ಜಾಸ್ಪಿನಿ ವಂದನಾರ್ಪಣೆ ಸಲ್ಲಿಸಿದರು. ಈ ಸಂದರ್ಭ ಎಲ್ಲರೂ ಸಾಮೂಹಿಕವಾಗಿ ಸಂವಿಧಾನದ ಪ್ರಸ್ತಾವನೆಯನ್ನು ಪಠಿಸಿದರು. ನಂತರ ಮಕ್ಕಳಿಗೆ ಸಿಹಿ ಹಂಚಲಾಯಿತು.ಚೆಟ್ಟಳ್ಳಿ: ಚೆಟ್ಟಳ್ಳಿ ಗ್ರಾಮ ಪಂಚಾಯಿತಿ ವತಿಯಿಂದ ಗಣರಾಜ್ಯೋತ್ಸವವನ್ನು ಆಚರಿಸಲಾಯಿತು. ಗ್ರಾಮ ಪಂಚಾಯಿತಿ ಅಧ್ಯಕ್ಷೆ ಸಿಂಧೂ ಕೆ. ಧ್ವಜಾರೋಹಣ ನೆರವೇರಿಸಿದರು.
ಈ ಸಂದರ್ಭ ಉಪಾಧ್ಯಕ್ಷೆ ತಂಗಮ್ಮ, ಸದಸ್ಯರಾದ ಭಾಗೀರತಿ ಹಾಗೂ ಮಂಜುನಾಥ್, ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಕಲ್ಪಾ ಬಿ.ಎಂ., ಸಿಬ್ಬಂದಿವರ್ಗ ಹಾಗೂ ಸಾರ್ವಜನಿಕರು ಹಾಜರಿದ್ದರು.ಕೂಡಿಗೆ: ಕೂಡಿಗೆ ಗ್ರಾಮ ಪಂಚಾಯಿತಿ ವತಿಯಿಂದ ಧ್ವಜಾರೋಹವನ್ನು ಗ್ರಾಮ ಪಂಚಾಯಿತಿ ಅಧ್ಯಕ್ಷ ಕೆ.ಟಿ. ಗಿರೀಶ್ ನೆರವೇರಿಸಿ ದಿನದ ಮಹತ್ವದ ಬಗ್ಗೆ ತಿಳಿಸಿದರು.
ಈ ಸಂದರ್ಭ ಅಭಿವೃದ್ಧಿ ಅಧಿಕಾರಿ ಮಂಜುಳಾ, ಕಾರ್ಯದರ್ಶಿ ಪುನೀತ್ ಸೇರಿದಂತೆ ಸಿಬ್ಬಂದಿ ವರ್ಗದವರು ಹಾಜರಿದ್ದರು.ಕೂಡಿಗೆ: ಸೈನಿಕ ಶಾಲೆಯಲ್ಲಿ ಗಣರಾಜ್ಯೋತ್ಸವವನ್ನು ದೇಶಭಕ್ತಿಯ ಭಾವನೆಯೊಂದಿಗೆ ಶಾಲೆಯ ಜನರಲ್ ತಿಮ್ಮಯ್ಯ ಪೆರೇಡ್ ಮೈದಾನದಲ್ಲಿ ಆಚರಿಸಲಾಯಿತು.
ಈ ಕಾರ್ಯಕ್ರಮವು ಶಾಲೆಯ ಸಮೃದ್ಧ ಸೈನಿಕ ಪರಂಪರೆ, ರಾಷ್ಟç ಹಾಗೂ ಅದರ ಸಂವಿಧಾನದ ಮೇಲಿನ ಅಪಾರ ಗೌರವವನ್ನು ಪ್ರತಿಬಿಂಬಿಸುವAತಿತ್ತು. ಮುಖ್ಯ ಅತಿಥಿಗಳನ್ನು ಶಾಲೆಯ ಅಶ್ವದಳವು ಸ್ವಾಗತಿಸಿತು. ಮುಖ್ಯ ಅತಿಥಿಗಳಾಗಿ ಆಗಮಿಸಿದ ಪ್ರಬಾರ ಪ್ರಾಂಶುಪಾಲ ವಿಂಗ್ ಕಮಾಂಡರ್ ಪಿ. ಪ್ರಕಾಶ್ ರಾವ್ ಹಾಗೂ ಉಪಪ್ರಾಂಶುಪಾಲ ವಿಂಗ್ ಕಮಾಂಡರ್ ಮೊಹಮ್ಮದ್ ಶಾಲೆಯಲ್ಲಿನ ಯುದ್ಧ ಸ್ಮಾರಕಕ್ಕೆ ಪುಷ್ಪಗುಚ್ಛವನ್ನು ಅರ್ಪಿಸುವುದರ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.
ಧ್ವಜಾರೋಹಣ ನೆರವೇರಿಸುವುದರೊಂದಿಗೆ ನೆರೆದಿದ್ದ ಸಭಿಕರು ರಾಷ್ಟçಗೀತೆಯ ಗಾಯನ ಮಾಡಿದರು. ಪಥಸಂಚಲನದ ನಾಯಕ ಕೆಡೆಟ್ ಪ್ರಿಯಾಂಶು ಯಾದವ್ ಗೌರವ ವಂದನೆ ಸಲ್ಲಿಸಿದರು. ಪಥಸಂಚಲನದ ಸಮೀಕ್ಷಾ ಕ್ರಮದ ನಂತರ ಶಾಲೆಯ ಸಂಗೀತ ಕ್ಲಬ್ ಸದಸ್ಯರಿಂದ ಗಾಯನ ಮಾಡಲಾದ ‘ವಂದೇ ಮಾತರಂ’ ಗೀತೆಯು ಸಭಿಕರ ಮನಸೆಳೆಯಿತು.
ಈ ಸಂದರ್ಭದಲ್ಲಿ ಇಂಗ್ಲಿಷ್ ಭಾಷಾ ವಿಭಾಗದ ಪಿಜಿಟಿ ಶಿಕ್ಷಕಿ ಶ್ರೀಲೇಖಾ ವಿ.ಎಸ್. ಹಾಗೂ ಸಾಮಾನ್ಯ ನೌಕರ ವರ್ಗದ ಮುರಳಿ ಎಸ್.ಜಿ. ಅವರಿಗೆ ಶಾಲೆಯಲ್ಲಿ ಸಲ್ಲಿಸಿದ ಅನುಪಮ ಸೇವೆ ಮತ್ತು ಸಮರ್ಪಣೆಯ ಪ್ರತೀಕವಾಗಿ ಎಲ್.ಬಿ.ಎ. ಅಧ್ಯಕ್ಷರ ಪ್ರಶಂಸನಾ ಪ್ರಮಾಣ ಪತ್ರವನ್ನು ನೀಡಿ ಗೌರವಿಸಲಾಯಿತು.
ವಿದ್ಯಾರ್ಥಿಗಳ ಪಥಸಂಚಲನ ತಂಡವು ಮಡಿಕೇರಿಯಲ್ಲಿ ನಡೆದ ಗಣರಾಜ್ಯೋತ್ಸವ ಪಥಸಂಚಲನದಲ್ಲಿ ಪ್ರದರ್ಶನ ನೀಡಿದಕ್ಕಾಗಿ ಕೊಡಗು ಜಿಲ್ಲಾ ಉಸ್ತುವಾರಿ ಸಚಿವರಿಂದ ಗಣರಾಜ್ಯೋತ್ಸವ ಪರೇಡ್ ಶ್ರೇಷ್ಠತಾ ಪಾರಿತೋಷಕವನ್ನು ಸ್ವೀಕರಿಸಿದ ಬಗ್ಗೆ ಶ್ಲಾಘಿಸಲಾಯಿತು.
ಶಾಲೆಯ ಪ್ರಥಮ ಮಹಿಳೆ ದಿವ್ಯಾ ಸಿಂಗ್, ಶಾಲಿನಿ ರಾವ್, ಶಾಲಾ ವೈದ್ಯಾಧಿಕಾರಿ, ಹಿರಿಯ ಶಿಕ್ಷಕರು, ಬೋಧಕ-ಬೋಧಕೇತರ ಸಿಬ್ಬಂದಿ ವರ್ಗ, ಎನ್ಸಿಸಿ, ದೈಹಿಕ ಶಿಕ್ಷಣ ಶಿಕ್ಷಕರು ಹಾಗೂ ಶಾಲೆಯ ವಿದ್ಯಾರ್ಥಿಗಳು ಹಾಜರಿದ್ದರು.ಶನಿವಾರಸಂತೆ: ಪಟ್ಟಣದ ನಿವೃತ್ತ ಸೈನಿಕರ ಸಂಘದ ವತಿಯಿಂದ ಗಣರಾಜ್ಯೋತ್ಸವವನ್ನು ಆಚರಿಸಲಾಯಿತು.
ಸಂಘದ ಅಧ್ಯಕ್ಷ ಎ.ಎಸ್. ಮಹೇಶ್ ಧ್ವಜಾರೋಹಣ ನೆರವೇರಿಸಿ, ಧ್ವಜವಂದನೆ ಸಲ್ಲಿಸಿದರು. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಅವರು ಮಾತನಾಡಿ, ಡಾ. ಬಿ.ಆರ್. ಅಂಬೇಡ್ಕರ್ ಅವರೊಂದಿಗೆ ನಮ್ಮ ಸಂವಿಧಾನವನ್ನು ಯಾವಾಗಲು ಸ್ಮರಿಸಬೇಕು ಎಂದರು. ಸಂಘದ ಕಾರ್ಯದರ್ಶಿ ಎಸ್.ಎನ್. ಪಾಂಡು ಮಾತನಾಡಿ, ನಮ್ಮ ದೇಶವು ಸ್ವತಂತ್ರ ಗಣರಾಜ್ಯ ರಾಷ್ಟ್ರವಾದ ಐತಿಹಾಸಿಕ ದಿನವನ್ನು ಸ್ಮರಿಸಲು ಗಣರಾಜ್ಯೋತ್ಸವವನ್ನು ಆಚರಿಸಲಾಗುತ್ತಿದೆ ಎಂದರು.
ಸದಸ್ಯರಾದ ಕೆ.ವಿ. ಮಂಜುನಾಥ್ ಹಾಗೂ ರಾಜು ದಿನದ ಮಹತ್ವದ ಕುರಿತು ಮಾತನಾಡಿ, ವಿಶ್ವದಲ್ಲೇ ಭಾರತದ ಸಂವಿಧಾನ ಶ್ರೇಷ್ಠ ಸಂವಿಧಾನವಾಗಿದೆ ಎಂದು ಹೇಳಿದರಲ್ಲದೇ ಯೋಧರಾಗಿ ತಮ್ಮ ಅನುಭವಗಳನ್ನು ಹಂಚಿಕೊAಡರು. ನಿರ್ದೇಶಕರಾದ ಕೆ.ಪಿ. ತಿಮ್ಮಯ್ಯ, ಬಿ.ಡಿ. ಪರಮೇಶ್, ಹೆಚ್.ಪಿ. ಮಹೇಶ್, ಪಿ. ತಿಮ್ಮಯ್ಯ, ಚಂದ್ರಪ್ಪ, ಬಿ.ಆರ್. ಆನಂದ್, ಗಣೇಶ್ ಉಪಸ್ಥಿತರಿದ್ದರು. ಎಸ್.ಎನ್. ಪಾಂಡು ಕಾರ್ಯಕ್ರಮ ನಿರ್ವಹಿಸಿದರು.ಮಡಿಕೇರಿ: ಮದೆನಾಡು ಸಮೀಪದ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಗೋಳಿಕಟ್ಟೆಯಲ್ಲಿ ೭೭ನೇ ಗಣರಾಜ್ಯೋತ್ಸವ ಸಡಗರದಿಂದ ಆಚರಿಸಲಾಯಿತು. ಶಾಲಾ ಎಸ್.ಡಿ.ಎಂ.ಸಿ. ಅಧ್ಯಕ್ಷ ಪಿ.ಯು. ಸುಂದರ ಧ್ವಜಾರೋಹಣ ನೆರವೇರಿಸಿದರು. ದಿನದ ವಿಶೇಷತೆ ಮತ್ತು ಮಹತ್ವವನ್ನು ಶಾಲಾ ಮುಖ್ಯ ಶಿಕ್ಷಕ ಕೆ.ಕೆ. ಬಾಲಕೃಷ್ಣ ವಿವರಿಸಿದರು. ನಂತರ ಮಕ್ಕಳಿಂದ ವಿವಿಧ ಕಾರ್ಯಕ್ರಮಗಳು ನಡೆಯಿತು. ಕಾರ್ಯಕ್ರಮವನ್ನು ಮುಖ್ಯ ಶಿಕ್ಷಕ ಕೆ.ಕೆ. ಬಾಲಕೃಷ್ಣ ನಡೆಸಿಕೊಟ್ಟರು.ಕುಶಾಲನಗರ: ಕುಶಾಲನಗರ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದ ಕಚೇರಿಯಲ್ಲಿ ಸಂಘದ ಅಧ್ಯಕ್ಷ ಎಂ.ಎನ್. ಚಂದ್ರಮೋಹನ್ ಧ್ವಜಾರೋಹಣ ನೆರವೇರಿಸಿ ದಿನದ ಮಹತ್ವದ ಬಗ್ಗೆ ಮಾತನಾಡಿದರು.
ಈ ಸಂದರ್ಭ ಸಂಘದ ಜಿಲ್ಲಾ ಉಪಾಧ್ಯಕ್ಷೆ ವನಿತಾ ಚಂದ್ರಮೋಹನ್, ತಾಲೂಕು ಸಂಘದ ಕಾರ್ಯದರ್ಶಿ ಕೆ.ಕೆ. ನಾಗರಾಜ ಶೆಟ್ಟಿ, ನಿರ್ದೇಶಕರಾದ ಕುಡೆಕಲ್ ಗಣೇಶ್, ಚೈತನ್ಯ, ಹಿರಿಯ ಸದಸ್ಯರಾದ ಸಬಲಂ ಭೋಜಣ್ಣ ರೆಡ್ಡಿ, ಪ್ರದೀಪ್ ಕುಮಾರ್ ಇದ್ದರು.