ಮಡಿಕೇರಿ, ಜ. ೨೮: ಕ್ರೀಡೆಯಲ್ಲಿ ಭಾಗವಹಿಸುವ ಆಟಗಾರರಲ್ಲಿ ಕ್ರೀಡಾಸ್ಫೂರ್ತಿ ಇರಬೇಕೆಂದು ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರು, ಶಾಸಕ ಎ.ಎಸ್.ಪೊನ್ನಣ್ಣ ಹೇಳಿದರು.
ಭಾಗಮಂಡಲ ಹೋಬಳಿಯ ಚೆಟ್ಟಿಮಾನಿಯ ಶಾಲಾ ಮೈದಾನದಲ್ಲಿ ಆಯೋಜನೆಗೊಂಡ ಚೆಟ್ಟಿಮಾನಿ ಪ್ರೀಮಿಯರ್ ಲೀಗ್ ಕ್ರಿಕೆಟ್ ಪಂದ್ಯಾವಳಿಯಲ್ಲಿ ಮುಖ್ಯ ಅತಿಥಿಯಾಗಿ ಭಾಗವಹಿಸಿ ಮಾತನಾಡಿದ ಶಾಸಕರು, ಪಂದ್ಯಾಟದಲ್ಲಿ ಭಾಗವಹಿಸಿದವರೆಲ್ಲರೂ ಕ್ರೀಡಾ ಸ್ಪೂರ್ತಿಯಿಂದ ಕ್ರೀಡೆಯನ್ನು ಆನಂದಿಸಿ ಗೆಲುವನ್ನು ತಮ್ಮದಾಗಿಸಿ ಕೊಳ್ಳಲು ಪ್ರಯತ್ನಿಸಬೇಕು. ಪಂದ್ಯಾಟವನ್ನು ಕ್ರೀಡಾ ಸ್ಪೂರ್ತಿಯಲ್ಲಿ ತೆಗೆದುಕೊಂಡು ಸೋಲು ಗೆಲುವನ್ನು ಸಮಾನ ಮನಸ್ಥಿತಿಯಲ್ಲಿ ಸ್ವೀಕಾರ ಮಾಡುವ ಮನೋಭಾವವನ್ನು ಬೆಳೆಸಿಕೊಳ್ಳುವುದು ನಿಜವಾದ ಕ್ರೀಡಾ ಸ್ಪೂರ್ತಿ ಎಂದು ಹೇಳಿದರು. ಈ ಸಂದರ್ಭದಲ್ಲಿ ನಾಪೋಕ್ಲು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಇಸ್ಮಾಯಿಲ್, ವಲಯ ಅಧ್ಯಕ್ಷ ಕೀರ್ತಿ ಉತ್ತಪ್ಪ, ಕಾರ್ಯಕ್ರಮ ಆಯೋಜಕರು ಬ್ಲೂ ಸ್ಟಾರ್ ಅಧ್ಯಕ್ಷ ಸರ್ಫುದ್ದಿನ್, ಪಕ್ಷದ ಮುಖಂಡ ಸೂರಜ್ ಹೊಸೂರು, ಸುನಿಲ್ ಪತ್ರಾವೋ, ಪ್ರಕಾಶ್, ಹರ್ಷ, ಯುವ ಕಾಂಗ್ರೆಸ್ ಉಪಾಧ್ಯಕ್ಷ ಮೈಸಿ ಕತ್ತಣಿರ, ನಾಪೋಕ್ಲು ಯುವ ಕಾಂಗ್ರೆಸ್ ಅಧ್ಯಕ್ಷ ಹಂಸ ಕೋಡಿ, ಗೌರೀಶ್, ರಶೀದ್, ರಿಷಿ ಕೆದಂಬಾಡಿ, ಸುಹೈದ್ ಹಾಗೂ ಕ್ರೀಡಾ ಪ್ರೇಮಿಗಳು ಇದ್ದರು.