ಕೆ.ಎಂ ಇಸ್ಮಾಯಿಲ್ ಕಂಡಕರೆ
ಮಡಿಕೇರಿ, ಜ. ೨೯: ರಾಜ್ಯದಲ್ಲಿ ಕಳೆದ ನಾಲ್ಕು ವರ್ಷಗಳಿಂದ ಜಿಲ್ಲಾ ಮತ್ತು ತಾಲೂಕು ಪಂಚಾಯಿತಿ ಚುನಾವಣಾ ಮೀಸಲಾತಿ ಸಂಬAಧ ಹೈಕೋರ್ಟ್ನಲ್ಲಿ ವಾದ-ಪ್ರತಿವಾದ ನಡೆಯುತ್ತಲೇ ಇದೆ. ೨೦೨೧ರಲ್ಲಿ ರಾಜ್ಯ ಸರ್ಕಾರವು, ರಾಜ್ಯ ಚುನಾವಣಾ ಆಯೋಗದಿಂದ ಸ್ಥಳೀಯ ಸಂಸ್ಥೆಗಳ ಚುನಾವಣೆಗೆ ಮೀಸಲು ನಿಗದಿಪಡಿಸುವ ಅಧಿಕಾರ ಕಿತ್ತುಕೊಂಡ ಬಳಿಕ ಮೀಸಲಾತಿ ನಿಗದಿಪಡಿಸುವ ಕುರಿತು ನ್ಯಾಯಾಲಯದಲ್ಲಿ ವಾದ ನಡೆಯುತ್ತಿದೆ.ಜಿಲ್ಲಾ ಮತ್ತು ತಾಲ್ಲೂಕು ಪಂಚಾಯತ್ ಮೀಸಲಾತಿ ಸಂಬAಧಿಸಿದAತೆ ಇಂದಿಗೂ ಕೂಡ ನ್ಯಾಯಾಲಯದಲ್ಲಿ ನ್ಯಾಯಾಂಗ ನಿಂದನೆ ಅರ್ಜಿ ವಾದ ನಡೆಯುತ್ತಿದೆ.
ಜಿಲ್ಲಾ ಮತ್ತು ತಾಲೂಕು ಪಂಚಾಯಿತಿ ಮೀಸಲಾತಿ ಸಂಬAಧ ರಾಜ್ಯ ಚುನಾವಣಾ ಆಯೋಗ ರಾಜ್ಯ ಸರ್ಕಾರದ ವಿರುದ್ಧ ನ್ಯಾಯಾಂಗನಿAದನೆ ಅರ್ಜಿ ಸಲ್ಲಿಸಿದ್ದು, ತಾ. ೩೦ ರಂದು ಹೈಕೋರ್ಟ್ನಲ್ಲಿ ಅರ್ಜಿ ವಿಚಾರಣೆಗೆ ಬರಲಿದೆ. ಏತನ್ಮಧ್ಯೆ ಇದೀಗ ಗ್ರಾ.ಪಂ ಮತ್ತು ಸ್ಥಳೀಯ ಸಂಸ್ಥೆಗಳಿಗೆ ಮೀಸಲು ನಿಗದಿಪಡಿಸುವ ಕುರಿತು ರಾಜ್ಯ ಸರ್ಕಾರ ಮತ್ತು ರಾಜ್ಯ ಚುನಾವಣಾ ಆಯೋಗದ ಮಧ್ಯೆ ಹೈಕೋರ್ಟ್ನಲ್ಲಿ ವಾದ ನಡೆಯುತ್ತಿದೆ.
ರಾಜ್ಯದಲ್ಲಿ ಚುನಾವಣೆ ನಡೆಯಬೇಕಿರುವ ಗ್ರಾಮ ಪಂಚಾಯಿತಿಗಳ ಸದಸ್ಯ ಸ್ಥಾನಗಳಿಗೆ ಹಾಗೂ ನಗರ ಸ್ಥಳೀಯ ಸಂಸ್ಥೆಗಳಿಗೆ ವಾರ್ಡ್ವಾರು ಮೀಸಲಾತಿ ನಿಗದಿಪಡಿಸುವ ಸಂಬAಧ ಉತ್ತರಿಸಲು ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ಬುಧವಾರ ಅಂತಿಮ ಗಡುವು ನೀಡಿದೆ. ‘ಚುನಾವಣೆಗಾಗಿ ಮೀಸಲಾತಿ ಅಧಿಸೂಚನೆ ಹೊರಡಿಸುವ ನಿಟ್ಟಿನಲ್ಲಿ ಕ್ರಮ ಕೈಗೊಳ್ಳಲು ಸರ್ಕಾರಕ್ಕೆ ನಿರ್ದೇಶಿಸಬೇಕು’ ಎಂದು ಕೋರಿ ರಾಜ್ಯ ಚುನಾವಣಾ ಆಯೋಗ ಸಲ್ಲಿಸಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಮುಖ್ಯ ನ್ಯಾಯಮೂರ್ತಿ ವಿಭು ಬಬ್ರು ನೇತೃತ್ವದ ವಿಭಾಗೀಯ ನ್ಯಾಯಪೀಠ ಬುಧವಾರ ವಿಚಾರಣೆ ನಡೆಸಿತು.
ವಿಚಾರಣೆ ವೇಳೆ ರಾಜ್ಯ ಚುನಾವಣಾ ಆಯೋಗದ ಪರ ಪದಾಂಕಿತ ಹಿರಿಯ ವಕೀಲ ಕೆ.ಎನ್. ಫಣೀಂದ್ರ, ‘ರಾಜ್ಯದಲ್ಲಿನ ೧೮೭ ನಗರ ಸ್ಥಳೀಯ ಸಂಸ್ಥೆಗಳ ಅವಧಿ ಈಗಾಗಲೇ ಪೂರ್ಣಗೊಂಡಿದೆ. ಬಹುತೇಕ ಗ್ರಾಮ ಪಂಚಾಯಿತಿಗಳ ಅವಧಿ ಮಾಸಾಂತ್ಯದಲ್ಲಿ ಪೂರ್ಣಗೊಳ್ಳಲಿದೆ. ಸಕಾಲದಲ್ಲಿ ಚುನಾವಣೆ ನಡೆಸಲು ಮೀಸಲಾತಿ ನಿಗದಿಪಡಿಸುವುದು ರಾಜ್ಯ ಸರ್ಕಾರದ ಜವಾಬ್ದಾರಿ. ಚುನಾವಣೆ ನಡೆಸುವುದು ರಾಜ್ಯ ಚುನಾವಣಾ ಆಯೋಗದ ಹೊಣೆಗಾರಿಕೆ. ಮೀಸಲಾತಿ ಅಂತಿಮಗೊಳ್ಳುವ ತನಕ ಚುನಾವಣಾ ದಿನಾಂಕ ಘೋಷಿಸಲು ಸಾಧ್ಯವಿಲ್ಲ. ಮೀಸಲಾತಿ ಅಧಿಸೂಚನೆ ಹೊರಡಿಸುವಂತೆ ರಾಜ್ಯ ಸರ್ಕಾರಕ್ಕೆ ಹಲವು ಬಾರಿ ಮನವಿ ಮಾಡಿದರೂ ಪ್ರಯೋಜನವಾಗಿಲ್ಲ’ ಎಂದು ಆಕ್ಷೇಪಿಸಿದರು.
ರಾಜ್ಯದಲ್ಲಿ ಸುಮಾರು ೬ ಸಾವಿರ ಗ್ರಾಮ ಪಂಚಾಯಿತಿ ಹಾಗೂ ೧೮೭ ನಗರ ಸ್ಥಳೀಯ ಸಂಸ್ಥೆಗಳಿಗೆ ಚುನಾವಣೆ ನಡೆಸಬೇಕಿದೆ. ಅವಧಿ ಪೂರ್ಣಗೊಂಡಿರುವ ಎಲ್ಲಾ ನಗರ ಸ್ಥಳೀಯ ಸಂಸ್ಥೆಗಳಿಗೆ ಈಗಾಗಲೇ ಆಡಳಿತಾಧಿಕಾರಿ ನೇಮಕ ಮಾಡಲಾಗಿದೆ’ ಎಂದು ನ್ಯಾಯಪೀಠಕ್ಕೆ ವಿವರಿಸಿದರು. ಇದಕ್ಕೆ ಪ್ರತಿಯಾಗಿ ರಾಜ್ಯ ಸರ್ಕಾರದ ಪರ ವಕೀಲರು, ಮೀಸಲಾತಿ ನಿಗದಿಪಡಿಸುವ ಸಂಬAಧ ಎಲ್ಲಾ ಜಿಲ್ಲಾಧಿಕಾರಿಗಳಿಗೆ ಈಗಾಗಲೇ ನಿರ್ದೇಶನ ನೀಡಲಾಗಿದೆ. ಅರ್ಜಿ ವಿಚಾರಣೆಯನ್ನು ಅಲ್ಪಾವಧಿಗೆ ಮುಂದೂಡಬೇಕು’ ಎಂದು ನ್ಯಾಯಪೀಠಕ್ಕೆ ಮನವಿ ಮಾಡಿದರು. ಇದನ್ನು ಮಾನ್ಯ ಮಾಡಿದ ನ್ಯಾಯಪೀಠ, ಅರ್ಜಿಗೆ ಸಂಬAಧಿಸಿದAತೆ ಉತ್ತರಿಸಲು ಅಂತಿಮ ಕಾಲಾವಕಾಶ ನೀಡಿ ವಿಚಾರಣೆಯನ್ನು ಫೆಬ್ರವರಿ ೫ಕ್ಕೆ ಮುಂದೂಡಿತು.
ಮೀಸಲಾತಿ ನೆಪ, ಮುಂದೂಡಲ್ಪಟ್ಟ ಚುನಾವಣೆ
ರಾಜ್ಯದ ಗ್ರಾಮ ಪಂಚಾಯಿತಿಗಳ ಚುನಾಯಿತ ಅವಧಿ ಈ ಮಾಸಾಂತ್ಯಕ್ಕೆ ಮುಕ್ತಾಯ ವಾಗಲಿದೆ. ಜತೆಗೆ, ಅವಧಿ ಪೂರ್ಣಗೊಂಡಿರುವ ೧೮೭ ನಗರ ಸ್ಥಳೀಯ ಸಂಸ್ಥೆಗಳಿಗೂ (೪೭ ನಗರಸಭೆ, ೯೧ ಪುರಸಭೆ, ೪೯ ಪಟ್ಟಣ ಪಂಚಾಯಿತಿ) ಚುನಾವಣೆ ನಡೆಸಬೇಕಿದೆ. ಮುಂದಿನ ಅವಧಿಗೆ ಹೊಸದಾಗಿ ಚುನಾವಣೆ ನಡೆಸಬೇಕಾದರೆ ಮೀಸಲಾತಿ ನಿಗದಿಯಾಗಬೇಕಿದೆ. ಮೀಸಲಾತಿ ಅಧಿಸೂಚನೆ ಹೊರಡಿಸುವಂತೆ ರಾಜ್ಯ ಸರ್ಕಾರಕ್ಕೆ ಹಲವು ಬಾರಿ ಮನವಿ ಮಾಡಿದರೂ, ಯಾವುದೇ ಪ್ರತಿಕ್ರಿಯೆ ಬಂದಿಲ್ಲ. ಆದ್ದರಿಂದ, ಸರ್ಕಾರಕ್ಕೆ ಈ ನಿಟ್ಟಿನಲ್ಲಿ ಸೂಕ್ತ ನಿರ್ದೇಶನ ನೀಡಬೇಕು’ ಎಂದು ಚುನಾವಣಾ ಆಯೋಗ ಮನವಿ ಮಾಡಿದೆ.